ಭಾರತೀಯ ಸೇನಾ ಮುಖ್ಯಸ್ಥರಾಗಿ ಉಪೇಂದ್ರ ದ್ವಿವೇದಿ ನೇಮಕ ಕೇಂದ್ರ ಸರ್ಕಾರವು ಲೆಫ್ಟಿನೆಂಟ್ ಜನರಲ್ ಉಪೇಂದ್ರ ದ್ವಿವೇದಿ ಅವರನ್ನು ಜೂನ್ 30, 2024 ರ ಮಧ್ಯಾಹ್ನದಿಂದ ಜಾರಿಗೆ ಬರುವಂತೆ ಸೇನಾ ಸಿಬ್ಬಂದಿಯ ಮುಂದಿನ ಮುಖ್ಯಸ್ಥರಾಗಿ ಸರ್ಕಾರವು ನೇಮಕ ಮಾಡಿದೆ. ಪ್ರಸ್ತುತ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಸಿ ಪಾಂಡೆ, , , ಅವರು ಜೂನ್ 30, 2024 ರಂದು ಕಛೇರಿಯಿಂದ ನಿವೃತ್ತರಾಗಲಿದ್ದಾರೆ. ನವದೆಹಲಿ:ಕೇಂದ್ರ ಸರ್ಕಾರವು ಲೆಫ್ಟಿನೆಂಟ್ ಜನರಲ್ ಉಪೇಂದ್ರ ದ್ವಿವೇದಿ ಅವರನ್ನು ಜೂನ್ 30, 2024 ರ ಮಧ್ಯಾಹ್ನದಿಂದ ಜಾರಿಗೆ ಬರುವಂತೆ ಸೇನಾ ಸಿಬ್ಬಂದಿಯ ಮುಂದಿನ ಮುಖ್ಯಸ್ಥರಾಗಿ ಸರ್ಕಾರವು ನೇಮಕ ಮಾಡಿದೆ. ಪ್ರಸ್ತುತ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಸಿ ಪಾಂಡೆ, , , ಅವರು ಜೂನ್ 30, 2024 ರಂದು ಕಛೇರಿಯಿಂದ ನಿವೃತ್ತರಾಗಲಿದ್ದಾರೆ. ಇದನ್ನೂ ಓದಿ- ಜುಲೈ 01, 1964 ರಂದು ಜನಿಸಿದ ಲೆಫ್ಟಿನೆಂಟ್ ಜನರಲ್ ಉಪೇಂದ್ರ ದ್ವಿವೇದಿ ಅವರು ಡಿಸೆಂಬರ್ 15, 1984 ರಂದು ಭಾರತೀಯ ಸೇನೆಯ ಪದಾತಿ ದಳಕ್ಕೆ (ಜಮ್ಮು ಮತ್ತು ಕಾಶ್ಮೀರ ರೈಫಲ್ಸ್) ನೇಮಕಗೊಂಡರು. ಸುಮಾರು 40 ವರ್ಷಗಳ ಕಾಲ ಅವರ ಸುದೀರ್ಘ ಮತ್ತು ವಿಶಿಷ್ಟ ಸೇವೆಯಲ್ಲಿ ಅವರು ವಿವಿಧ ಸೇವೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಇದನ್ನೂ ಓದಿ: ಲೆಫ್ಟಿನೆಂಟ್ ಜನರಲ್ ಶ್ರೇಣಿಯಲ್ಲಿ, ಸೇನಾ ಸಿಬ್ಬಂದಿಯ ಉಪ ಮುಖ್ಯಸ್ಥರಾಗಿ ನೇಮಕಗೊಳ್ಳುವ ಮೊದಲು, 2022-2024 ರಿಂದ ಡೈರೆಕ್ಟರ್ ಜನರಲ್ ಇನ್‌ಫಾಂಟ್ರಿ ಮತ್ತು ಜನರಲ್ ಆಫೀಸರ್ ಕಮಾಂಡಿಂಗ್ ಇನ್ ಚೀಫ್ (ಹೆಡ್‌ಕ್ವಾರ್ಟರ್ ನಾರ್ದರ್ನ್ ಕಮಾಂಡ್) ಸೇರಿದಂತೆ ಪ್ರಮುಖ ಹುದ್ದೆಗಳನ್ನು ನಿಭಾಯಿಸಿದ್ದಾರೆ ಸೈನಿಕ್ ಸ್ಕೂಲ್ ರೇವಾ, ನ್ಯಾಷನಲ್ ಡಿಫೆನ್ಸ್ ಕಾಲೇಜ್ ಮತ್ತು ಯುಎಸ್ ಆರ್ಮಿ ವಾರ್ ಕಾಲೇಜ್‌ನ ಹಳೆಯ ವಿದ್ಯಾರ್ಥಿಯಾಗಿರುವ ಲೆಫ್ಟಿನೆಂಟ್ ಜನರಲ್ ಉಪೇಂದ್ರ ದ್ವಿವೇದಿ ಅವರು ಡಿಎಸ್‌ಎಸ್‌ಸಿ ವೆಲ್ಲಿಂಗ್‌ಟನ್ ಮತ್ತು ಆರ್ಮಿ ವಾರ್ ಕಾಲೇಜ್, ಮೊವ್‌ನಲ್ಲಿ ಸಹ ಅವರು ಅಧ್ಯಯನ ಮಾಡಿದ್ದಾರೆ.ಹೆಚ್ಚುವರಿಯಾಗಿ ಅವರು ಡಿಫೆನ್ಸ್ ಮತ್ತು ಮ್ಯಾನೇಜ್‌ಮೆಂಟ್ ಸ್ಟಡೀಸ್‌ನಲ್ಲಿ ಎಂ ಫಿಲ್ ಮತ್ತು ಸ್ಟ್ರಾಟೆಜಿಕ್ ಸ್ಟಡೀಸ್ ಮತ್ತು ಮಿಲಿಟರಿ ಸೈನ್ಸ್‌ನಲ್ಲಿ ಎರಡು ಸ್ನಾತಕೋತ್ತರ ಪದವಿಗಳನ್ನು ಹೊಂದಿದ್ದಾರೆ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...