: ಶಿಶುಪಾಲನಾ ಕೇಂದ್ರಕ್ಕೆ ಹೊತ್ತಿಕೊಂಡ ಬೆಂಕಿ, 6 ಮಕ್ಕಳು ಸಾವು : ಅಗ್ನಿಶಾಮಕ ದಳದ ಸಿಬ್ಬಂದಿ 11 ನವಜಾತ ಮಕ್ಕಳನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ನವದೆಹಲಿ:ದೆಹಲಿಯ ವಿವೇಕ್ ವಿಹಾರ್‌ನಲ್ಲಿರುವ ಬೇಬಿ ಕೇರ್ ಸೆಂಟರ್‌ನಲ್ಲಿ ತಡರಾತ್ರಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ಈ ಅಪಘಾತದಲ್ಲಿ 6 ಮಕ್ಕಳು ಸಾವನ್ನಪ್ಪಿದ್ದಾರೆ. ಮಾಹಿತಿ ಪಡೆದ ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ಹತೋಟಿಗೆ ತಂದರು. ಅಗ್ನಿಶಾಮಕ ದಳದ ಸಿಬ್ಬಂದಿ 11 ನವಜಾತ ಮಕ್ಕಳನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದನ್ನೂ ಓದಿ: ಶಿಶುಪಾಲನಾ ಕೇಂದ್ರದಿಂದ 11 ನವಜಾತ ಶಿಶುಗಳನ್ನು ರಕ್ಷಿಸಲಾಗಿದೆ. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ವೇಳೆ ಆರು ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪೂರ್ವ ದೆಹಲಿಯ ವಿವೇಕ್ ವಿಹಾರ್ ಪ್ರದೇಶದ ಶಿಶುಪಾಲನಾ ಕೇಂದ್ರದಲ್ಲಿ ರಾತ್ರಿ 11.32 ಕ್ಕೆ ಬೆಂಕಿ ಕಾಣಿಸಿಕೊಂಡಿದೆ ಎಂದು ದೆಹಲಿ ಅಗ್ನಿಶಾಮಕ ಸೇವಾ ಸಿಬ್ಬಂದಿ ತಿಳಿಸಿದ್ದಾರೆ. ಬೆಂಕಿಗೆ ಕಾರಣ ಇನ್ನೂ ತಿಳಿದುಬಂದಿಲ್ಲ. ಇದನ್ನೂ ಓದಿ: ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...