ರೆಮಲ್ ಚಂಡಮಾರುತದ ಅಬ್ಬರ: ಹಲವು ಜಿಲ್ಲೆಗಳಿಗೆ ರೆಡ್ ಅಲರ್ಟ್, ಬಿರುಗಾಳಿ ಸಹಿತ ಭಾರೀ ಮಳೆ ಸಾಧ್ಯತೆ : ಕರ್ನಾಟಕ ಕರಾವಳಿ ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಮುಂದಿನ 4 ದಿನ ಮಳೆ ಪ್ರಮಾಣ ಕಡಿಮೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. :ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಚಂಡಮಾರುತ ಬೀಸಿದೆ. ಹಲವು ಕಡೆಗಳಲ್ಲಿ ಮಳೆಯಾಗುತ್ತಿದೆ. ಈ ಚಂಡಮಾರುತಕ್ಕೆ ರೆಮಲ್‌ ಎಂದು ಹೆಸರಿಡಲಾಗಿದ್ದು ಮೇ 26 ರ ರಾತ್ರಿ ಪಶ್ಚಿಮ ಬಂಗಾಳ ಮತ್ತು ಬಾಂಗ್ಲಾದೇಶದ ಕರಾವಳಿ ತೀರಕ್ಕೆ ಅಪ್ಪಳಿಸುವ ಸಾಧ್ಯತೆ ಇದೆ ಎಂದು ಹೇಳಲಲಾಗಿದೆ. ಪಶ್ಚಿಮ ಬಂಗಾಳದಲ್ಲಿ ಅಲರ್ಟ್‌ ಘೋಷಿಸಲಾಗಿದೆ. ಕರ್ನಾಟಕ ಕರಾವಳಿ ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಮುಂದಿನ 4 ದಿನ ಮಳೆ ಪ್ರಮಾಣ ಕಡಿಮೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರೆಮಲ್ ಚಂಡಮಾರುತ ಪಶ್ಚಿಮ ಬಂಗಾಳದತ್ತ ವೇಗವಾಗಿ ಚಲಿಸುತ್ತಿದೆ. ಇಂದು ರಾತ್ರಿ ವೇಳೆಗೆ ರೆಮಲ್ ಚಂಡಮಾರುತ ಬಂಗಾಳ ಕರಾವಳಿಗೆ ಅಪ್ಪಳಿಸಲಿದೆ. ರೆಮಲ್ ಚಂಡಮಾರುತದ ಬಗ್ಗೆ ಪಶ್ಚಿಮ ಬಂಗಾಳದಲ್ಲಿ ಎಚ್ಚರಿಕೆ ನೀಡಲಾಗಿದೆ. ಹವಾಮಾನ ಇಲಾಖೆಯು ಕೋಲ್ಕತ್ತಾ, ಹೌರಾ, ನಾಡಿಯಾ ಮತ್ತು ಪೂರ್ವ ಮೇದಿನಿಪುರ ಜಿಲ್ಲೆಗಳಲ್ಲಿ ರೆಡ್ ಮತ್ತು ಆರೆಂಜ್ ಅಲರ್ಟ್‌ಗಳನ್ನು ನೀಡಿದೆ. ಇಂದು ಪಶ್ಚಿಮ ಬಂಗಾಳದ ಕರಾವಳಿಗೆ ರೆಮಲ್ ಚಂಡಮಾರುತ ಅಪ್ಪಳಿಸಿದಾಗ, ಗಾಳಿಯ ವೇಗ ಗಂಟೆಗೆ 100 ಕಿಲೋಮೀಟರ್ ಮೀರುವ ನಿರೀಕ್ಷೆಯಿದೆ. ರೆಮಲ್ ಚಂಡಮಾರುತದ ಪರಿಣಾಮ ಎದುರಿಸಲು ಹತ್ತಾರು ತಂಡಗಳನ್ನು ನಿಯೋಜಿಸಲಾಗಿದೆ. ಚಂಡಮಾರುತದ ಪ್ರಭಾವವು ಪಶ್ಚಿಮ ಬಂಗಾಳ, ಉತ್ತರ ಒಡಿಶಾ, ಮಿಜೋರಾಂ, ತ್ರಿಪುರಾ ಮತ್ತು ದಕ್ಷಿಣ ಮಣಿಪುರಕ್ಕೆ ವಿಸ್ತರಿಸುವ ನಿರೀಕ್ಷೆಯಿದೆ. ಈ ರಾಜ್ಯಗಳ ಕರಾವಳಿ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಇದನ್ನೂ ಓದಿ: ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ನಿರಂತರವಾಗಿ ಉತ್ತರಾಭಿಮುಖವಾಗಿ ಚಲಿಸುತ್ತಿದ್ದು, ಇಂದು ರಾತ್ರಿ ಪಶ್ಚಿಮ ಬಂಗಾಳದ ಸಾಗರ್ ದ್ವೀಪ ಮತ್ತು ಬಾಂಗ್ಲಾದೇಶದ ಖೇಪುಪಾರ ಕರಾವಳಿಗೆ ಅಪ್ಪಳಿಸಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಪ್ರಕಾರ, ಮುಂದಿನ 6 ಗಂಟೆಗಳಲ್ಲಿ ರೆಮಲ್ ಚಂಡಮಾರುತ ತೀವ್ರ ಸ್ವರೂಪ ಪಡೆಯಲಿದೆ. ಮೇ 26-27 ರಂದು ಗಂಟೆಗೆ 90 ರಿಂದ 100 ಕಿಮೀ ವೇಗದಲ್ಲಿ ಗಾಳಿ ಬೀಸಲಿದೆ. ಕೆಲವು ಸ್ಥಳಗಳಲ್ಲಿ ಭಾರೀ ಮಳೆಯ ಎಚ್ಚರಿಕೆ ನೀಡಲಾಗಿದೆ. ಈ ನಡುವೆ ಕರ್ನಾಟಕದ ಕರಾವಳಿಯಲ್ಲಿ ಮೇ 26 ಮತ್ತು 27 ರಂದು ಭಾರೀ ಮಳೆಯಾಗಲಿದೆ. ಬಳಿಕ ಸಾಧಾರಣ ಮಳೆ ಬೀಳಲಿದೆ. ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ನಾಲ್ಕು ದಿನ ಮಳೆ ಕಡಿಮೆಯಾಗಲಿದೆ. ಕಳೆದ 24 ಗಂಟೆಗಳಲ್ಲಿ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಹಲವೆಡೆ ಹಾಗೂ ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆ ಸಾಧ್ಯತೆಯಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮೂಲ್ಕಿಯಲ್ಲಿ 19 ಸೆಂ.ಮೀ., ಉಡುಪಿಯಲ್ಲಿ 13 ಸೆಂ.ಮೀ., ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ 10 ಸೆಂ.ಮೀ., ಚಿಕ್ಕಮಗಳೂರು ಜಿಲ್ಲೆಯ ಕಳಸದಲ್ಲಿ 9 ಸೆಂ.ಮೀ. ಮಳೆಯಾಗಿದೆ ಎಂದ ಹವಾಮಾನ ಇಲಾಖೆ ತಿಳಿಸಿದೆ. ಇದನ್ನೂ ಓದಿ: ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...