ಲೋಕಸಭಾ ಚುನಾವಣಾ ಫಲಿತಾಂಶಕ್ಕೂ ಮುನ್ನ ಕನ್ಯಾಕುಮಾರಿಯಲ್ಲಿ ಪ್ರಧಾನಿ ಮೋದಿ ಧ್ಯಾನ 2024: ಲೋಕಸಭೆ ಚುನಾವಣೆ 2024ರ ಪ್ರಚಾರ ಮುಕ್ತಾಯದ ನಂತರ ಸಂಕ್ಷಿಪ್ತ ಆಧ್ಯಾತ್ಮಿಕ ಪ್ರವಾಸಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಮೇ 30 ರಂದು ತಮಿಳುನಾಡಿನ ಕನ್ಯಾಕುಮಾರಿ ಜಿಲ್ಲೆಯಲ್ಲಿರುವ ಪ್ರಸಿದ್ಧ ವಿವೇಕಾನಂದ ರಾಕ್ ಸ್ಮಾರಕಕ್ಕೆ ಭೇಟಿ ನೀಡಲಿದ್ದಾರೆ. 2024:ಕನ್ಯಾಕುಮಾರಿಯ ವಿವೇಕಾನಂದ ರಾಕ್ ಸ್ಮಾರಕದಲ್ಲಿ ಪ್ರಧಾನ ಮಂತ್ರಿ ಮೋದಿ ಲೋಕಸಭಾ ಚುನಾವಣಾ ಫಲಿತಾಂಶಕ್ಕೂ ಮುನ್ನ ಧ್ಯಾನ ಮಾಡಲಿದ್ದಾರೆ. ಲೋಕಸಭೆ ಚುನಾವಣೆ 2024ರ ಪ್ರಚಾರ ಮುಕ್ತಾಯದ ನಂತರ ಸಂಕ್ಷಿಪ್ತ ಆಧ್ಯಾತ್ಮಿಕ ಪ್ರವಾಸಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಮೇ 30 ರಂದು ತಮಿಳುನಾಡಿನ ಕನ್ಯಾಕುಮಾರಿ ಜಿಲ್ಲೆಯಲ್ಲಿರುವ ಪ್ರಸಿದ್ಧ ವಿವೇಕಾನಂದ ರಾಕ್ ಸ್ಮಾರಕಕ್ಕೆ ಭೇಟಿ ನೀಡಲಿದ್ದಾರೆ. ಅಲ್ಲಿ ಮೇ 30 ರಿಂದ ಜೂನ್ 1 ರವರೆಗೆ ಧ್ಯಾನ ಮಂಟಪದಲ್ಲಿ ಧ್ಯಾನ ಮಾಡಲಿದ್ದಾರೆ. ಇದನ್ನೂ ಓದಿ: ಮೇ 30 ರಂದುಸಂಜೆ ಕನ್ಯಾಕುಮಾರಿ ಕರಾವಳಿಯ ಸಮುದ್ರದ ಮಧ್ಯದಲ್ಲಿರುವ ತಮಿಳು ಸಂತ ತಿರುವಳ್ಳುವರ್ ಅವರ ಏಕಶಿಲೆಯ ಪ್ರತಿಮೆಯ ಸಮೀಪದಲ್ಲಿರುವ ಸುಂದರವಾದ ವಿಆರ್‌ಎಂಗೆ ಆಗಮಿಸುವ ನಿರೀಕ್ಷೆಯಿದೆ ಮತ್ತು ಜೂನ್ 1 ರಂದು ದೆಹಲಿಗೆ ತೆರಳುವ ನಿರೀಕ್ಷೆಯಿದೆ ಎಂದು ಬಿಜೆಪಿಯ ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ. ಸ್ವಾಮಿ ವಿವೇಕಾನಂದರು ಭಾರತ ಮಾತೆಯ ದರ್ಶನ ಪಡೆದ ಸ್ಥಳ ಕನ್ಯಾಕುಮಾರಿ ಎಂದು ಹೇಳಲಾಗುತ್ತದೆ. ವಿವೇಕಾನಂದ ರಾಕ್ ಸ್ಮಾರಕವು ಸಮುದ್ರದ ಬಂಡೆಯ ಮೇಲೆ ನೆಲೆಗೊಂಡಿದ್ದು, ಇದು ಮುಖ್ಯ ಭೂಭಾಗದಿಂದ ಸುಮಾರು 500 ಮೀಟರ್ ದೂರದಲ್ಲಿದೆ. ಗೌತಮ ಬುದ್ಧನ ಜೀವನದಲ್ಲಿ ಸಾರನಾಥಕ್ಕೆ ವಿಶೇಷ ಸ್ಥಾನವಿದೆ ಎಂಬುದು ನಂಬಿಕೆ ಅಂತೆಯೇ ಈ ವಿಗ್ರಹವು ಸ್ವಾಮಿ ವಿವೇಕಾನಂದರ ಜೀವನದಲ್ಲಿಯೂ ಸಹ ಅದೇ ಸ್ಥಾನವನ್ನು ಹೊಂದಿದೆ. ಕನ್ಯಾಕುಮಾರಿಯು ಭಾರತದ ದಕ್ಷಿಣದ ತುದಿಯನ್ನು ಗುರುತಿಸುತ್ತದೆ ಜೊತೆಗೆ ಭಾರತದ ಪೂರ್ವ ಮತ್ತು ಪಶ್ಚಿಮ ಕರಾವಳಿಗಳು ಸಂಧಿಸುವ ಸ್ಥಳವಾಗಿದೆ. ಇದು ಹಿಂದೂ ಮಹಾಸಾಗರ, ಬಂಗಾಳ ಕೊಲ್ಲಿ ಮತ್ತು ಅರೇಬಿಯನ್ ಸಮುದ್ರದ ಸಂಗಮ ಸ್ಥಳವೂ ಹೌದು. ಸ್ಮಾರಕವನ್ನು ನಿರ್ಮಿಸಲಾಗಿರುವ ಈ ರಾಕ್ ಅನ್ನು ವಿವೇಕಾನಂದರು ಜ್ಞಾನೋದಯ ಪಡೆದ ಸ್ಥಳವೆಂದು ಹೇಳಲಾಗುತ್ತದೆ. ಅಷ್ಟೇ ಅಲ್ಲದೆ, ಈ ಸ್ಥಳದಲ್ಲಿ ಕನ್ಯಾಕುಮಾರಿ ದೇವಿಯು ಶಿವನನ್ನು ಪ್ರಾರ್ಥಿಸಿದಳು ಎಂದು ಪುರಾಣವು ಹೇಳುತ್ತದೆ. ಹೀಗಾಗಿ ಭಾರತದ ಧಾರ್ಮಿಕ ನಕ್ಷೆಯಲ್ಲಿ ಪ್ರಮುಖ ಸ್ಥಾನವನ್ನು ಪಡೆದುಕೊಂಡಿದೆ. ಇದನ್ನೂ ಓದಿ: ಲೋಕಸಭೆ ಚುನಾವಣೆಯ ಏಳನೇ ಮತ್ತು ಅಂತಿಮ ಹಂತದ ಪ್ರಚಾರ ಮೇ 30 ರಂದು ಕೊನೆಗೊಳ್ಳಲಿದ್ದು, ಜೂನ್ 1 ರಂದು ಮತದಾನ ನಡೆಯಲಿದೆ. ಜೂನ್ 4 ರಂದು ಮತ ಎಣಿಕೆ ನಡೆಯಲಿದೆ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...