: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕಿ ಮೇಲೆ ಮಾರಣಾಂತಿಕ ಹಲ್ಲೆ! : ಈ ಹಲ್ಲೆಯಿಂದ ಸರಸ್ವತಿ ಅವರ ತಲೆಗೆ ತೀವ್ರ ಗಾಯವಾಗಿದ್ದು, ಅವರ ತಲೆಯಿಂದ ರಕ್ತ ಸೋರುತ್ತಿರುವ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ಸಖತ್‌ ವೈರಲ್‌ ಆಗಿದೆ. ಈ ಘಟನೆಯನ್ನು ಬಿಜೆಪಿ ತೀವ್ರವಾಗಿ ಖಂಡಿಸಿದೆ. ನವದೆಹಲಿ:ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ. ಕೋಲ್ಕತ್ತಾದಲ್ಲಿ ಶನಿವಾರ ಸಂಜೆ ಈ ಘಟನೆ ನಡೆದಿದ್ದು, ತೃಣಮೂಲ ಕಾಂಗ್ರೆಸ್ ಗೂಂಡಾಗಳು ಬಿಜೆಪಿ ನಾಯಕಿ ಸರಸ್ವತಿ ಸರ್ಕಾರ್‌ ಅವರ ಮೇಲೆ ಹಲ್ಲೆ ನಡೆಸಿದ್ದಾರೆ. ಇದನ್ನೂ ಓದಿ: ಈ ಹಲ್ಲೆಯಿಂದ ಸರಸ್ವತಿ ಅವರ ತಲೆಗೆ ತೀವ್ರ ಗಾಯವಾಗಿದ್ದು, ಅವರ ತಲೆಯಿಂದ ರಕ್ತ ಸೋರುತ್ತಿರುವ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ಸಖತ್‌ ವೈರಲ್‌ ಆಗಿದೆ. ಈ ಘಟನೆಯನ್ನು ಬಿಜೆಪಿ ತೀವ್ರವಾಗಿ ಖಂಡಿಸಿದೆ. ಸೋಷಿಯಲ್‌ ಮೀಡಿಯಾದಲ್ಲಿ ಈ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಪರ-ವಿರೋಧ ಚರ್ಚೆಯಾಗುತ್ತಿದೆ. . , , ’ ( ). . , . … — (मोदी का परिवार) (@) ಇದನ್ನೂ ಓದಿ: ಈ ಬಗ್ಗೆ ಪಶ್ಚಿಮ ಬಂಗಾಳದ ಬಿಜೆಪಿಯ ಉಸ್ತುವಾರಿ ಅಮಿತ್ ಮಾಳವಿಯಾ ಟ್ವೀಟ್‌ ಮಾಡಿದ್ದು, ʼಪಶ್ಚಿಮ ಬಂಗಾಳದಲ್ಲಿ ಯಾವುದೇ ಮಹಿಳೆ ಸುರಕ್ಷಿತವಾಗಿಲ್ಲವೆಂದು ಕಿಡಿಕಾರಿದ್ದಾರೆ. ಕಳೆದ ರಾತ್ರಿ ಟಿಎಂಸಿ ಗೂಂಡಾಗಳು ಬಿಜೆಪಿಯ ಕಸ್ಬಾ ಮಂಡಲ್ ಅಧ್ಯಕ್ಷೆ (ದಕ್ಷಿಣ ಕೋಲ್ಕತ್ತಾ) ಸರಸ್ವತಿ ಸರ್ಕಾರ್ ಅವರನ್ನು ಗುರಿಯಾಗಿಸಿ ಹಲ್ಲೆ ನಡೆಸಿದ್ದಾರೆ. ಕೊಲ್ಕತ್ತಾ ಯಾವ ಮಹಿಳೆಗೂ ಸುರಕ್ಷಿತವಾಗಿಲ್ಲ. ಸಂದೇಶ್ಖಾಲಿ ಪರಿಸ್ಥಿತಿ ಕೂಡ ತೀರಾ ಹದಗೆಟ್ಟಿದೆ.ದ ಜನರು ಈ ದುಷ್ಕೃತ್ಯಗಳಿಗೆ ತಕ್ಕ ಪಾಠ ಕಲಿಸುತ್ತಾರೆʼ ಅಂತಾ ಆಕ್ರೋಶ ಹೊರಹಾಕಿದ್ದಾರೆ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...