2024: ಅಮೇಥಿಯಲ್ಲಿ ಸ್ಮೃತಿ ಇರಾನಿಗೆ ಸೋಲು, ಹೈದರಾಬಾದ್‌ನಲ್ಲಿ ಓವೈಸಿಗೆ ಗೆಲುವು! 2024: ಉತ್ತರ ಪ್ರದೇಶದ ಹೈ ಪ್ರೊಫೈಲ್ ಕ್ಷೇತ್ರ ಅಮೇಥಿಯಲ್ಲಿ ಬಿಜೆಪಿಯ ಸ್ಮೃತಿ ಇರಾನಿಯವರು ತಮ್ಮ ಪ್ರತಿಸ್ಪರ್ಧಿ ಅಭ್ಯರ್ಥಿ ಕಾಂಗ್ರೆಸ್‌ನ ಕಿಶೋರಿ ಲಾಲ್ ಶರ್ಮಾ ಅವರಿಗಿಂತ ಬಹಳ ಹಿಂದುಳಿದಿದ್ದಾರೆ. ಸ್ಮೃತಿ ಇರಾನಿ ೩ನೇ ಬಾರಿಗೆ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ 2024:ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಬಿಜೆಪಿ ನೇತೃತ್ವದ ಮೈತ್ರಿಕೂಟ ಮುನ್ನಡೆ ಸಾಧಿಸುತ್ತಿದೆ. ಆದರೆ ಪ್ರಧಾನಿ ಮೋದಿಯವರ ʼಚಾರ್‌ ಸೌ ಪಾರ್‌ʼ ಸಾಧ್ಯವಾಗುಂತೆ ಕಾಣುತ್ತಿಲ್ಲ. ಮಧ್ಯಾಹ್ನ 2 ಗಂಟೆಯ ವೇಳೆಗೆ 543 ಕ್ಷೇತ್ರಗಳ ಪೈಕಿ ಬಿಜೆಪಿ ನೇತೃತ್ವದ ಮೈತ್ರಿಕೂಟವು 300 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಕಾಂಗ್ರೆಸ್‌ ನೇತೃತ್ವದ ಇಂಡಿಯಾ ಮೈತ್ರಿಕೂಟವು 225ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ತುಕೊಂಡಿದೆ. 18 ಕ್ಷೇತ್ರಗಳಲ್ಲಿ ಇತರ ಅಭ್ಯರ್ಥಿಗಳು ಮುನ್ನಡೆ ಕಾಯ್ದುಕೊಂಡಿದ್ದಾರೆ. ಈ ಬಾರಿಯೂಫಲಿತಾಂಶ ತೀವ್ರ ಕುತೂಹಲ ಕೆರಳಿಸಿದೆ. ಅನೇಕ ಘಟಾನುಘಟಿ ನಾಯಕರು ಸೋಲು ಕಾಣುತ್ತಿದ್ದು, ಕೆಲವು ಕ್ಷೇತ್ರಗಳಲ್ಲಿ ಹಿನ್ನಡೆ ಕೂಡ ಅನುಭವಿಸಿದ್ದಾರೆ. ಹೈಪ್ರೋಪೈಲ್ ಕ್ಷೇತ್ರಗಳು ಎನಿಸಿಕೊಂಡಿರುವ ಕ್ಷೇತ್ರಗಳ ಫಲಿತಾಂಶ ಹೇಗಿದೆ? ಯಾವ ಅಭ್ಯರ್ಥಿಗಳು ಮುನ್ನಡೆ ಕಾಯ್ದುಕೊಂಡಿದ್ದಾರೆ? ಯಾರಿಗೆ ಹಿನ್ನಡೆಯಾಗಿದೆ ಅನ್ನೋದರ ಮಾಹಿತಿ ಇಲ್ಲಿದೆ ನೋಡಿ. ಇದನ್ನೂಓದಿ: ಅರುಣ್ ಗೋವಿಲ್ ಉತ್ತರ ಪ್ರದೇಶದ ಮೀರತ್ ಲೋಕಸಭಾ ಕ್ಷೇತ್ರದಲ್ಲಿ ಮಧ್ಯಾಹ್ನ 2 ಗಂಟೆಯವರೆಗೆ ಬಿಜೆಪಿಯ ಅರುಣ್ ಗೋವಿಲ್ 8,049 ಸಾವಿರ ಮತಗಳಿಂದ ಹಿಂದುಳಿದಿದ್ದಾರೆ. ಅಂಚೆ ಮತಗಳ ಎಣಿಕೆಯಲ್ಲಿ ಆರಂಭದಲ್ಲಿ ಮುನ್ನಡೆ ಸಾಧಿಸಿದ್ದ ಅರುಣ್ ಗೋವಿಲ್ ಇವಿಎಂಗಳ ಎಣಿಕೆ ಆರಂಭವಾದ ಕೂಡಲೇ ಹಿನ್ನಡೆ ಅನುಭವಿಸಿದರು. ಎಸ್‌ಪಿಯ ಸುನೀತಾ ವರ್ಮಾ 8,049 ಸಾವಿರ ಮತಗಳಿಂದ ಮುನ್ನಡೆಯಲ್ಲಿದ್ದಾರೆ. ಗಿರಿರಾಜ್ ಸಿಂಗ್ ಬಿಹಾರದ ಬೇಗುಸರಾಯ್ ಲೋಕಸಭಾ ಕ್ಷೇತ್ರದಲ್ಲಿ ಗೊಂದಲ ಮುಂದುವರಿದಿದೆ. ಟ್ರೆಂಡ್‌ಗಳಲ್ಲಿ ಹಿಂದೆ ಬಿದ್ದಿದ್ದ ಬಿಜೆಪಿಯ ಅಭ್ಯರ್ಥಿ ಹಾಗೂ ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಮತ್ತೊಮ್ಮೆ ಮುನ್ನಡೆ ಸಾಧಿಸಿದ್ದಾರೆ. ಅವರು ಸಿಪಿಐ ಅಭ್ಯರ್ಥಿ ಅವಧೇಶ್ ಕುಮಾರ್ ರೈಗಿಂತ 50,472 ಸಾವಿರ ಮತಗಳಿಂದ ಮುಂದಿದ್ದಾರೆ. ಸ್ಮೃತಿ ಇರಾನಿಗೆ ಸೋಲು ಖಚಿತ?ಉತ್ತರ ಪ್ರದೇಶದ ಹೈ ಪ್ರೊಫೈಲ್ ಕ್ಷೇತ್ರ ಅಮೇಥಿಯಲ್ಲಿ ಬಿಜೆಪಿಯ ಸ್ಮೃತಿ ಇರಾನಿಯವರು ತಮ್ಮ ಪ್ರತಿಸ್ಪರ್ಧಿ ಅಭ್ಯರ್ಥಿ ಕಾಂಗ್ರೆಸ್‌ನ ಕಿಶೋರಿ ಲಾಲ್ ಶರ್ಮಾ ಅವರಿಗಿಂತ ಬಹಳ ಹಿಂದುಳಿದಿದ್ದಾರೆ. ಸ್ಮೃತಿ ಇರಾನಿ 3ನೇ ಬಾರಿಗೆ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. ಹಿಂದಿನ ಚುನಾವಣೆಯಲ್ಲಿ ಕಾಂಗ್ರೆಸ್‌ನ ರಾಹುಲ್ ಗಾಂಧಿ ಅವರನ್ನು ಸೋಲಿಸಿದ್ದರು. ಇದೀಗ ಅವರು ಬರೋಬ್ಬರಿ 90,479 ಸಾವಿರ ಮತಗಳಿಂದ ತೀವ್ರ ಹಿನ್ನಡೆ ಅನುಭವಿಸಿದ್ದು, ಗಾಂಧಿ ಕುಟುಂಬದ ಆಪ್ತ ಕಿಶೋರಿ ಲಾಲ್ ಅವರಿಗೆ ಅಮೇಥಿಯಲ್ಲಿ ಗೆಲುವು ಸಿಗಲಿದೆ ಎನ್ನಲಾಗುತ್ತಿದೆ. ಹೈದರಾಬಾದ್‌ನಲ್ಲಿ ಓವೈಸಿಗೆ ಗೆಲುವು? ಹೈದರಾಬಾದ್ ಲೋಕಸಭಾ ಕ್ಷೇತ್ರದಲ್ಲಿ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ವಿರುದ್ಧ ಸ್ಪರ್ಧಿಸಿದ್ದ ಮಾಧವಿ ಲತಾ ತೀವ್ರ ಹಿನ್ನಡೆ ಅನುಭವಿಸಿದ್ದಾರೆ. ಒವೈಸಿ ಬರೋಬ್ಬರಿ 2,63,748 ಮತಗಳ ಭಾರೀ ಅಂತರದಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ. ಹೀಗಾಗಿ ಈ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗೆ ಸೋಲು ಖಚಿತವೆಂದು ಹೇಳಲಾಗುತ್ತಿದೆ. ಬಿಜೆಪಿ ಮೊದಲ ಬಾರಿಗೆ ಈ ಕ್ಷೇತ್ರದಲ್ಲಿ ಮಹಿಳಾ ಅಭ್ಯರ್ಥಿಗೆ ಟಿಕೆಟ್ ನೀಡಿತ್ತು. ಒವೈಸಿ ಕುಟುಂಬ 1984ರಿಂದ ಹೈದರಾಬಾದ್ ಸ್ಥಾನವನ್ನು ತಮ್ಮ ತೆಕ್ಕೆಯಲ್ಲಿಟ್ಟುಕೊಂಡಿದೆ. ಇದೀಗ 2024ರ ಲೋಕಸಭೆ ಚುನಾವಣೆಯಲ್ಲಿಯೂ ಓವೈಸಿ ಮತ್ತೊಮ್ಮೆ ಗೆಲ್ಲುತ್ತಾರೆಂದು ಹೇಳಲಾಗಿದೆ. ರಾಜ್ ಬಬ್ಬರ್ ಅಜಯ್ ಸಿಂಗ್ ಹರಿಯಾಣದ ಗುರುಗ್ರಾಮ್ ಲೋಕಸಭಾ ಕ್ಷೇತ್ರದಲ್ಲಿ ಆರಂಭದಿಂದಲೂ ಮುನ್ನಡೆ ಕಾಯ್ದುಕೊಂಡಿದ್ದ ಕಾಂಗ್ರೆಸ್‌ನ ರಾಜ್ ಬಬ್ಬರ್‌ಗೆ ಇದೀಗ ಹಿನ್ನಡೆಯಾಗಿದೆ. 2019ರ ಚುನಾವಣೆಯಲ್ಲಿ ಕಾಂಗ್ರೆಸ್‌ನ ಅಜಯ್ ಸಿಂಗ್‌ರನ್ನು ಸೋಲಿಸಿದ್ದ ಬಿಜೆಪಿ ಅಭ್ಯರ್ಥಿ ರಾವ್ ಇಂದರ್‌ಜಿತ್ ಸಿಂಗ್ ಈ ಕ್ಷೇತ್ರದಲ್ಲಿ16,738 ಮತಗಳ ಅಂತರದಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ. ಕನ್ಹಯ್ಯಾ ಕುಮಾರ್ ಮನೋಜ್ ತಿವಾರಿ ಈಶಾನ್ಯ ದೆಹಲಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯ ಮನೋಜ್ ತಿವಾರಿ ಅವರು ತಮ್ಮ ಪ್ರತಿಸ್ಪರ್ಧಿ, ಜೆಎನ್‌ಯು ವಿದ್ಯಾರ್ಥಿ ಒಕ್ಕೂಟದ ಮಾಜಿ ಅಧ್ಯಕ್ಷ ಕನ್ಹಯ್ಯಾ ಕುಮಾರ್‌ಗಿಂತಲೂ 1,22,882 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ. ಇಲ್ಲಿ ಕನ್ಹಯ್ಯಾ ಕುಮಾರ್‌ಗೆ ಸೋಲು ಖಚಿತವೆಂದು ಹೇಳಲಾಗಿದೆ. ಮೇನಕಾ ಗಾಂಧಿಗೆ ಹಿನ್ನಡೆ ಲೋಕಸಭೆ ಚುನಾವಣೆಯಲ್ಲಿ ಉತ್ತರ ಪ್ರದೇಶದ ಪ್ರಮುಖ ಕ್ಷೇತ್ರವೆಂದು ಪರಿಗಣಿಸಲಾಗಿರುವ ಸುಲ್ತಾನ್‌ಪುರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮೇನಕಾ ಗಾಂಧಿಯವರಿಗೆ ಹಿನ್ನಡೆಯಾಗಿದೆ. ಸಮಾಜವಾದಿ ಪಕ್ಷದ ರಾಂಭುವಲ್ ನಿಶಾದ್ ಅವರು 26,347 ಮತಗಳಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ. ಪವನ್ ಸಿಂಗ್‌ಗೆ ಹಿನ್ನಡೆ ಬಿಹಾರದ ಕರಕತ್ ಕ್ಷೇತ್ರದಲ್ಲಿ ಆರಂಭಿಕ ಪ್ರವೃತ್ತಿಗಳು ಸಾಕಷ್ಟು ಆಘಾತಕಾರಿಯಾಗಿದೆ. ಈ ಕ್ಷೇತ್ರದಲ್ಲಿ ಸಿಪಿಐನ ರಾಜಾ ರಾಮ್ ಸಿಂಗ್ ಸುಮಾರು 57,343ಸಾವಿರ ಮತಗಳಿಂದ ಮುನ್ನಡೆ ಸಾಧಿಸಿದ್ದು, ಎನ್‌ಡಿಎಯ ಉಪೇಂದ್ರ ಕುಶ್ವಾಹಾ ಮತ್ತು ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಭೋಜ್‌ಪುರಿ ಗಾಯಕ ಪವನ್ ಸಿಂಗ್‌ಗೆ ಹಿನ್ನಡೆಯಾಗಿದೆ. ಪಪ್ಪು ಯಾದವ್ ಅನುಭವಿ ಪಪ್ಪು ಯಾದವ್ ಅವರು ಬಿಹಾರದ ಪೂರ್ಣಿಯಾ ಲೋಕಸಭಾ ಕ್ಷೇತ್ರದಲ್ಲಿ ತಮ್ಮ ಪ್ರತಿಸ್ಪರ್ಧಿಗಿಂತ ಹಿಂದುಳಿದಿದ್ದಾರೆ. ಈ ಕ್ಷೇತ್ರದಿಂದ ಜೆಡಿಯುನ ಸಂತೋಷ್ ಕುಮಾರ್ 11,555 ಸಾವಿರಕ್ಕೂ ಹೆಚ್ಚು ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ. ಇದನ್ನೂಓದಿ: ಮೆಹಬೂಬಾ ಮುಫ್ತಿ ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಅವರು ಜಮ್ಮು ಮತ್ತು ಕಾಶ್ಮೀರದ ಅನಂತನಾಗ್-ರಾಜೌರಿ ಲೋಕಸಭಾ ಕ್ಷೇತ್ರದಿಂದ ಎರಡು ಲಕ್ಷಕ್ಕೂ ಹೆಚ್ಚು ಮತಗಳಿಂದ ಭಾರೀ ಹಿನ್ನಡೆ ಅನುಭವಿಸಿದ್ದಾರೆ. ಇಂಡಿಯಾ ಒಕ್ಕೂಟದ ಭಾಗವಾಗಿರುವ ನ್ಯಾಷನಲ್ ಕಾನ್ಫರೆನ್ಸ್‌ಗೆ ಮಿಯಾನ್ಬರೋಬ್ಬರಿ 2,74,944 ಮತಗಳಿಂದ ಮುನ್ನಡೆ ಸಾಧಿಸಿದ್ದು, ಗೆಲುವು ಖಚಿತವೆಂದು ಹೇಳಲಾಗಿದೆ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...