ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿಲ್ಲ, ವದಂತಿಗಳು ಸುಳ್ಳು : ಸ್ಪಷ್ಟನೆ : ಮೇ 5 ರಂದು ನಡೆದ ರಾಷ್ಟ್ರೀಯ ಅರ್ಹತಾ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದವು ಎಂಬ ವದಂತಿಗಳು ಕೇಳಿ ಬಂದಿದ್ದು, ಇದೀಗ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ಪ್ರಶ್ನೆ ಪತ್ರಿಕೆ ಸೋರಿಕೆ ಯಾಗಿರುವುದು ಸುಳ್ಳು , ಆಧಾರ ರಹಿತವಾದ ವದಂತಿಗಳು ಹಬ್ಬಿವೆಂದು ಸ್ಪಷ್ಟನೆ ನೀಡಿದೆ. :ರಾಷ್ಟ್ರೀಯ ಅರ್ಹತಾ ಪರೀಕ್ಷೆ ಮೇ 5 ರಂದು ಭಾನುವಾರ ನಡೆದಿತ್ತು, ಇದಾದ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಮತ್ತು ಪ್ರಶ್ನೆ ಪತ್ರಿಕೆಯ ತುಣುಕುಗಳು ಹರಿದಾಡುತ್ತಿದ್ದವು. ಈ ಹಿನ್ನೆಲೆ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ಈ ಕುರಿತು ಸ್ಪಷ್ಟನೆ ನೀಡಿದೆ. ಇದನ್ನು ಓದಿ : ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಪೋಸ್ಟ್ಗಳು ಮತ್ತು ಪ್ರಶ್ನೆ ಪತ್ರಿಕೆಯ ತುಣುಕುಗಳು ಯಾವುದೇ ಆಧಾರವಿಲ್ಲದೆ ಈ ರೀತಿಯ ಪೋಸ್ಟ್ಗಳನ್ನು ಹರಿ ಬಿಡಲಾಗುತ್ತಿದೆ ವಿದ್ಯಾರ್ಥಿಗಳು, ಪೋಷಕರು, ಶಿಕ್ಷಕರು ಯಾವುದೇ ರೀತಿಯ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿಲ್ಲ ಇವುಗಳೆಲ್ಲವೂ ಆಧಾರ ರಹಿತವಾದ ಆರೋಪಗಳು ಎಂದು ಸ್ಪಷ್ಟನೆ ನೀಡಿದೆ. ಪರೀಕ್ಷಾ ಕೇಂದ್ರದೊಳಗೆ ಯಾರಿಗೂ ಅವಕಾಶವಿಲ್ಲ ಮತ್ತು ಸಿಸಿಟಿವಿ ಕಣ್ಗಾವಲಿನಲ್ಲಿ ಪರೀಕ್ಷೆ ನಡೆದಿದೆ. ಇದಲ್ಲದೆ ಭದ್ರತಾ ಪ್ರೋಟೋಕಾಲ್ಗಳು ಇದೆಲ್ಲದರ ಮತ್ತೆ ಪ್ರತಿ ಪ್ರಶ್ನೆ ಪತ್ರಿಕೆಯನ್ನು ಲೆಕ್ಕ ಹಾಕಲಾಗಿದೆ ವದಂತಿಗಳೆಲ್ಲವೂ ಸುಳ್ಳು ಎಂದು ತಿಳಿಸಲಾಗಿದೆ. ಇದನ್ನು ಓದಿ : ದೇಶದ 571 ನಗರಗಳ ಹಾಗೂ ಹೊರದೇಶದ 14 ನಗರಗಳ ಒಟ್ಟು 4,750 ಪರೀಕ್ಷಾ ಕೇಂದ್ರದಲ್ಲಿ ಈ ಪರೀಕ್ಷೆ ನಡೆದಿದೆ ಮತ್ತು ದೇಶದ ಸರ್ಕಾರಿ,, ಖಾಸಗಿ ಹಾಗೂ ಹೊರದೇಶದ ಕೆಲವು ಕಾಲೇಜುಗಳಲ್ಲಿ ವೈದ್ಯಕೀಯ ಪದವಿ ಕೋರ್ಸ್ಗಾಗಿ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ಈ ಪರೀಕ್ಷೆಯನ್ನು ನಡೆಸುತ್ತದೆ. ಇಂತಹ ವದಂತಿಗಳಿಗೆ ಕಿವಿ ಕೊಡಬೇಡಿ ಮುಂಬರುವ ಪರೀಕ್ಷೆಗಳತ್ತ ಗಮನಹರಿಸಿ ಎಂದು ತಿಳಿಸಿದೆ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...