ವಾರಣಾಸಿಯಲ್ಲಿ ಇಂದು ಮೋದಿ ರೋಡ್ ಶೋ, ನಾಳೆ ನಾಮಪತ್ರ ಸಲ್ಲಿಕೆ : ಪ್ರಧಾನಿ ಮೋದಿ ಇಂದು ಸೋಮವಾರ ವಾರಣಾಸಿಯಲ್ಲಿ ರೋಡ್ ಶೋ ನಡೆಸಲಿದ್ದು, ನಾಳೆ ನಾಮಪತ್ರ ಸಲ್ಲಿಸಲಿದ್ದಾರೆ. :ಪ್ರಧಾನಿ ಮೋದಿ ಇಂದು ಸೋಮವಾರ ವಾರಣಾಸಿಯಲ್ಲಿ ರೋಡ್ ಶೋ ನಡೆಸಲಿದ್ದು, ನಾಳೆ ನಾಮಪತ್ರ ಸಲ್ಲಿಸಲಿದ್ದಾರೆ. ಜೂನ್ 1ರಂದು ನಡೆಯಲಿರುವ ಲೋಕಸಭಾ ಚುನಾವಣೆಯ 7ನೇ ಹಂತದ ಹಾಗೂ ಕೊನೆಯ ಹಂತದ ಮತದಾನ ನಡೆಯಲಿದ್ದು, ಅಂದು ವಾರಾಣಸಿ ಲೋಕಸಭಾ ಕ್ಷೇತ್ರಕ್ಕೂ ಮತದಾನ ನಡೆಯಲಿದೆ ಹಾಗೂ ವಾರಣಾಸಿ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ನಾಳೆ ನರೇಂದ್ರ ಮೋದಿ ಮತದಾನ ನಾಮಪತ್ರ ಸಲ್ಲಿಸಲಿದ್ದಾರೆ ಮತ್ತು ಪ್ರಧಾನಿ ಮೋದಿ ಅವರು ಸತತ ಮೂರನೇ ಬಾರಿಗೆ ವಾರಾಣಸಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ಇದನ್ನು ಓದಿ : ಲೋಕಸಭಾ ಚುನಾವಣೆಯ ಕೊನೆಯ ಹಾಗೂ 7ನೇ ಹಂತದಲ್ಲಿ ಜೂನ್ 1ರಂದು ವಾರಾಣಸಿ ಕ್ಷೇತ್ರಕ್ಕೆ ಮತದಾನ ನಡೆಯಲಿದೆ. ಕಾಂಗ್ರೆಸ್‌ ಪಕ್ಷವು ಇಲ್ಲಿ ತನ್ನ ರಾಜ್ಯ ಘಟಕದ ಅಧ್ಯಕ್ಷ ಅಜಯ್‌ ರಾಯ್‌ ಅವರನ್ನು ಸ್ಪರ್ಧೆಗಿಳಿಸಿದೆ. ಬಿಎಸ್‌ಪಿಯ ಅತ್ತರ್‌ ಜಮಾಲ್‌ ಅವರೂ ಕಣದಲ್ಲಿದ್ದಾರೆ. ಮತ್ತು ಕಾಂಗ್ರೆಸ್‌ ಪಕ್ಷವು ಇಲ್ಲಿ ತನ್ನ ರಾಜ್ಯ ಘಟಕದ ಅಧ್ಯಕ್ಷ ಅಜಯ್‌ ರಾಯ್‌ ಅವರನ್ನು ಸ್ಪರ್ಧೆಗಿಳಿಸಿದೆ. ಬಿಎಸ್‌ಪಿಯ ಅತ್ತರ್‌ ಜಮಾಲ್‌ ಅವರೂ ಕಣದಲ್ಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಸೋಮವಾರ) ಸಂಜೆ ಉತ್ತರ ಪ್ರದೇಶದ ವಾರಾಣಸಿಯಲ್ಲಿ ಸುಮಾರು 6 ಕಿ. ಮೀ ಉದ್ದದ ರೋಡ್‌ ಶೋ ನಡೆಸಲಿದ್ದಾರೆ ಮತ್ತು ಇದಾದ ಬಳಿಕ ನಾಳೆ ಪ್ರಧಾನಿ ಮೋದಿ ಅವರು ಉತ್ತರ ಪ್ರದೇಶದ ವಾರಾಣಸಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ನಾಳೆ (ಮಂಗಳವಾರ) ನಾಮಪತ್ರ ಸಲ್ಲಿಸಲಿದ್ದಾರೆ. ನಾಮಪತ್ರ ಸಲ್ಲಿಕೆಗೂ ಮುನ್ನ ನರೇಂದ್ರ ಮೋದಿ ಗಂಗಾ ನದಿಯಲ್ಲಿ ಸ್ನಾನ ಮಾಡಲಿದ್ದಾರೆ ಎಂದು ಬಿಜೆಪಿ ಮೂಲಗಳಿಂದ ತಿಳಿದು ಬಂದಿದೆ. ಇದನ್ನು ಓದಿ : ಇಂದು ಸಂಜೆ ವಾರಣಾಸಿಯಲ್ಲಿ ನಡೆಯಲಿರುವ ರೋಡ್ ಶೋ ನಗರದ ಮಾಳವೀಯಾ ಚೌರಾಹಾದಿಂದ ಶ್ರೀ ಕಾಶಿ ವಿಶ್ವನಾಥ ಧಾಮದವರೆಗೆ ನಡೆಯಲಿದೆ . ಸುಮಾರು 5,000ಕ್ಕೂ ಹೆಚ್ಚು ಮಹಿಳೆಯರು ರೋಡ್‌ ಶೋನಲ್ಲಿ ಭಾಗವಹಿಸಲಿದ್ದಾರೆ. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ, ಸಚಿವರು ಮತ್ತು ಶಾಸಕರು ಕೂಡ ರೋಡ್‌ ಶೋನಲ್ಲಿ ಭಾಗವಹಿಸಲಿದ್ದಾರೆ ರೋಡ್‌ ಶೋ ಮುಗಿದ ಬಳಿಕ ರಾತ್ರಿ ಬಿಎಲ್‌ಡಬ್ಲೂ ಅತಿಥಿಗೃಹದಲ್ಲಿ ಪ್ರಧಾನಿ ಮೋದಿ ಅವರು ವಾಸ್ತವ್ಯ ಹೂಡಲಿದ್ದಾರೆ ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...