ಹೈದರಾಬಾದ್ ವಿಮಾನ ನಿಲ್ದಾಣದ ಬಳಿ ಚಿರತೆ, ಸೆರೆ ಹಿಡಿಯಲು ಬಲೆ, ಸಿಸಿಟಿವಿ ಸಜ್ಜು : ಭಾನುವಾರ ಹೈದರಾಬಾದ್‌ನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಚಿರತೆಯೊಂದು ಕಾಣಿಸಿಕೊಂಡಿದೆ. :ಹೈದರಾಬಾದ್ ಹೊರವಲಯದ ಶಂಶಾಬಾದ್‌ನಲ್ಲಿರುವ ರಾಜೀವ್ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಭಾನುವಾರ ಚಿರತೆಯೊಂದು ಕಾಣಿಸಿಕೊಂಡಿದೆ. ಅರಣ್ಯಾಧಿಕಾರಿಗಳು ಸೆರೆ ಹಿಡಿಯಲು ಬಲೆ, ಸಿಸಿಟಿವಿಗಳನ್ನು ಸಜ್ಜುಗೊಳಿಸಿದ್ದಾರೆ. ಶಂಶಾಬಾದ್‌ನಲ್ಲಿರುವ ರಾಜೀವ್ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಸುತ್ತಮುತ್ತ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಚಿರತೆ ಚಲನವಲನ ಸೆರೆಯಾಗಿದ್ದು, ಅರಣ್ಯ ಇಲಾಖೆ ಕಾರ್ಯಾಚರಣೆ ನಡೆಸಿ ಚಿರತೆಯನ್ನು ಹಿಡಿಯಲು ಮುಂದಾಗಿದೆ. ಇದನ್ನು ಓದಿ : ಅರಣ್ಯ ಸಿಬ್ಬಂದಿ ತಮ್ಮ ಕಾರ್ಯಾಚರಣೆಯ ಭಾಗವಾಗಿ ಟ್ರ್ಯಾಪ್ ಕ್ಯಾಮೆರಾಗಳನ್ನು ಅಳವಡಿಸಿ ಮತ್ತು ಪಂಜರಗಳನ್ನು ಸಿದ್ಧಪಡಿಸಿದ್ದಾರೆ. ರಂಗಾ ರೆಡ್ಡಿ ಜಿಲ್ಲೆಯ ಶಂಶಾಬಾದ್ ಪುರಸಭೆ ವ್ಯಾಪ್ತಿಯ ಗೊಲ್ಲಪಲ್ಲಿ ಬಳಿಯ ವಿಮಾನ ದುರಸ್ತಿ ಕೇಂದ್ರದ ಬಳಿಯಿರುವ ವಿಮಾನ ನಿಲ್ದಾಣ ಪ್ರದೇಶದಲ್ಲಿ ಬೆಳಿಗ್ಗೆ ಚಿರತೆ ಕಾಣಿಸಿಕೊಂಡಿದೆ. ಸುತ್ತಮುತ್ತ ಇರುವ ನಿವಾಸಿಗಳಲ್ಲಿ ಆತಂಕ ಮೂಡಿಸಿದೆ. ಅಧಿಕಾರಿಗಳು ಎಚ್ಚರಿಕೆಯಿಂದಿರುವಂತೆ ಅಧಿಕಾರಿಗಳು ಸೂಚಿಸಿದ್ದಾರೆ. ಇದನ್ನು ಓದಿ : ಅರಣ್ಯಾಧಿಕಾರಿಗಳು ವಿಮಾನ ನಿಲ್ದಾಣದ ಬಳಿ ಬಲೆ, ಸಿಸಿಟಿವಿ, ಟ್ರ್ಯಾಪ್ ಕ್ಯಾಮೆರಾಗಳನ್ನು ಅಳವಡಿಸಿ ಮತ್ತು ಪಂಜರಗಳನ್ನು ಇಟ್ಟು, ಅದನ್ನು ಹಿಡಿಯಲು ಕಾರ್ಯಾಚರಣೆ ಆರಂಭಿಸಿದ್ದಾರೆ. ವಿಮಾನ ನಿಲ್ದಾಣದ ಗಡಿ ಗೋಡೆಯ ಮೇಲೆ ಚಿರತೆ ಜಿಗಿದಿದ್ದು, ವಿಮಾನ ನಿಲ್ದಾಣದ ನಿಯಂತ್ರಣ ಕೊಠಡಿಯಲ್ಲಿ ಅಲಾರಾಂ ಹೊಡೆದುಕೊಂಡಿದೆ. ಸಿಸಿಟಿವಿ ದೃಶ್ಯಾವಳಿಗಳ ನೆರವಿನಿಂದ ಅಧಿಕಾರಿಗಳು ಚಿರತೆ ಕಾಣಿಸಿಕೊಂಡ ಪ್ರದೇಶವನ್ನು ಗುರುತಿಸಿ ಅಲ್ಲಿಯೇ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...