ಜಮ್ಮು-ಕಾಶ್ಮೀರಕ್ಕೆ ನಾಳೆ ಪ್ರಧಾನಿ ಭೇಟಿ, ಸಾವಿರಾರು ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಪ್ರಧಾನಿ ಮೋದಿ ನಾಳೆ ಜಮ್ಮು ಕಾಶ್ಮೀರಕ್ಕೆ ಭೇಟಿ ನೀಡಲಿದ್ದು, ಸಾವಿರಾರು ಕೋಟಿ ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ. ಪ್ರಧಾನಿ ಮೋದಿ ನಾಳೆ ಜಮ್ಮು ಕಾಶ್ಮೀರಕ್ಕೆ ಭೇಟಿ ನೀಡಲಿದ್ದು, ಸಾವಿರಾರು ಕೋಟಿ ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ. ಜೂನ್ 20ರಂದು ಪ್ರಧಾನಿ ಮೋದಿ ಜಮ್ಮು ಕಾಶ್ಮೀರದ ಭೇಟಿ ನೀಡಲಿದ್ದು, ಸಂಜೆ ಆರು ಗಂಟೆಗೆ ಶ್ರೀನಗರದ ಶೇರ್ ಎ ಕಾಶ್ಮೀರ ಇಂಟರ್ನ್ಯಾಷನಲ್ ಕಾನ್ಫರೆನ್ಸ್ ಸೆಂಟರ್ನಲ್ಲಿ ಭಾಗವಹಿಸಲಿದ್ದಾರೆ. ಇದನ್ನು ಓದಿ : ಕಾರ್ಯಕ್ರಮದಲ್ಲಿ ಪ್ರಧಾನಿ ಭಾಗವಹಿಸಿ, ಜಮ್ಮು-ಕಾಶ್ಮೀರದ ಹಲವು ಅಭಿವೃದ್ಧಿ ಯೋಜನೆಗಳ ಉದ್ಘಾಟನೆಯೊಂದಿಗೆ ಶಂಕುಸ್ಥಾಪನೆ ಮಾಡಲಿದ್ದಾರೆ. ಶಂಕು ಸ್ಥಾಪನೆ ಮಾಡುವ ಮೂಲಕ ಕೃಷಿ ಕ್ಷೇತ್ರಕ್ಕೆ ಹೆಚ್ಚಿನ ಉತ್ತೇಜನ ನೀಡುವುದರ ಜೊತೆಗೆ, ಸಂಬಂಧಿತ ಕ್ಷೇತ್ರಗಳಿಗೆ ಸಂಬಂಧಿಸಿ ಯೋಜನೆಗಳನ್ನು ಈ ಮೂಲಕ ಪ್ರಾರಂಭಿಸಲಿದ್ದಾರೆ. ಜೂನ್ 21ರಂದು ಬೆಳಿಗ್ಗೆ 6.30ಕ್ಕೆ 10ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಧಾನಿ ಭಾಗವಹಿಸಲಿದ್ದಾರೆ. ಇದನ್ನು ಓದಿ : ಕೋಟಿ ವೆಚ್ಚದ 84 ಪ್ರಮುಖ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನಡೆಯಲಿದ್ದು. 1,500 ಕೋಟಿಗಳನ್ನು ರಸ್ತೆ, ಮೂಲಸೌಕರ್ಯ, ನೀರು ಸರಬರಾಜು ಯೋಜನೆಗಳು, ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹ, ಸರ್ಕಾರಿ ಪದವಿ ಕಾಲೇಜುಗಳು, ಕೈಗಾರಿಕಾ ವಸಾಹತುಗಳ ಅಭಿವೃದ್ಧಿ ಮತ್ತು ಅನೇಕ ಕಲ್ಯಾಣ ಮತ್ತು ಅಭಿವೃದ್ಧಿ ಕಾರ್ಯಕ್ರಮಗಳಿಗೆ ಬಳಸಲಾಗುತ್ತದೆ. ಜಮ್ಮು ಮತ್ತು ಕಾಶ್ಮೀರದ 20 ಜಿಲ್ಲೆಗಳಲ್ಲಿ 15 ಲಕ್ಷ ಜನರಿಗೆ ಉದ್ಯೋಗ ಒದಗಿಸಲು 1,800 ಕೋಟಿ ರೂ. ಪ್ರಧಾನಮಂತ್ರಿ ಅವರು ಸರ್ಕಾರಿ ಸೇವೆಗಳಿಗೆ ಆಯ್ಕೆಯಾದ 2000 ಕ್ಕೂ ಹೆಚ್ಚು ಉದ್ಯೋಗಿಗಳಿಗೆ ನೇಮಕಾತಿ ಪತ್ರಗಳನ್ನು ವಿತರಿಸಲಿದ್ದಾರೆ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...