ನೂರಾರು ಹೆಣ್ಣುಮಕ್ಕಳ ಶೋಷಿಸುವ ರಾಕ್ಷಸನ ಪರ ಮೋದಿ ಪ್ರಚಾರ ಮಾಡಿದ್ದು ಯಾಕೆ?: ರಾಹುಲ್‌ ಗಾಂಧಿ : ಕೈಸರ್‌ಗಂಜ್‌ನಿಂದ ಕರ್ನಾಟಕದವರೆಗೆ ಮತ್ತು ಉನ್ನಾವೊದಿಂದ ಉತ್ತರಾಖಂಡದವರೆಗೆ ಹೆಣ್ಣುಮಕ್ಕಳ ಅಪರಾಧಿಗಳಿಗೆ ಪ್ರಧಾನಿ ಮೋದಿ ಮೌನ ಬೆಂಬಲ ನೀಡುತ್ತಿರುವುದು ದೇಶದಾದ್ಯಂತ ಅಪರಾಧಿಗಳಿಗೆ ಧೈರ್ಯ ತುಂಬುತ್ತಿದೆ. ʼಮೋದಿ ಕಾ ಪರಿವಾರ್‌ʼ ಭಾಗವಾಗುವುದು ಅಪರಾಧಿಗಳಿಗೆ ‘ಭದ್ರತೆಯ ಖಾತರಿ’ ಆಗಿದೆಯೇ ಎಂದು ರಾಹುಲ್‌ ಗಾಂಧಿ ಪ್ರಶ್ನಿಸಿದ್ದಾರೆ. ನವದೆಹಲಿ:ಅಶ್ಲೀಲ ವಿಡಿಯೋ ಮತ್ತು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಎದುರಿಸುತ್ತಿರುವ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ವಿಚಾರವಾಗಿ ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಬುಧವಾರ ಟ್ವೀಟ್‌ ಮಾಡಿರುವ ಅವರು, ʼದಲ್ಲಿ ಮಹಿಳೆಯರ ವಿರುದ್ಧ ನಡೆದ ಘೋರ ಅಪರಾಧಗಳ ಬಗ್ಗೆ ಪ್ರಧಾನಿ ಮೋದಿಯವರು ನಾಚಿಕೆಗೇಡಿನ ಮೌನವನ್ನು ಹೊಂದಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ಉತ್ತರಿಸಬೇಕುʼ ಅಂತಾ ಆಗ್ರಹಿಸಿದ್ದಾರೆ. ಇದನ್ನೂ ಓದಿ: कर्नाटक में महिलाओं के साथ हुए वीभत्स अपराध पर भी नरेंद्र मोदी ने हमेशा की तरह शर्मनाक चुप्पी साध ली है। प्रधानमंत्री को जवाब देना होगा: सब कुछ जान कर भी सिर्फ वोटों के लिए उन्होंने सैकड़ों बेटियों का शोषण करने वाले हैवान का प्रचार क्यों किया? आखिर इतना बड़ा अपराधी बड़ी… — (@) ಎಲ್ಲವೂ ಗೊತ್ತಿದ್ದರೂ ಕೇವಲ ಮತಕ್ಕಾಗಿ ನೂರಾರು ಹೆಣ್ಣುಮಕ್ಕಳನ್ನು ಶೋಷಿಸುವ ರಾಕ್ಷಸನ ಪರ ಪ್ರಚಾರ ಮಾಡಿದ್ದು ಯಾಕೆ? ಅಷ್ಟಕ್ಕೂ ಇಷ್ಟು ದೊಡ್ಡ ಕ್ರಿಮಿನಲ್ ದೇಶದಿಂದ ಹೇಗೆ ಸುಲಭವಾಗಿ ತಪ್ಪಿಸಿಕೊಂಡು ವಿದೇಶಕ್ಕೆ ಹೋದ ಅಂತಾ ರಾಹುಲ್‌ ಗಾಂಧಿ ಪ್ರಶ್ನಿಸಿದ್ದಾರೆ. ಕೈಸರ್‌ಗಂಜ್‌ನಿಂದ ಕರ್ನಾಟಕದವರೆಗೆ ಮತ್ತು ಉನ್ನಾವೊದಿಂದ ಉತ್ತರಾಖಂಡದವರೆಗೆ ಹೆಣ್ಣುಮಕ್ಕಳ ಅಪರಾಧಿಗಳಿಗೆ ಪ್ರಧಾನಿ ಮೋದಿ ಮೌನ ಬೆಂಬಲ ನೀಡುತ್ತಿರುವುದು ದೇಶದಾದ್ಯಂತ ಅಪರಾಧಿಗಳಿಗೆ ಧೈರ್ಯ ತುಂಬುತ್ತಿದೆ. ʼಮೋದಿ ಕಾ ಪರಿವಾರ್‌ʼ ಭಾಗವಾಗುವುದು ಅಪರಾಧಿಗಳಿಗೆ ‘ಭದ್ರತೆಯ ಖಾತರಿ’ ಆಗಿದೆಯೇ ಎಂದುಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...