ಇವಿಎಂ ಮತಗಳ ಜೊತೆ ವಿವಿಪ್ಯಾಟ್ ಚೀಟಿ ಎಣಿಕೆಗೆ ಕೋರಿದ್ದ ಅರ್ಜಿ ವಜಾ : ಸುಪ್ರೀಂಕೋರ್ಟ್ : ಇವಿಎಂ ಮಷೀನ್ ನಲ್ಲಿ ಬಿದ್ದ ಮತಗಳನ್ನು ಸಂಪೂರ್ಣವಾಗಿ ವಿವಿಪ್ಯಾಟ್ ಚೀಟಿಗಳೊಂದಿಗೆ ತಾಳೆ ಮಾಡಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಇವಿಎಂ ಮೆಷೀನ್​ನಲ್ಲಿ ಬಿದ್ದ ಮತಗಳನ್ನು ಸಂಪೂರ್ಣವಾಗಿ ವಿವಿಪ್ಯಾಟ್ ಚೀಟಿಗಳೊಂದಿಗೆ ತಾಳೆ ಮಾಡಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ನ್ಯಾಯಮೂರ್ತಿಗಳಾದ ಸಂಜೀವ್ ಖನ್ನ ಮತ್ತು ದೀಪಂಕರ್ ದತ್ತಾ ಅವರು ಈ ಆದೇಶ ನೀಡಿದ್ದಾರೆ. ಇದನ್ನು ಓದಿ : ಏಪ್ರಿಲ್ 18ರಂದು ಸುಪ್ರೀಂ ನ್ಯಾಯಪೀಠ ಈ ಅರ್ಜಿಗಳ ವಿಚಾರಣೆ ಮುಕ್ತಾಯಗೊಳಿಸಿ ತೀರ್ಪು ಕಾಯ್ದಿರಿಸಿತ್ತು. ಇದಾದ ನಂತರ ಏಪ್ರಿಲ್ 24ರಂದು ಚುನಾವಣಾ ಆಯೋಗದಿಂದ ಕೆಲ ಅಂಶಗಳ ಬಗ್ಗೆ ಸ್ಪಷ್ಟೀಕರಣ ಪಡೆಯಲು ವಿಚಾರಣೆ ನಡೆಸಿತ್ತು. ನಿನ್ನೆ ಏಪ್ರಿಲ್ ೨೫ರಂದು ನ್ಯಾಯಮೂರ್ತಿಗಳಾದ ಸಂಜೀವ್ ಖನ್ನ ಮತ್ತು ದೀಪಂಕರ್ ದತ್ತಾ ಅವರು ಸುಪ್ರೀಂ ಕೋರ್ಟ್ ಅರ್ಜಿಯನ್ನು ವಜಾಗೊಳಿಸಿರುವ ಕುರಿತಂತೆ ಆದೇಶ ಹೊರಡಿಸಿದ್ದಾರೆ. ಇವಿಎಂ ಮೆಷೀನ್​ನಲ್ಲಿ ಬಿದ್ದ ಮತಗಳನ್ನು ಸಂಪೂರ್ಣವಾಗಿ ವಿವಿಪ್ಯಾಟ್ ಚೀಟಿಗಳೊಂದಿಗೆ ತಾಳೆ ಮಾಡಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದ್ದು, ವಿಎಂ ಮತ್ತು ವಿವಿಪ್ಯಾಟ್ ಪೂರ್ಣ ತಾಳೆಯಾಗಬೇಕೆನ್ನುವ ಮನವಿಯನ್ನು ತಿರಸ್ಕರಿಸಲು ನಿರ್ಧರಿಸಿದೆ ಎಂದು ತಿಳಿಸಿದೆ. ಪ್ರಜಾಪ್ರಭುತ್ವದ ಎಲ್ಲಾ ವಿಷಯಗಳಲ್ಲಿ ವಿಶ್ವಾಸ ಇರುವುದು ಅವಶ್ಯಕವಿದೆ ಎಂದು ಕೋರ್ಟ್ ಅಭಿಪ್ರಾಯಪಟ್ಟಿದ್ದು ಮತ್ತು ಸಿಂಬಲ್ ಲೋಡಿಂಗ್ ಯೂನಿಟ್ ಅನ್ನು ಸೀಲ್ ಮಾಡಿ 45 ದಿನ ಇಡುವಂತೆಯೂ ಮತ್ತು ಅಭ್ಯರ್ಥಿಗಳ ಮನವಿ ಮೇರೆಗೆ ವಿಪ್ಯಾಟ್ ವೆರಿಫಿಕೇಶನ್ ಮಾಡಲು ಅವಕಾಶ ನೀಡುವಂತೆಯೂ ಕೋರ್ಟ್ ಆದೇಶಿಸಿದೆ. ಇದನ್ನು ಓದಿ : ವ್ಯವಸ್ಥೆಯ ರಚನಾತ್ಮಕತೆ ಕುರಿತಂತೆ ಸಲಹೆಗಳನ್ನು ನೀಡಿ ಆದರೆ, ವ್ಯವಸ್ಥೆಯನ್ನು ಅವಮಾನಿಸುವುದು ತಪ್ಪು ಮತ್ತು ನಂಬಿಕೆ ಮತ್ತು ಸಹಕಾರದ ಸಂಸ್ಕೃತಿಯನ್ನು ಬೆಳೆಸುವ ಮೂಲಕ ಪ್ರಜಾತಂತ್ರದ ಧ್ವನಿಯನ್ನು ಬಲಪಡಿಸಬಹುದು ಪ್ರಜೆಗಳ ಕರ್ತವ್ಯ ನ್ಯಾಯಮೂರ್ತಿ ದೀಪಂಕರ್ ದತ್ತಾ ತಮ್ಮ ತೀರ್ಪಿನಲ್ಲಿ ತಿಳಿಸಿದ್ದಾರೆ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...