: ಗಾಜಿಯಾಬಾದ್‌ನ ಮೂರು ಅಂತಸ್ತಿನ ಕಟ್ಟಡದಲ್ಲಿ ಅಗ್ನಿ ಅವಘಡ, ಐವರು ಸಜೀವ ದಹನ : ಗಾಜಿಯಾಬಾದ್‌ನ ಲೋನಿ ಪ್ರದೇಶದಲ್ಲಿರುವ ಮೂರು ಅಂತಸ್ತಿನ ಕಟ್ಟಡದಲ್ಲಿ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದ್ದು, ಇಬ್ಬರು ಮಕ್ಕಳು ಸೇರಿದಂತೆ ಐದು ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ. : ಗಾಜಿಯಾಬಾದ್‌ನ ಲೋನಿಯ ಬೆಹ್ತಾ ಹಾಜಿಪುರ ಪ್ರದೇಶದಲ್ಲಿರುವ ಮೂರು ಅಂತಸ್ತಿನ ಮನೆಯಲ್ಲಿ ಸಂಭವಿಸಿರುವ ಅಗ್ನಿ ದುರಂತದಲ್ಲಿ 7 ವರ್ಷದ ಬಾಲಕಿ, ಏಳು ತಿಂಗಳ ಮಗು ಸೇರಿದಂತೆ ಐದು ಮಂದಿ ಸಜೀವವಾಗಿ ದಹನವಾಗಿರುವ ಘಟನೆ ನಡೆದಿದೆ. ಈ ಅಗ್ನಿ ಅವಘಟಕ್ಕೆ ಶಾರ್ಟ್ ಸರ್ಕ್ಯೂಟ್ ಕಾರಣ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಕ್ಕೆ ( ) ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಗಾಜಿಯಾಬಾದ್ ಹೆಚ್ಚುವರಿ ಪೊಲೀಸ್ ಕಮಿಷನರ್ ದಿನೇಶ್ ಕುಮಾರ್ ಪಿ, ತಡರಾತ್ರಿ ಬೆಹ್ತಾ ಹಾಜಿಪುರದ ಮನೆಯೊಂದರಲ್ಲಿ ಬೆಂಕಿ ಹೊತ್ತಿ ಉರಿಯುತ್ತಿದೆ. ಆ ಕಟ್ಟಡದಲ್ಲಿ ಹಲವರು ಸಿಲುಕಿದ್ದಾರೆ ಎಂದು ನಮಗೆ ಮಾಹಿತಿ ಬಂದಿದೆ. ತಕ್ಷಣವೇ ಸ್ಥಳೀಯ ಪೊಲೀಸರು ಮತ್ತು ಅಗ್ನಿಶಾಮಕ ದಳ ಸ್ಥಳಕ್ಕಾಗಮಿಸಿ ಗಾಯಗೊಂಡ ಸ್ಥಿತಿಯಲ್ಲಿದ್ದ ಮಹಿಳೆ ಮತ್ತು ಮಗುವನ್ನು ರಕ್ಷಿಸಿ ಆಸ್ಪತ್ರೆಗೆ ಕಳುಹಿಸಲಾಯಿತು. ಕಟ್ಟಡ ಎರಡನೇ ಅಂತಸ್ತಿನಲ್ಲಿ ಬೆಂಕಿಯ ಕೆನ್ನಾಲಿಗೆಯಿಂದ ಮೂವರು ವಯಸ್ಕರು, ಇಬ್ಬರು ಮಕ್ಕಳು ಸೇರಿದಂತೆ ಐದು ಜನರ ಮೃತದೇಹವನ್ನು ಹೊರತೆಗೆಯಲಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ- ಥರ್ಮಾಕೋಲ್‌ನಿಂದ ಸಂಭವಿಸಿದ ಅಗ್ನಿ ದುರಂತ:ಯಲ್ಲಿ ಮನೆಯೊಳಗೆ ಇರಿಸಲಾಗಿದ್ದ ಕೆಲವು ಥರ್ಮಾಕೋಲ್/ಫೋಮ್ ವಸ್ತುಗಳ ಸ್ಪರ್ಶದಿಂದ ಬೆಂಕಿ ವೇಗವಾಗಿ ಎಲ್ಲೆಡೆ ವ್ಯಾಪಿಸಿದೆ ಎಂದು ಸ್ಥಳೀಯ ಪೊಲೀಸರು ಮಾಹಿತಿ ನೀಡಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಡಿಸಿಪಿ (ಗ್ರಾಮೀಣ) ವಿವೇಕ್ ಚಂದ್ರ ಯಾದವ್ ನಂತರ ಗಾಯಗೊಂಡ ಇಬ್ಬರನ್ನು 26 ವರ್ಷದ ಉಸಾಮಾ ಮತ್ತು ಅಪ್ರಾಪ್ತ ಬಾಲಕ ಎಂದು ಗುರುತಿಸಲಾಗಿದೆ ಎಂದು ಹೇಳಿದರು. ಇದನ್ನೂ ಓದಿ- ಮೃತರನ್ನು ಶೈಫುಲ್ ರೆಹಮಾನ್ (35), ಪರ್ವೀನ್ (28), 26 ವರ್ಷದ ನಜ್ರಾ ಮತ್ತು ಮಗಳು ಇಕ್ರಾ (7), ಮೊಹಮ್ಮದ್ ಫೈಜ್ (ಏಳು ತಿಂಗಳು) ಮತ್ತು ಎಂದು ಪೊಲೀಸರು ಗುರುತಿಸಲಾಗಿದ್ದು, ಇವರೆಲ್ಲರೂ ಒಂದೇ ಕುಟುಂಬಕ್ಕೆ ಸೇರಿದವರು ಎಂದು ಪೊಲೀಸರು ತಿಳಿಸಿದ್ದಾರೆ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...