ಮೋದಿ 3. ಸರ್ಕಾರ ಯಾವಾಗ ಬೇಕಾದರೂ ಬೀಳಬಹುದು: ಮಲ್ಲಿಕಾರ್ಜುನ ಖರ್ಗೆ ಎಚ್ಚರಿಕೆ ಈ ಬಾರಿಯ ಲೋಕಸಭಾ ಚುನಾವಣೆ ಫಲಿತಾಂಶದಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ ಬಾರದ ಹಿನ್ನೆಲೆ ಅದು ಮಿತ್ರ ಪಕ್ಷಗಳ ಬೆಂಬಲದೊಂದಿಗೆ ಸರ್ಕಾರ ರಚಿಸಿದೆ. ಈ ಮೂಲಕ ಸತತ 3ನೇ ಬಾರಿಗೆ ಮೋದಿಯವರು ಪ್ರಧಾನಿಯೂ ಆಗಿದ್ದಾರೆ. ನವದೆಹಲಿ:ಪ್ರಧಾನಿ ನರೇಂದ್ರ ಮೋದಿಯವರ ಬಿಜೆಪಿ ನೇತೃತ್ವದ ಸರ್ಕಾರ ಶೀಘ್ರವೇ ಪತನವಾಗಲಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಸ್ಫೋಟಕ ಭವಿಷ್ಯ ನುಡಿದಿದ್ದಾರೆ. ಈ ಬಗ್ಗೆ ಶನಿವಾರ ಮಾತನಾಡಿರುವ ಅವರು, ಪ್ರಧಾನಿ ಮೋದಿಯವರ 3. ಸರ್ಕಾರ ಯಾವಾಗ ಬೇಕಾದರೂ ಬೀಳಬಹುದು, ಕಾದು ನೋಡೋಣ ಅಂತಾ ಹೇಳಿದ್ದಾರೆ. ದೇಶದಬಹುಮತದ ಸರ್ಕಾರವನ್ನು ಆಯ್ಕೆ ಮಾಡಿಲ್ಲ. ಆಕಸ್ಮಿಕವಾಗಿ ಬಿಜೆಪಿ ನೇತೃತ್ವದಲ್ಲಿ ಮೈತ್ರಿಕೂಟವು ಸರ್ಕಾರ ರಚಿಸಿದೆ. ಹೀಗಾಗಿ ಅದು ಯಾವಾಗ ಬೇಕಾದರೂ ಬೀಳಬಹುದು ಅಂತಾ ಖಾಸಗಿ ಟಿವಿಗೆ ನೀಡಿದ ಸಂದರ್ಶನದಲ್ಲಿ ಖರ್ಗೆ ಹೇಳಿದ್ದಾರೆ. ಇದನ್ನೂ ಓದಿ: ಪ್ರಧಾನಿ ಮೋದಿಯವರೇ ಈ ಹಿಂದೆ ಹಲವಾರು ಬಾರಿ ಹೇಳಿದ್ದರು. ʼಖಚಡಿ ಸರ್ಕಾರʼ ಬಹುಮತ ಇಲ್ಲದಿದ್ದರೆ ಅದು ಯಾವಾಗ ಬೇಕಾದರೂ ಬೀಳಬಹುದು. ಬಹುಮತವಿಲ್ಲದಿದ್ದರೆ ಅವರು ಯಾವುದೇ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಾಗುವುದಿಲ್ಲ. ಇವು ಅವರೇ ಹೇಳಿದ ಮಾತುಗಳು. ನಾನು ಅದೇ ವಿಷಯವನ್ನು ಪುನರಾವರ್ತಿಸುತ್ತಿದ್ದೇನೆ ಎಂದು ಖರ್ಗೆ ಮೋದಿಗೆ ಟಾಂಗ್‌ ನೀಡಿದ್ದಾರೆ. ಇದೇ ವೇಳೆ ಖರ್ಗೆಯವರ ಹೇಳಿಕೆಗೆ ಪ್ರತಿಕ್ರಿಯಿಸಿದ ಜೆಡಿಯು ನಾಯಕ ಕೆಸಿ ತ್ಯಾಗಿ, ಕಾಂಗ್ರೆಸ್ ಮುಖ್ಯಸ್ಥರು ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡುವ ಮೂಲಕ ಅರಾಜಕತೆ ಮತ್ತು ಅವಿಶ್ವಾಸದ ವಾತಾವರಣವನ್ನು ಸೃಷ್ಟಿಸುತ್ತಿದ್ದಾರೆ. ನಾನು ಇದನ್ನು ಖಂಡಿಸುತ್ತೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಈ ಬಾರಿಯ ಲೋಕಸಭಾ ಚುನಾವಣೆ ಫಲಿತಾಂಶದಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ ಬಾರದ ಹಿನ್ನೆಲೆ ಅದು ಮಿತ್ರ ಪಕ್ಷಗಳ ಬೆಂಬಲದೊಂದಿಗೆ ಸರ್ಕಾರ ರಚಿಸಿದೆ. ಈ ಮೂಲಕ ಸತತ 3ನೇ ಬಾರಿಗೆ ಮೋದಿಯವರು ಪ್ರಧಾನಿಯೂ ಆಗಿದ್ದಾರೆ. ಬಿಜೆಪಿಗೆ ಬಹುಮತ ಬಾರದ ಕಾರಣ ಸರ್ಕಾರ ರಚನೆಗೆ ಇಂಡಿಯಾ ಮೈತ್ರಿಕೂಟವೂ ಸಹ ಹರಸಾಹಸಪಡುತ್ತಿದೆ. ಟಿಡಿಪಿ ಮತ್ತ ಜೆಡಿಯು NDAಗೆ ಬೆಂಬಲ ನೀಡಿದ್ದಕ್ಕೆ ಈ 2 ಪಾರ್ಟಿಗಳು ಕೇಂದ್ರ ಸರ್ಕಾರ ರಚನೆಗೆ ಕಿಂಗ್​​​ ಮೇಕರ್ ಆಗಿ ಹೊರಹೊಮ್ಮಿವೆ. ಇತ್ತೀಚೆಗಷ್ಟೇ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಅವರು ಸಹ ಪ್ರಧಾನಿ ಮೋದಿ ವಿರುದ್ಧ ಕಿಡಿಕಾರಿದ್ದು, ಕೇವಲ 15 ದಿನಗಳಲ್ಲೇ ಸಮ್ಮಿಶ್ರಪತನವಾಗಲಿದೆ ಅಂತಾ ಹೇಳಿದ್ದರು. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...