ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ಬಿಜೆಪಿಗೆ ಭಾರಿ ಮುಖ ಭಂಗ..! ರಾಮ ಜನ್ಮ ಭೂಮಿಯಲ್ಲಿ ಭವ್ಯ ರಾಮಮಂದಿರ ನಿರ್ಮಾಣದ ಮೂಲಕ ಲೋಕಸಭಾ ಚುನಾವಣೆಗೆ ಹೋಗಿದ್ದ ಬಿಜೆಪಿಗೆ ಈಗ ಭಾರಿ ಮುಖಭಂಗವಾಗಿದೆ. ನವದೆಹಲಿ:ರಾಮ ಜನ್ಮ ಭೂಮಿಯಲ್ಲಿ ಭವ್ಯ ರಾಮಮಂದಿರ ನಿರ್ಮಾಣದ ಮೂಲಕ ಲೋಕಸಭಾ ಚುನಾವಣೆಗೆ ಹೋಗಿದ್ದ ಬಿಜೆಪಿಗೆ ಈಗ ಭಾರಿ ಮುಖಭಂಗವಾಗಿದೆ. ಫೈಜಾಬಾದ್ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಅಯೋಧ್ಯೆ ಪ್ರಮುಖವಾಗಿ ಬಿಜೆಪಿಯ ರಾಜಕೀಯ ವಸ್ತುವಾಗಿತ್ತು, ಈಗ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದ ಲಲ್ಲುಸಿಂಗ್ ಅವರು ಎಸ್ಪಿ ಅಭ್ಯರ್ಥಿಯಾದ ಅವಧೇಶ್ ಪ್ರಸಾದ್ ಅವರ ವಿರುದ್ಧ ಸೋಲನ್ನು ಅನುಭವಿಸಿದ್ದಾರೆ. ಅಚ್ಚರಿ ಎಂದರೆ ಚುನಾವಣಾ ಪ್ರಚಾರದುದ್ದಕ್ಕೂ ರಾಮಮಂದಿರದ ನಿರ್ಮಾಣದ ಜಪ ಮಾಡಿದ್ದ ಬಿಜೆಪಿ ನಾಯಕರಿಗೆ ಈಗ ಫೈಜಾಬಾದ್ ಲೋಕಸಭಾ ಕ್ಷೇತ್ರದ ಸೋಲಿನೊಂದಿಗೆ ಭಾರಿ ಮುಖಭಂಗ ಅನುಭವಿಸಿದಂತಾಗಿದೆ. ಈಗ ತಮ್ಮ ಚುನಾವಣಾ ಫಲಿತಾಂಶದ ಬಗ್ಗೆ ಪ್ರತಿಕ್ರಿಯಿಸಿರುವ ಭಾರತೀಯ ಜನತಾ ಪಕ್ಷದ (ಬಿಜೆಪಿ) ಫೈಜಾಬಾದ್‌ನ ಹಾಲಿ ಸಂಸದ ಲಲ್ಲು ಸಿಂಗ್ ಅವರು ಸಮಾಜವಾದಿ ಪಕ್ಷದ ಅಭ್ಯರ್ಥಿ ಅವಧೇಶ್ ಪ್ರಸಾದ್‌ ವಿರುದ್ಧ ಸೋಲನ್ನು ಒಪ್ಪಿಕೊಂಡಿದ್ದಾರೆ, "ಹಮ್ ಆಪ್ಕಾ ಸಮ್ಮಾನ್ ನಹಿ ಬಚಾ ಪಾಯೆ (ನಿಮ್ಮ ಗೌರವವನ್ನು ನಾವು ಉಳಿಸಲು ಸಾಧ್ಯವಾಗಲಿಲ್ಲ)" ಎಂದು ಹೇಳಿದ್ದಾರೆ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...