: 2024ರ T20 ವಿಶ್ವಕಪ್‌ಗೆ ಯಾರನ್ನು ರಾಯಭಾರಿಯನ್ನಾಗಿ ನೇಮಕ ಮಾಡಲಾಗಿದೆ..? : : ಇಂದು ನಾವು ನಿಮಗಾಗಿ ಕೆಲವು ರಸಪ್ರಶ್ನೆಗಳನ್ನು ತಂದಿದ್ದೇವೆ. ಇಲ್ಲಿ ಕೇಳಲಾಗಿರುವ ಪ್ರಶ್ನೆಗಳಿಗೆ ನೀವು ಉತ್ತರಿಸಲು ಪ್ರಯತ್ನಿಸಿ ನಿಮ್ಮ ಬುದ್ಧಮಟ್ಟವನ್ನು ಪರೀಕ್ಷಿಸಿಕೊಳ್ಳಿರಿ. :ಇಂದಿನ ಕಾಲದಲ್ಲಿ ಯಾವುದೇ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು, ಸಾಮಾನ್ಯ ಜ್ಞಾನ ಮತ್ತು ಪ್ರಚಲಿತ ವಿದ್ಯಮಾನಗಳು ಬಹಳ ಅವಶ್ಯಕವೆಂದು ನಮಗೆಲ್ಲರಿಗೂ ತಿಳಿದಿದೆ. ಎಸ್‌ಎಸ್‌ಸಿ, ಬ್ಯಾಂಕಿಂಗ್, ರೈಲ್ವೆ ಮತ್ತು ಇತರ ಸ್ಪರ್ಧಾತ್ಮಕ ಪರೀಕ್ಷೆಗಳ ಪರೀಕ್ಷೆಗಳಲ್ಲಿ ಇವುಗಳಿಗೆ ಸಂಬಂಧಿಸಿದ ಅನೇಕ ಪ್ರಶ್ನೆಗಳನ್ನು ಕೇಳಲಾಗುತ್ತದೆ. ಹೀಗಾಗಿ ಇಂದು ನಾವು ನಿಮಗಾಗಿ ಅಂತಹ ಕೆಲವು ಪ್ರಶ್ನೆಗಳನ್ನು ತಂದಿದ್ದೇವೆ. ಕೆಳಗೆ ನೀಡಲಾದ ಪ್ರಶ್ನೆಗಳನ್ನು ಎಚ್ಚರಿಕೆಯಿಂದ ಓದಿ ಮತ್ತು ಅವುಗಳಿಗೆ ಉತ್ತರಿಸಲು ಪ್ರಯತ್ನಿಸಿರಿ. ಇಲ್ಲಿ ಕೇಳಲಾದ ಎಲ್ಲಾ ಪ್ರಶ್ನೆಗಳಿಗೆ ನಾವು ಸಹ ಉತ್ತರಗಳನ್ನು ನೀಡಿದ್ದೇವೆ. ಈ ಪ್ರಶ್ನೆಗಳಿಗೆ ಉತ್ತರಿಸಲು ಪ್ರಯತ್ನಿಸಿ ನಿಮ್ಮ ಬುದ್ಧಿಮಟ್ಟವನ್ನು ಪರೀಕ್ಷಿಸಿಕೊಳ್ಳಿರಿ. ಪ್ರಶ್ನೆ 1:ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಯ () ಖಾಯಂ ಆಗಿ ಯಾರು ನೇಮಕಗೊಂಡಿದ್ದಾರೆ? ಉತ್ತರ: ಜೆಫ್ ಅಲ್ಲಾರ್ಡೈಸ್ ಪ್ರಶ್ನೆ 2:2024ರ T20 ವಿಶ್ವಕಪ್‌ಗೆ ಯಾರನ್ನು ರಾಯಭಾರಿಯನ್ನಾಗಿ ನೇಮಕ ಮಾಡಲಾಗಿದೆ..? ಉತ್ತರ: ಉಸೇನ್ ಬೋಲ್ಟ್ ಪ್ರಶ್ನೆ 3:ರಣಜಿ ಟ್ರೋಫಿ ಪಂದ್ಯಾವಳಿಯು ಯಾವ ಕ್ರೀಡೆಗೆ ಸಂಬಂಧಿಸಿದೆ..? ಉತ್ತರ: ಕ್ರಿಕೆಟ್ ಪ್ರಶ್ನೆ 4:ಯಾವ ರಾಷ್ಟ್ರವು ಚಳಿಗಾಲದ ಒಲಿಂಪಿಕ್ ಕ್ರೀಡಾಕೂಟವನ್ನು ಹೆಚ್ಚಾಗಿ ಆಯೋಜಿಸಿದೆ? ಉತ್ತರ: ಯುನೈಟೆಡ್ ಸ್ಟೇಟ್ಸ್ ಆಫ್‌ ಅಮೆರಿಕ ಪ್ರಶ್ನೆ 5:ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ ಗರಿಷ್ಠ ವೈಯಕ್ತಿಕ ಸ್ಕೋರ್ ಗಳಿಸಿದ ಕ್ರಿಕೆಟಿಗ ಯಾರು? ಉತ್ತರ: ವೆಸ್ಟ್ ಇಂಡೀಸ್‌ನ ಬ್ರಿಯಾನ್ ಲಾರಾ (501*) ಇದನ್ನೂ ಓದಿ: ಪ್ರಶ್ನೆ 6:ಏಕದಿನ ಕ್ರಿಕೆಟ್‌ನಲ್ಲಿ ವೇಗದ ಶತಕವನ್ನು ಗಳಿಸಿದ ಕ್ರಿಕೆಟಿಗ ಯಾರು? ಉತ್ತರ: ದಕ್ಷಿಣ ಆಫ್ರಿಕಾದ ಎಬಿ ಡಿವಿಲಿಯರ್ಸ್ ಪ್ರಶ್ನೆ 7:ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಅತಿಹೆಚ್ಚು ವೈಯಕ್ತಿಕ ಸ್ಕೋರ್ ಗಳಿಸಿದವರು ಯಾರು? ಉತ್ತರ: ರೋಹಿತ್ ಶರ್ಮಾ (264) ಪ್ರಶ್ನೆ 8:ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಅತಿಹೆಚ್ಚು ವಿಕೆಟ್ ಪಡೆದವರು ಯಾರು? ಉತ್ತರ: ಶ್ರೀಲಂಕಾದ ಮುತ್ತಯ್ಯ ಮುರಳೀಧರನ್ (800) ಪ್ರಶ್ನೆ 9:ವಿಶ್ವದ ಅತಿ ದೊಡ್ಡ ಕ್ರಿಕೆಟ್ ಸ್ಟೇಡಿಯಂ ಯಾವುದು? ಉತ್ತರ: ಗುಜರಾತ್‌ನ ಅಹಮದಾಬಾದ್‌ನಲ್ಲಿರುವ ನರೇಂದ್ರ ಮೋದಿ ಸ್ಟೇಡಿಯಂ ಪ್ರಶ್ನೆ 10:ಫುಟ್ಬಾಲ್ ವಿಶ್ವಕಪ್ ಗೆದ್ದ ಮೊದಲ ರಾಷ್ಟ್ರ ಯಾವುದು? ಉತ್ತರ: ಉರುಗ್ವೇ ಇದನ್ನೂ ಓದಿ: ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...