ಮಹಾರಾಷ್ಟ್ರದಲ್ಲಿ ಶಿವಸೇನೆ ನಾಯಕಿ ಕರೆದೊಯ್ಯಲು ಹೊರಟಿದ್ದ ಹೆಲಿಕಾಪ್ಟರ್ ಪತನ : ಲೋಕಸಭಾ ಚುನಾವಣಾ ರ್ಯಾಲಿಗಾಗಿ ಶಿವಸೇನೆ ನಾಯಕಿಯನ್ನು ಕರೆದೊಯ್ಯಲು ಹೊರಟಿದ್ದ ಹೆಲಿಕಾಪ್ಟರ್ ಮಹಾರಾಷ್ಟ್ರದ ರಾಯಗಢದ ಮಹಾಡ್ ಪಟ್ಟಣದ ಬಳಿ ಪತನಗೊಂಡಿದೆ. :ಶಿವಸೇನೆಯ ನಾಯಕಿ ಸುಷ್ಮಾ ಅಂಧಾರೆ ಅವರನ್ನು ಲೋಕಸಭೆ ಚುನಾವಣೆ ರ್ಯಾಲಿಗೆ ಕರೆದೊಯ್ಯಲು ಹೊರಟಿದ್ದ ಖಾಸಗಿ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಇದ್ದಕ್ಕಿದ್ದಂತೆ ಪತನಗೊಂಡಿರುವ ಘಟನೆ ಮಹಾರಾಷ್ಟ್ರದ ರಾಯಗಢದ ಮಹಾಡ್ ಪಟ್ಟಣದ ಬಳಿ ಶುಕ್ರವಾರ ಸಂಭವಿಸಿದೆ. ಬೆಳಗ್ಗೆ 9.30ರ ಸುಮಾರಿಗೆ ಮಹಾಡ್‌ನಲ್ಲಿರುವ ತಾತ್ಕಾಲಿಕ ಹೆಲಿಪ್ಯಾಡ್‌ನಲ್ಲಿ ಪೈಲಟ್( ) ಮಾಡಲು ಪ್ರಯತ್ನಿಸುತ್ತಿದ್ದ ಸಂದರ್ಭದಲ್ಲಿ ಹೆಲಿಕಾಪ್ಟರ್ ವಾಲಿ ಈ ದುರಂತ ಸಂಭವಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. — (@kgoyal466) ಇದನ್ನೂ ಓದಿ- ಲೋಕಸಭೆ ಚುನಾವಣೆ ( 2024) ಹಿನ್ನಲೆಯಲ್ಲಿ ನಿಗದಿಯಾಗಿದ್ದ ಸಾರ್ವಜನಿಕ ರ್ಯಾಲಿಗಾಗಿ( ) ಅವರನ್ನು ಈ ಖಾಸಗಿ ಚಾಪರ್‌ನಲ್ಲಿ ಕರೆದೊಯ್ಯಲು ನಿರ್ಧರಿಸಲಾಗಿತ್ತು ಎಂದು ವರದಿಯಾಗಿದೆ. ಇದನ್ನೂ ಓದಿ- ಈ ದುರ್ಘಟನೆಯ ಸಂದರ್ಭದಲ್ಲಿ ಪೈಲಟ್ ಹೆಲಿಕಾಪ್ಟರ್‌ನಿಂದ ಜಿಗಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದಾಗ್ಯೂ, ಪೈಲಟ್‌ಗೆ ಸಣ್ಣ-ಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಘಟನೆಯಲ್ಲಿ ಹೆಲಿಕಾಪ್ಟರ್‌ನ ರೋಟರ್ ಬ್ಲೇಡ್‌ಗಳು ಹಾನಿಗೊಳಗಾಗಿವೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...