'ಗಾಂಧೀಜಿ ಕಾಂಗ್ರೆಸ್ ಕೊನೆಗಾಣಿಸುವ ಕನಸು ಕಂಡಿದ್ದರು, ಅದನ್ನು ಈಗ ರಾಹುಲ್ ಗಾಂಧಿ ಸಾಕಾರಗೊಳಿಸುತ್ತಿದ್ದಾರೆ' ಮಹಾತ್ಮಾ ಗಾಂಧೀಜಿ ಕಾಂಗ್ರೆಸ್ ಕೊನೆಗಾಣಿಸುವ ಕನಸು ಕಂಡಿದ್ದರು, ಅದನ್ನು ಈಗ ರಾಹುಲ್ ಗಾಂಧಿ ಸಾಕಾರಗೊಳಿಸುತ್ತಿದ್ದಾರೆ ಎಂದು ಆಚಾರ್ಯ ಪ್ರಮೋದ್ ಕೃಷ್ಣಂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ನವದೆಹಲಿ:ಮಹಾತ್ಮಾ ಗಾಂಧೀಜಿ ಕಾಂಗ್ರೆಸ್ ಕೊನೆಗಾಣಿಸುವ ಕನಸು ಕಂಡಿದ್ದರು, ಅದನ್ನು ಈಗ ರಾಹುಲ್ ಗಾಂಧಿ ಸಾಕಾರಗೊಳಿಸುತ್ತಿದ್ದಾರೆ ಎಂದು ಆಚಾರ್ಯ ಪ್ರಮೋದ್ ಕೃಷ್ಣಂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ರಾಹುಲ್ ಗಾಂಧಿಯನ್ನು ಗುರಿಯಾಗಿಟ್ಟುಕೊಂಡು ವಾಗ್ದಾಳಿ ನಡೆಸಿದ ಆಚಾರ್ಯ ಪ್ರಮೋದ್ ಕೃಷ್ಣಂ, "ರಾಹುಲ್ ಗಾಂಧಿ ಮಹಾನ್ ವ್ಯಕ್ತಿ, ಅವರು ಏನು ಬೇಕಾದರೂ ಹೇಳಬಲ್ಲರು... ಮಹಾತ್ಮಾ ಗಾಂಧಿಯವರು ಕಾಂಗ್ರೆಸ್‌ನ ಅಂತ್ಯದ ಕನಸು ಕಂಡಿದ್ದರು ಮತ್ತು ಇದನ್ನು ಯಾರೂ ಮಾಡಲು ಸಾಧ್ಯವಿಲ್ಲ, ಈಗ ರಾಹುಲ್ ಗಾಂಧಿ ಅವರೇ ಇದನ್ನು ಸಾಕಾರಗೊಳಿಸುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ. ಇದನ್ನೂ ಓದಿ : ಹೀಗೆ ಮಾಡುವ ಮೂಲಕ ರಾಹುಲ್ ಗಾಂಧಿ ಕಾಂಗ್ರೆಸ್ ಅನ್ನು ನಾಶ ಮಾಡಿ ತಮ್ಮ ಜವಾಬ್ದಾರಿಯನ್ನು ನಿಭಾಯಿಸುತ್ತಿದ್ದಾರೆ.ನನಗಷ್ಟೇ ಅಲ್ಲ ದೇಶಾದ್ಯಂತ ಇರುವ ಕೋಟ್ಯಂತರ ಕಾಂಗ್ರೆಸ್ ಕಾರ್ಯಕರ್ತರಿಗೂ ಅರಿವಿದೆ... ಜೂನ್ 4ರ ನಂತರ ಇಲ್ಲಿಯವರೆಗೂ ಅತಿ ಕಡಿಮೆ ಸ್ಥಾನ ಗಳಿಸಿದ ಪಕ್ಷ ಕಾಂಗ್ರೆಸ್ ಆಗಲಿದೆ' ಎಂದು ಅವರು ಭವಿಷ್ಯ ನುಡಿದರು. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...