ರೈತರಿಗೆ 20,000 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ ಪ್ರಧಾನಿ ನರೇಂದ್ರ ಮೋದಿ ಅವರು ಜೂನ್ 18 ರಂದು ವಾರಣಾಸಿಯಲ್ಲಿ ನಡೆದ ಪಿಎಂ ಕಿಸಾನ್ ಸಮ್ಮಾನ್ ಸಮ್ಮೇಳನದಲ್ಲಿ 9.26 ಕೋಟಿ ರೈತರಿಗೆ ಆದಾಯ ಬೆಂಬಲ ಯೋಜನೆಯ ಭಾಗವಾಗಿ 20,000 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಿದ್ದಾರೆ. ವಾರಣಾಸಿ:ಪ್ರಧಾನಿ ನರೇಂದ್ರ ಮೋದಿ ಅವರು ಜೂನ್ 18 ರಂದು ವಾರಣಾಸಿಯಲ್ಲಿ ನಡೆದ ಪಿಎಂ ಕಿಸಾನ್ ಸಮ್ಮಾನ್ ಸಮ್ಮೇಳನದಲ್ಲಿ 9.26 ಕೋಟಿ ರೈತರಿಗೆ ಆದಾಯ ಬೆಂಬಲ ಯೋಜನೆಯ ಭಾಗವಾಗಿ 20,000 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಿದ್ದಾರೆ. ಇದನ್ನು ಓದಿ : ಪ್ರಧಾನಿಯಾಗಿ ಸತತ ಮೂರನೇ ಅವಧಿಗೆ ಅಧಿಕಾರ ವಹಿಸಿಕೊಂಡ ನಂತರ ತಮ್ಮ ಕ್ಷೇತ್ರಕ್ಕೆ ಭೇಟಿ ನೀಡುವ ವೇಳೆಯಲ್ಲಿ ಈ ಘೋಷಣೆ ಮಾಡಿದ್ದಾರೆ. ಇದನ್ನು ಓದಿ : 17 ನೇ ಕಂತಿನ ಬಿಡುಗಡೆಯ ನಂತರ, 9.26 ಕೋಟಿ ರೈತರು ಒಟ್ಟು 20,000 ಕೋಟಿ ರೂ. ಹೆಚ್ಚುವರಿಯಾಗಿ, ಕೃಷಿ ಸಖಿಗಳಾಗಿ ತರಬೇತಿ ಪಡೆದ 30,000 ಕ್ಕೂ ಹೆಚ್ಚು ಸ್ವ-ಸಹಾಯ ಗುಂಪುಗಳಿಗೆ ಪ್ರಧಾನ ಮಂತ್ರಿ ಪ್ರಮಾಣಪತ್ರಗಳನ್ನು ಹಸ್ತಾಂತರಿಸಿದರು. ಇದೇ ವೇಳೆ ಕಾರ್ಯಕ್ರಮದಲ್ಲಿ ನೆರೆದಿದ್ದ ಅಪಾರ ಜನಸಮೂಹವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, "ಗಂಗಾ ಮಾತೆ ನನ್ನನ್ನು ತನ್ನ ಮಡಿಲಲ್ಲಿ ತೆಗೆದುಕೊಂಡಿದ್ದಾಳೆ, ನಾನು ವಾರಣಾಸಿಯ ಭಾಗವಾಗಿದ್ದೇನೆ" ಎಂದು ಹೇಳಿದರು. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...