: ರಾಜ್ಯದ 7 ರೈಲು ನಿಲ್ದಾಣಗಳಲ್ಲಿ ಕಡಿಮೆ ದರದಲ್ಲಿ ಊಟ ಇಂಡಿಯನ್ ರೈಲ್ವೇಸ್‌ ಕೇಟರಿಂಗ್ ಅಂಡ್ ಟೂರಿಸಂ ಕಾರ್ಪೊರೇಶನ್ () ಮತ್ತು ಭಾರತೀಯ ರೈಲ್ವೆ ಜಂಟಿಯಾಗಿ ಈ ಯೋಜನೆ ರೂಪಿಸಿದೆ. ಕಾಯ್ದಿರಿಸದ ಬೋಗಿಗಳಲ್ಲಿ ಪ್ರಯಾಣಿಸುವವರಿಗೆ ಬೇಸಿಗೆ ಕಾಲದಲ್ಲಿ ಕೈಗೆಟುಕುವ ಬೆಲೆಯಲ್ಲಿ ಆರೋಗ್ಯಕರ ಊಟ ಮತ್ತು ತಿಂಡಿ ನೀಡುವ ಹೊಸ ಉಪಕ್ರಮ ಇದಾಗಿದೆ. ಬೆಂಗಳೂರು:ಭಾರತೀಯ ರೈಲ್ವೆ ಇಲಾಖೆಯ ರೈಲ್ವೆ ಮಂಡಳಿಯು ದೇಶದ 100 ರೈಲು ನಿಲ್ದಾಣಗಳಲ್ಲಿ ಸಾಮಾನ್ಯ ದರ್ಜೆಯ () ಕೋಚ್‌ಗಳ ಬಳಿ ಕಡಿಮೆ ದರಲ್ಲಿ ಉತ್ತಮ ಆಹಾರ ನೀಡುವ ಕೌಂಟರ್‌ಗಳನ್ನು ತೆರೆದಿದ್ದು, ಇದರಲ್ಲಿ ರಾಜ್ಯದ 7 ನಿಲ್ದಾಣಗಳು ಸೇರಿವೆ. ವ್ಯಾಪ್ತಿಯ ಮಂಗಳೂರು ಸೆಂಟ್ರಲ್‌ ಮತ್ತು ಮಂಗಳೂರು ಜಂಕ್ಷನ್‌ ರೈಲು ನಿಲ್ದಾಣಗಳು, ನೈರುತ್ಯ ರೈಲ್ವೆ ವ್ಯಾಪ್ತಿಯ ಬೆಂಗಳೂರು, ಯಶವಂತಪುರ, ಮೈಸೂರು, ವಿಜಯಪುರ ಮತ್ತು ಬಳ್ಳಾರಿ ನಿಲ್ದಾಣಗಳಲ್ಲಿ ಕೌಂಟರ್‌ ತೆರೆಯಲಾಗಿದೆ. ಕಡಿಮೆ ದರದಲ್ಲಿ ಪ್ರಯಾಣಿಕರಿಗೆ ಗುಣಮಟ್ಟದ ಆಹಾರ ನೀಡಲಾಗುತ್ತಿದೆ. ಇದನ್ನೂ ಓದಿ: ಇಂಡಿಯನ್ ರೈಲ್ವೇಸ್‌ ಕೇಟರಿಂಗ್ ಅಂಡ್ ಟೂರಿಸಂ ಕಾರ್ಪೊರೇಶನ್ () ಮತ್ತು ಭಾರತೀಯ ರೈಲ್ವೆ ಜಂಟಿಯಾಗಿ ಈ ಯೋಜನೆ ರೂಪಿಸಿದೆ. ಕಾಯ್ದಿರಿಸದ ಬೋಗಿಗಳಲ್ಲಿ ಪ್ರಯಾಣಿಸುವವರಿಗೆ ಬೇಸಿಗೆ ಕಾಲದಲ್ಲಿ ಕೈಗೆಟುಕುವ ಬೆಲೆಯಲ್ಲಿ ಆರೋಗ್ಯಕರ ಊಟ ಮತ್ತು ತಿಂಡಿ ನೀಡುವ ಹೊಸ ಉಪಕ್ರಮ ಇದಾಗಿದೆ. ʼಜನತಾ ಊಟ' ಎಂದು ನಿಲ್ದಾಣಗಳಲ್ಲಿ ಅಡುಗೆ ಮಳಿಗೆಗಳಲ್ಲಿ ಕಡಿಮೆ ದರದಲ್ಲಿ ಆಹಾರ ಒದಗಿಸಲಾಗಿತ್ತು. ಇದೀಗ ಪ್ಲಾಟ್‌ಫಾರಂನಲ್ಲೇ ಕೌಂಟರ್ ತೆರೆಯಲಾಗಿದೆ. 100 ರೈಲ್ವೆ ನಿಲ್ದಾಣಗಳ 150ಗಳಲ್ಲಿ ಊಟ ಮತ್ತು ತಿಂಡಿಯ ವ್ಯವಸ್ಥೆ ಮಾಡಲಾಗಿದೆ. ಕೇವಲ 20 ರೂ.ಗೆ ಉಪಾಹಾರ, 50 ರೂ.ಗೆ ಲಘು ಊಟ, 3 ರೂ.ಗೆ 200ML ನೀರು ನೀಡಲಾಗುತ್ತಿದೆ. ಇದನ್ನೂ ಓದಿ: ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...