: ಬಿಜೆಪಿಗೆ ಬೆಂಬಲ ಘೋಷಿಸಿದ ವೈಎಸ್ಆರ್ ಕಾಂಗ್ರೆಸ್..! 2024: ವಿಧಾನಸಭಾ ಚುನಾವಣೆಯಲ್ಲಿ ಸೋತ ಕಾರಣಕ್ಕೆ ತಮ್ಮ ಪಕ್ಷವನ್ನು ಮರೆಯಬಾರದು ಅಂತಾ ಶುಕ್ರವಾರ ಹೈದರಾಬಾದ್‌ನಲ್ಲಿ ವೈಎಸ್‌ಆರ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ವೈ.ಎಸ್.ಜಗನ್ ಮೋಹನ್ ರೆಡ್ಡಿ ಅವರು ಹೇಳಿದ್ದರು. ನಾವು ಸಂಸತ್ತಿನಲ್ಲಿ ಇನ್ನೂ 15 ಸಂಸದರನ್ನು ಹೊಂದಿದ್ದೇವೆ ಎಂದು ಅವರು ಇದೇ ವೇಳೆ ನೆನಪಿಸಿದ್ದರು. :ದೇಶ ಮತ್ತು ಆಂಧ್ರಪ್ರದೇಶದ ಹಿತಾಸಕ್ತಿಯ ದೃಷ್ಟಿಯಿಂದ ನಾವು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರಕ್ಕೆ ಬೆಂಬಲ ನೀಡುತ್ತೇವೆ ಎಂದು ವೈಎಸ್​ಆರ್​ ಕಾಂಗ್ರೆಸ್ ಶನಿವಾರ ಘೋಷಿಸಿದೆ. ಮೋದಿ ಸರ್ಕಾರದ ಮಸೂದೆಗಳು ಭಾರತ ಮತ್ತು ಆಂಧ್ರಪ್ರದೇಶದ ಹಿತಾಸಕ್ತಿಯಲ್ಲಿದ್ದರೆ ಬಿಜೆಪಿಗೆ ಸದಾ ನಮ್ಮ ಬೆಂಬಲವಿರುತ್ತದೆ ಎಂದು ಅದು ತಿಳಿಸಿದೆ. ʼನಮ್ಮ ನೀತಿಯಲ್ಲಿ ಯಾವುದೇ ಬದಲಾವಣೆ ಇಲ್ಲ‌ʼವೆಂದುಕಾಂಗ್ರೆಸ್ ಸ್ಪಷ್ಟಪಡಿಸಿದೆ. ವೈಎಸ್‌ಆರ್ ಕಾಂಗ್ರೆಸ್ ರಾಜ್ಯಸಭೆಯಲ್ಲಿ 11 ಸಂಸದರನ್ನು ಹೊಂದಿದ್ದು, ಬಿಜೆಪಿ, ಕಾಂಗ್ರೆಸ್ ಮತ್ತು ಟಿಎಂಸಿ ನಂತರ ರಾಜ್ಯಸಭೆಯಲ್ಲಿ ಇದು 4ನೇ ದೊಡ್ಡ ಪಕ್ಷವಾಗಿದೆ. ಇದನ್ನೂ ಓದಿ: ಇತ್ತೀಚಿನ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸೋತ ಕಾರಣಕ್ಕೆ ತಮ್ಮ ಪಕ್ಷವನ್ನು ಮರೆಯಬಾರದು ಅಂತಾ ಶುಕ್ರವಾರ ಹೈದರಾಬಾದ್‌ನಲ್ಲಿ ವೈಎಸ್‌ಆರ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ವೈ.ಎಸ್.ಜಗನ್ ಮೋಹನ್ ರೆಡ್ಡಿ ಅವರು ಹೇಳಿದ್ದರು. ನಾವು ಸಂಸತ್ತಿನಲ್ಲಿ ಇನ್ನೂ 15 ಸಂಸದರನ್ನು ಹೊಂದಿದ್ದೇವೆ ಎಂದು ಅವರು ಇದೇ ವೇಳೆ ನೆನಪಿಸಿದ್ದರು. ನಮ್ಮಲ್ಲಿ 11 ರಾಜ್ಯಸಭಾ ಸದಸ್ಯರು ಮತ್ತು 4 ಲೋಕಸಭಾ ಸದಸ್ಯರಿದ್ದಾರೆ. ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ ಭಾಗವಾಗಿರುವ ತೆಲುಗು ದೇಶಂ ಪಕ್ಷ () ಲೋಕಸಭೆಯಲ್ಲಿ 16 ಸದಸ್ಯರನ್ನು ಹೊಂದಿದ್ದರೂ, ನಾವು 15 ಸಂಸದರನ್ನು ಹೊಂದಿರುವ ಪ್ರಬಲ ಪಕ್ಷವಾಗಿದ್ದೇವೆ. ನಾವು ಸಂಸತ್ತಿನಲ್ಲಿ ನಿರ್ಣಾಯಕ ಪಾತ್ರ ವಹಿಸಲಿದ್ದೇವೆ ಅಂತಾತಿಳಿಸಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಹಿನ್ನಡೆಯಾಗಿದ್ದರೂ ವೈಎಸ್‌ಆರ್‌ ಕಾಂಗ್ರೆಸ್ ಬಲಿಷ್ಠವಾಗಿದ್ದು, ಯಾವ ಶಕ್ತಿಯಿಂದಲೂ ನಮ್ಮನ್ನು ಬುಡಮೇಲು ಮಾಡಲು ಸಾಧ್ಯವಿಲ್ಲವೆಂದು ಅವರು ತಮ್ಮ ವಿರೋಧಿಗಳಿಗೆ ಖಡಕ್‌ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...