ಅಸ್ಸಾಂನಲ್ಲಿ 48 ಕೋಟಿ ರೂ,ಮೌಲ್ಯದ ಡ್ರಗ್ಸ್ ಪೊಲೀಸರ ವಶ ಶಿವಸಾಗರ್ ಮತ್ತು ಕರ್ಬಿ ಅಂಗ್ಲಾಂಗ್ ಜಿಲ್ಲೆಗಳಲ್ಲಿ ಎರಡು ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ 48 ಕೋಟಿ ರೂಪಾಯಿ ಮೌಲ್ಯದ ದೊಡ್ಡ ಪ್ರಮಾಣದ ಡ್ರಗ್ಸ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.ಈ ಎರಡು ಕಾರ್ಯಾಚರಣೆಯಲ್ಲಿ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಅಸ್ಸಾಂ:ಶಿವಸಾಗರ್ ಮತ್ತು ಕರ್ಬಿ ಅಂಗ್ಲಾಂಗ್ ಜಿಲ್ಲೆಗಳಲ್ಲಿ ಎರಡು ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ 48 ಕೋಟಿ ರೂಪಾಯಿ ಮೌಲ್ಯದ ದೊಡ್ಡ ಪ್ರಮಾಣದ ಡ್ರಗ್ಸ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.ಈ ಎರಡು ಕಾರ್ಯಾಚರಣೆಯಲ್ಲಿ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ಮೊದಲ ಕಾರ್ಯಾಚರಣೆಯಲ್ಲಿ, ಶಿವಸಾಗರ ಜಿಲ್ಲಾ ಪೊಲೀಸರು ಜೂನ್ 16-17 ರ ರಾತ್ರಿ ನಾಗಾಲ್ಯಾಂಡ್ ಕಡೆಯಿಂದ ಬರುತ್ತಿದ್ದ ಟಾಟಾ 407 ಟ್ರಕ್ ಅನ್ನು ತಡೆದಿದ್ದರು ಈ ಸಮಯದಲ್ಲಿ ಪೊಲೀಸ್ ತಂಡವು ವಾಹನದಿಂದ ಸುಮಾರು 4.6 ಕೆಜಿ ತೂಕದ ಹೆರಾಯಿನ್‌ನ ಒಟ್ಟು 399 ಸೋಪ್ ಕೇಸ್‌ಗಳನ್ನು ವಶಪಡಿಸಿಕೊಂಡಿದೆ ಮತ್ತು ಇಬ್ಬರನ್ನು ಬಂಧಿಸಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ಮತ್ತೊಂದು ಕಾರ್ಯಾಚರಣೆಯಲ್ಲಿ, ಕರ್ಬಿ ಆಂಗ್ಲಾಂಗ್ ಜಿಲ್ಲಾ ಪೊಲೀಸರು 8.033 ಕೆಜಿ ಮಾರ್ಫಿನ್ ಅನ್ನು ವಶಪಡಿಸಿಕೊಂಡಿದ್ದು ಒಬ್ಬ ವ್ಯಕ್ತಿಯನ್ನು ಬಂಧಿಸಿದ್ದಾರೆ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...