: ಉತ್ತರಾಖಂಡದ ಉತ್ತರಕಾಶಿಯಲ್ಲಿ ರಸ್ತೆ ಅಪಘಾತ: 14 ಜನರಿಗೆ ಗಾಯ, ಮೂವರು ಸಾವು : ಉತ್ತರಾಖಂಡದ ಉತ್ತರಕಾಶಿಯ ಗಂಗನಾನಿ ಬಳಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರ ಬಸ್ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾಗಿ ಘಟನೆ ಮಂಗಳವಾರ ರಾತ್ರಿ ನಡೆದಿದೆ. :ಉತ್ತರಾಖಂಡದ ಉತ್ತರಕಾಶಿಯ ಗಂಗನಾನಿ ಬಳಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರ ಬಸ್ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾಗಿ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಉತ್ತರಾಖಂಡದ ಉತ್ತರಕಾಶಿಯ ಗಂಗನಾನಿ ಬಳಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರ ಬಸ್ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾಗಿ ಮೂವರು ಮಹಿಳೆಯರು ಸಾವನ್ನಪ್ಪಿದ್ದಾರೆ ಮತ್ತು 14 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಉತ್ತರಾಖಂಡದ ಉತ್ತರಕಾಶಿಯ ಗಂಗನಾನಿ ಬಳಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರ ಬಸ್ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾಗಿ ಮೂವರು ಮಹಿಳೆಯರು ಸಾವನ್ನಪ್ಪಿದ್ದಾರೆ ಮತ್ತು 14 ಮಂದಿ ಗಾಯಗೊಂಡಿದ್ದು, ಘಟನೆ ನಡೆದಾಗ ಬಸ್ ಗಂಗೋತ್ರಿ ಧಾಮದಿಂದ ಬಂದು ಉತ್ತರಕಾಶಿಗೆ ಹೋಗುತ್ತಿತ್ತು. ಇದನ್ನು ಓದಿ : ಮಂಗಳವಾರ ರಾತ್ರಿ ಈ ಘಟನೆ ನಡೆದಿದ್ದು, ಈ ಅಪಘಾತದಲ್ಲಿ 14 ಮಂದಿ ಗಾಯಗೊಂಡಿದ್ದು, 12 ಮಂದಿ ಗಂಭೀರವಾಗಿದ್ದು, ಮೂವರು ಮಹಿಳಾ ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ. ಗಂಭೀರವಾಗಿ ಗಾಯಗೊಂಡವರನ್ನು ಡೆಹ್ರಾಡೂನ್‌ ನ ಏಮ್ಸ್ ರಿಷಿಕೇಶ್ ಮತ್ತು ಡೂನ್ ಆಸ್ಪತ್ರೆಗೆ ಸೇರಿಸಲಾಗಿದ್ದು ಚಿಕೆತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯ ಬಗ್ಗೆ ಮಾಹಿತಿ ಪಡೆದ ಪೊಲೀಸರು, ಎಸ್‌ಡಿಆರ್‌ಎಫ್, ಎನ್‌ಡಿಆರ್‌ಎಫ್, ಕಂದಾಯ ಮತ್ತು ಇತರ ವಿಪತ್ತು ಸ್ಪೋಟಕ ತಂಡಗಳೊಂದಿಗೆ ತಕ್ಷಣ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದರು. ಅಪಘಾತ ಸಂಭವಿಸಿದ ಕೆಲವು ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಪೂಜ್ಯ ಗಂಗೋತ್ರಿ ಧಾಮದಿಂದ ಉತ್ತರಕಾಶಿ ಪಟ್ಟಣಕ್ಕೆ ತೆರಳುತ್ತಿದ್ದ ವೇಳೆ ಬಸ್ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...