ಜಾರ್ಖಂಡ್‌ನಲ್ಲಿ ಪೊಲೀಸರ ಎನ್‌ಕೌಂಟರ್‌ ಗೆ 4 ಮಾವೋವಾದಿಗಳ ಹತ್ಯೆ ಸೋಮವಾರ ಬೆಳಗ್ಗೆ ಜಾರ್ಖಂಡ್‌ನ ಪಶ್ಚಿಮ ಸಿಂಗ್‌ಭೂಮ್ ಜಿಲ್ಲೆಯಲ್ಲಿ ಪೊಲೀಸರು ನಡೆಸಿದ ಎನ್‌ಕೌಂಟರ್‌ನಲ್ಲಿ ಮಹಿಳೆ ಸೇರಿದಂತೆ ಕನಿಷ್ಠ ನಾಲ್ವರು ಮಾವೋವಾದಿಗಳು ಹತರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಟೊಂಟೊ ಮತ್ತು ಗೋಯಿಲ್ಕೆರಾ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ನವದೆಹಲಿ:ಸೋಮವಾರ ಬೆಳಗ್ಗೆ ಜಾರ್ಖಂಡ್‌ನ ಪಶ್ಚಿಮ ಸಿಂಗ್‌ಭೂಮ್ ಜಿಲ್ಲೆಯಲ್ಲಿ ಪೊಲೀಸರು ನಡೆಸಿದ ಎನ್‌ಕೌಂಟರ್‌ನಲ್ಲಿ ಮಹಿಳೆ ಸೇರಿದಂತೆ ಕನಿಷ್ಠ ನಾಲ್ವರು ಮಾವೋವಾದಿಗಳು ಹತರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಟೊಂಟೊ ಮತ್ತು ಗೋಯಿಲ್ಕೆರಾ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಗುಂಡಿನ ಚಕಮಕಿಯಲ್ಲಿ ನಾಲ್ವರು ಮಾವೋವಾದಿಗಳು ಸಾವನ್ನಪ್ಪಿದ್ದಾರೆ, ಇಬ್ಬರನ್ನು ಬಂಧಿಸಲಾಗಿದೆ ಎಂದು ಜಾರ್ಖಂಡ್ ಪೊಲೀಸ್ ವಕ್ತಾರ ಮತ್ತು ಐಜಿ (ಕಾರ್ಯಾಚರಣೆ) ಅಮೋಲ್ ವಿ ಹೋಮ್ಕರ್ ಪಿಟಿಐಗೆ ತಿಳಿಸಿದ್ದಾರೆ. ಇದನ್ನೂ ಓದಿ: ಪೊಲೀಸರ ಪ್ರಕಾರ, ಎನ್‌ಕೌಂಟರ್‌ನಲ್ಲಿ ಒಬ್ಬ ಝೋನಲ್ ಕಮಾಂಡರ್, ಒಬ್ಬ ಸಬ್-ಜೋನಲ್ ಕಮಾಂಡರ್ ಮತ್ತು ಒಬ್ಬ ಏರಿಯಾ ಕಮಾಂಡರ್ ಸೇರಿದಂತೆ ನಾಲ್ವರು ನಕ್ಸಲರು ಸಾವನ್ನಪ್ಪಿದ್ದಾರೆ, ಆದರೆ ಇಂದು ಚೈಬಾಸಾದಲ್ಲಿ ಏರಿಯಾ ಕಮಾಂಡರ್ ಸೇರಿದಂತೆ ಇಬ್ಬರನ್ನು ಬಂಧಿಸಲಾಗಿದೆ.ಅಲ್ಲದೆ, ವಿವಿಧ ಕ್ಯಾಲಿಬರ್‌ನ ರೈಫಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...