ಮುಸ್ಲಿಂ ಮಹಿಳೆಯರ ವೋಟರ್ ಐಡಿ ಪರಿಶೀಲಿಸಿದ ಬಿಜೆಪಿ ಅಭ್ಯರ್ಥಿ ಮಾಧವಿ ಲತಾ ವಿರುದ್ಧ ಎಫ್‌ಐಆರ್ ದಾಖಲು ಇದೀಗ, ಬಿಜೆಪಿ ಅಭ್ಯರ್ಥಿ ಮಾಧವಿ ಲತಾ ಅವರು ಬುರ್ಖಾ ಧರಿಸಿರುವ ಮಸ್ಲಿನ್ ಮಹಿಳೆಯರ ಮತದಾರರ ಗುರುತಿನ ಚೀಟಿಗಳನ್ನು ಪರಿಶೀಲಿಸುತ್ತಿರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ನಂತರ ಪೊಲೀಸರು ಅವರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಹೈದರಾಬಾದ್:ದೇಶಾದ್ಯಂತ ಲೋಕಸಭೆ ಚುನಾವಣೆ ನಡೆಯುತ್ತಿದ್ದು, ತೆಲಂಗಾಣದಲ್ಲಿ ಇಂದು 4ನೇ ಹಂತದಲ್ಲಿ ಎಲ್ಲಾ ಸ್ಥಾನಗಳಿಗೆ ಮತದಾನ ನಡೆಯುತ್ತಿದೆ. 17 ಸ್ಥಾನಗಳಲ್ಲಿ ಒಂದಾದ ಹೈದರಾಬಾದ್‌ನಲ್ಲಿ ಬಿಜೆಪಿಯ ಮಾಧವಿ ಲತಾ ಅವರು ಹಾಲಿ ಸಂಸದ ಅಸಾದುದ್ದೀನ್ ಓವೈಸಿ ವಿರುದ್ಧ ಕಣಕ್ಕೆ ಇಳಿದಿದ್ದಾರೆ. ಇದೀಗ, ಬಿಜೆಪಿ ಅಭ್ಯರ್ಥಿ ಮಾಧವಿ ಲತಾ ಅವರು ಬುರ್ಖಾ ಧರಿಸಿರುವ ಮಸ್ಲಿನ್ ಮಹಿಳೆಯರ ಮತದಾರರ ಗುರುತಿನ ಚೀಟಿಗಳನ್ನು ಪರಿಶೀಲಿಸುತ್ತಿರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ನಂತರ ಪೊಲೀಸರು ಅವರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಇದನ್ನೂ ಓದಿ : | : , . . — (@) ಬಿಜೆಪಿ ನಾಯಕಿ ಮಾಧವಿ ಲತಾ ಅವರು ತಮ್ಮ ಕೃತ್ಯವನ್ನು ಸಮರ್ಥಿಸಿಕೊಂಡಿದ್ದಾರೆ ಮತ್ತು ಕಾನೂನಿನ ಪ್ರಕಾರ, ಫೇಸ್‌ಮಾಸ್ಕ್ ಇಲ್ಲದೆ ತಮ್ಮ ಗುರುತಿನ ಚೀಟಿಗಳನ್ನು ಪರಿಶೀಲಿಸುವ ಹಕ್ಕು ಅಭ್ಯರ್ಥಿಗಳಿಗೆ ಇದೆ ಎಂದು ಹೇಳಿದರು. "ನಾನು ಅಭ್ಯರ್ಥಿಯಾಗಿದ್ದೇನೆ. ಕಾನೂನಿನ ಪ್ರಕಾರ ಅಭ್ಯರ್ಥಿಗೆ ಮುಖವಾಡಗಳಿಲ್ಲದೆ ಗುರುತಿನ ಚೀಟಿಗಳನ್ನು ಪರಿಶೀಲಿಸುವ ಹಕ್ಕಿದೆ. ನಾನು ಪುರುಷ ಅಲ್ಲ, ನಾನು ಮಹಿಳೆ ಮತ್ತು ತುಂಬಾ ವಿನಮ್ರತೆಯಿಂದ ನಾನು ಅವರನ್ನು ವಿನಂತಿಸಿದ್ದೇನೆ ”ಎಂದು ಅವರು ಹೇಳಿದರು. ಇದನ್ನೂ ಓದಿ : ಈ ವಿಡಿಯೋ ವೈರಲ್ ಆದ ನಂತರ ಪೊಲೀಸರು ಆಕೆಯ ವಿರುದ್ಧ ಐಪಿಸಿ ಸೆಕ್ಷನ್ 171 ಸಿ, 186, 505 (1) ಸಿ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...