15 ವರ್ಷದ ದಾಂಪತ್ಯಕ್ಕೆ ವಿಚ್ಛೇದನ ಘೋಷಿಸಿದ ಪ್ರಖ್ಯಾತ ನಟ: ಅಂದು 'ನನ್ನ ಪತ್ನಿಯೇ ನನ್ನ ರಾಣಿ' ಎಂದು ಹೇಳಿ ಈಗ ಡಿವೋರ್ಸ್ : ಈ ವರ್ಷದ ಆರಂಭದಲ್ಲಿ, ಆರತಿ ಮತ್ತು ಜಯಂ ರವಿ ವಿಚ್ಛೇದನದ ಬಗ್ಗೆ ವದಂತಿಗಳು ಭುಗಿಲೆದ್ದಿದ್ದವು. ಜಯಂರವಿ ಕೂಡ ತಮ್ಮ ಇನ್ʼಸ್ಟಾಗ್ರಾಂನಿಂದ ಆರತಿ ಜೊತೆಗಿದ್ದ ಫೋಟೋಗಳನ್ನು ಡಿಲೀಟ್‌ ಮಾಡಿದ್ದರು. :ತಮಿಳು ನಟ ಜಯಂ ರವಿ ಸೆಪ್ಟೆಂಬರ್ 9 ರಂದು ತಮ್ಮ ಪತ್ನಿ ಆರತಿಗೆ ಡಿವೋರ್ಸ್‌ ನೀಡುವುದಾಗಿ ಘೋಷಿಸಿದ್ದಾರೆ. ಈ ವಿಷಯದ ಬಗ್ಗೆ ರವಿ ತಮ್ಮ ಎಕ್ಸ್ ಹ್ಯಾಂಡಲ್‌ʼನಲ್ಲಿ ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ. ಜೊತೆಗೆ ಈ ಕಷ್ಟದ ಸಮಯದಲ್ಲಿ ಗೌಪ್ಯತೆ ಕಾಪಾಡಲು ವಿನಂತಿಸಿದ್ದಾರೆ. ಇದನ್ನೂ ಓದಿ: "ಬಹಳಷ್ಟು ಯೋಚನೆ, ಚಿಂತನೆ ಮತ್ತು ಚರ್ಚೆಗಳ ನಂತರ ನಾನು ಆರತಿ ಜೊತೆಗಿನ ದಾಂಪತ್ಯವನ್ನು ಅಂತ್ಯಗೊಳಿಸುವ ಕಠಿಣ ನಿರ್ಧಾರವನ್ನು ತೆಗೆದುಕೊಂಡಿದ್ದೇನೆ. ಈ ನಿರ್ಧಾರವನ್ನು ತರಾತುರಿಯಿಂದ ತೆಗೆದುಕೊಂಡಿಲ್ಲ. ಇದು ವೈಯಕ್ತಿಕ ಕಾರಣಗಳಿಂದ ತೆಗೆದುಕೊಂಡ ನಿರ್ಧಾರವೆಂದು ನಾನು ನಂಬುತ್ತೇನೆ" ಎಂದಿದ್ದಾರೆ. ಇದಷ್ಟೇ ಅಲ್ಲದೆ, ಅಭಿಮಾನಿಗಳು ಮತ್ತು ಜನರು ತಮ್ಮ ಖಾಸಗಿತನವನ್ನು ಗೌರವಿಸುವಂತೆ ಜಯಂ ರವಿ ವಿನಂತಿಸಿದ್ದಾರೆ. "ಈ ಕಷ್ಟದ ಸಮಯದಲ್ಲಿ ನನ್ನ ಮತ್ತು ನನ್ನ ಕುಟುಂಬದ ಸದಸ್ಯರ ಗೌಪ್ಯತೆಯನ್ನು ಗೌರವಿಸಲು ನಾನು ನಿಮ್ಮೆಲ್ಲರನ್ನು ವಿನಂತಿಸುತ್ತೇನೆ. ಈ ವಿಷಯದ ಬಗ್ಗೆ ಯಾವುದೇ ಊಹೆಗಳು, ವದಂತಿಗಳು ಅಥವಾ ಆರೋಪಗಳನ್ನು ಮಾಡದಂತೆ ನಿಮ್ಮೆಲ್ಲರಲ್ಲಿ ಮನವಿ ಮಾಡಿಕೊಳ್ಳುತ್ತೇನೆ" ಎಂದು ಪೋಸ್ಟ್ ಮಾಡಿದ್ದಾರೆ. ಇದನ್ನೂ ಓದಿ: ಈ ವರ್ಷದ ಆರಂಭದಲ್ಲಿ, ಆರತಿ ಮತ್ತು ಜಯಂ ರವಿ ವಿಚ್ಛೇದನದ ಬಗ್ಗೆ ವದಂತಿಗಳು ಭುಗಿಲೆದ್ದಿದ್ದವು. ಜಯಂರವಿ ಕೂಡ ತಮ್ಮ ಇನ್ʼಸ್ಟಾಗ್ರಾಂನಿಂದ ಆರತಿ ಜೊತೆಗಿದ್ದ ಫೋಟೋಗಳನ್ನು ಡಿಲೀಟ್‌ ಮಾಡಿದ್ದರು. ಇನ್ನು 2009ರಲ್ಲಿ ಮದುವೆಯಾಗಿದ್ದ ಈ ಜೋಡಿಗೆ ಆರವ್ ಮತ್ತು ಅಯಾನ್ ಎಂಬ ಇಬ್ಬರು ಗಂಡುಮಕ್ಕಳಿದ್ದಾರೆ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...