ಕಾಂಗ್ರೆಸ್ ಪಕ್ಷ ಗೆದ್ದರೆ ನಿಮ್ಮ ಮಂಗಳಸೂತ್ರ ಸುರಕ್ಷಿತವಾಗಿರಲ್ಲ: ಪ್ರಧಾನಿ ಮೋದಿ 2024: ನಾನು ನನ್ನ ದೇಶವಾಸಿಗಳಿಗೆ ಎಚ್ಚರಿಕೆ ನೀಡಲು ಬಯಸುತ್ತೇನೆ. ಕಾಂಗ್ರೆಸ್‌ ಮತ್ತು ಇಂಡಿಯಾ ಮೈತ್ರಿಕೂಟವು ನಿಮ್ಮ ಗಳಿಕೆ ಮತ್ತು ನಿಮ್ಮ ಆಸ್ತಿಯ ಮೇಲೆ ಕಣ್ಣಿಟ್ಟಿದೆ ಎಂದು ಪ್ರಧಾನಿ ಮೋದಿ ಎಚ್ಚರಿಕೆ ನೀಡಿದ್ದಾರೆ. ನವದೆಹಲಿ:ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಜನರ ಆಸ್ತಿಯನ್ನು ವಶಪಡಿಸಿಕೊಳ್ಳಲು ಮತ್ತು ಅವರ ಜೀವಿತಾವಧಿಯ ಉಳಿತಾಯವನ್ನು ಕಸಿದುಕೊಳ್ಳಲು ಸಂಪತ್ತಿನ ಸಮೀಕ್ಷೆ ನಡೆಸಲಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಜನರ ಸಂಪತ್ತನ್ನು ಮರುಹಂಚಿಕೆ ಮಾಡುವುದಾಗಿ ಪ್ರಧಾನಿ ಮೋದಿ ಭಾನುವಾರ ಆರೋಪಿಸಿದ್ದರು. ದೇಶದ ಸಂಪನ್ಮೂಲಗಳ ಮೇಲೆ ಅಲ್ಪಸಂಖ್ಯಾತ ಸಮುದಾಯಕ್ಕೆ ಮೊದಲ ಹಕ್ಕಿದೆ ಎಂಬ ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಅವರ ಹೇಳಿಕೆಯನ್ನು ಉಲ್ಲೇಖಿಸಿ ಪ್ರಧಾನಿ ಮೋದಿ ತಮ್ಮ ಆರೋಪವನ್ನು ಪುನರುಚ್ಚರಿಸಿದ್ದಾರೆ. ದಲ್ಲಿ ನಿಮ್ಮ ಮಂಗಳಸೂತ್ರ ಸುರಕ್ಷಿತವಾಗಿರುವುದಿಲ್ಲ ಎಂದು ಪ್ರಧಾನಿ ಮೋದಿ ಅಲಿಘರ್‌ನಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಹೇಳಿದ್ದಾರೆ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ದೇಶದ ತಾಯಂದಿರು ಮತ್ತು ಸಹೋದರಿಯರ ಚಿನ್ನವನ್ನು ಲೆಕ್ಕಹಾಕಿ ಅದರ ಬಗ್ಗೆ ಮಾಹಿತಿ ಪಡೆದು ನಂತರ ಆ ಆಸ್ತಿಯನ್ನು ಹಂಚುವುದಾಗಿ ಹೇಳುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ನಾನು ನನ್ನ ದೇಶವಾಸಿಗಳಿಗೆ ಎಚ್ಚರಿಕೆ ನೀಡಲು ಬಯಸುತ್ತೇನೆ. ಕಾಂಗ್ರೆಸ್‌ ಮತ್ತು ಇಂಡಿಯಾ ಮೈತ್ರಿಕೂಟವು ನಿಮ್ಮ ಗಳಿಕೆ ಮತ್ತು ನಿಮ್ಮ ಆಸ್ತಿಯ ಮೇಲೆ ಕಣ್ಣಿಟ್ಟಿದೆ. ತಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ, ಯಾರು ಎಷ್ಟು ಸಂಪಾದಿಸುತ್ತಾರೆ, ಯಾರು ಎಷ್ಟು ಆಸ್ತಿ ಹೊಂದಿದ್ದಾರೆಂದು ತನಿಖೆ ನಡೆಸುತ್ತೇವೆಂದು ಕಾಂಗ್ರೆಸ್‌ನ ಶೆಹಜಾದಾ ಹೇಳುತ್ತದೆ. ನಮ್ಮ ತಾಯಂದಿರು ಮತ್ತು ಸಹೋದರಿಯರಿಗೆ ಇದು ʼಸ್ತ್ರೀ ಧನʼವೆಂದು ಪರಿಗಣಿಸಲಾಗಿದೆ. ಕಾನೂನು ಕೂಡ ಅದನ್ನು ರಕ್ಷಿಸುತ್ತದೆ. ಅವರ ಉದ್ದೇಶವು ತಾಯಂದಿರು ಮತ್ತು ಸಹೋದರಿಯರ ಚನ್ನವನ್ನು ಕದಿಯುವುದು ಅಂತಾ ಪ್ರಧಾನಿ ಮೋದಿ ಟೀಕಿಸಿದ್ದಾರೆ. ನಿಮ್ಮ ಗ್ರಾಮದಲ್ಲಿ ಪೂರ್ವಿಕರ ಮನೆ ಇದ್ದರೆ, ನಿಮ್ಮ ಮಕ್ಕಳ ಭವಿಷ್ಯಕ್ಕಾಗಿ ನಿಮ್ಮ ನಗರದಲ್ಲಿ ಒಂದು ಸಣ್ಣ ಫ್ಲ್ಯಾಟ್‌ ಖರೀದಿಸಿದರೆ, ಅವರು ಇವೆರಡರಲ್ಲಿ ಒಂದನ್ನು ಕಸಿದುಕೊಳ್ಳುತ್ತಾರೆ. ಇದು ಮಾವಾದಿ ಚಿಂತನೆ, ಇದು ಕಮ್ಯುನಿಸ್ಟರ ಚಿಂತನೆ. ಹೀಗೆ ಮಾಡುವುದರಿಂದ ಅವರು ಈಗಾಗಲೇ ಅನೇಕ ದೇಶಗಳನ್ನು ಹಾಳು ಮಾಡಿದ್ದಾರೆ. ಈಗ ಕಾಂಗ್ರೆಸ್‌ ಮತ್ತುವು ಅದೇ ನೀತಿಯನ್ನು ಭಾರತದಲ್ಲಿ ಜಾರಿಗೆ ತರಲು ಬಯಸಿದೆ ಅಂತಾ ಪ್ರಧಾನಿ ಮೋದಿ ಕುಟುಕಿದ್ದಾರೆ. ಇದನ್ನೂ ಓದಿ: ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...