ಖ್ಯಾತ ಸರೋದ್ ವಾದಕ ಪಂಡಿತ್ ರಾಜೀವ್ ತಾರಾನಾಥ್ ನಿಧನ: ಸಿಎಂ ಸಂತಾಪ : ಅನಾರೋಗ್ಯದ ಹಿನ್ನೆಲೆಯಲ್ಲಿ ಮೈಸೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ರಾಜೀವ್ ತಾರಾನಾಥ್ ಕೆಲ ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದಿದ್ದಾರೆ. : ಖ್ಯಾತ ಸರೋದ್ ವಾದಕ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಮೈಸೂರಿನ ಪಂಡಿತ್ ರಾಜೀವ್ ತಾರಾನಾಥ್ ಇಂದು ಸಂಜೆ ನಿಧನರಾಗಿದ್ದಾರೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಮೈಸೂರಿನಆಸ್ಪತ್ರೆಯಲ್ಲಿ ರಾಜೀವ್ ತಾರಾನಾಥ್ ಕೆಲ ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದಿದ್ದಾರೆ. ಪದ್ಮಶ್ರೀ ಪ್ರಶಸ್ತಿ ಸೇರಿದಂತೆ ನಾಡಿನ ಹಾಗೂ ದೇಶದ ಪ್ರಮುಖ ಗೌರವಗಳಿಗೆ ರಾಜೀವ್ ಅವರು ಪಾತ್ರವಾಗಿದ್ದರು. ಇದನ್ನೂ ಓದಿ: ಇನ್ನು ರಾಜೀವ್ ತಾರಾನಾಥ್ ಅಗಲಿಕೆಗೆ ಸಂತಾಪ ಸೂಚಿಸಿದ ಸಿಎಂ ಸಿದ್ದರಾಮಯ್ಯ, “ಜಗತ್ಪ್ರಸಿದ್ದ ಸರೋದ್ ವಾದಕ, ಕರ್ನಾಟಕದ ಹೆಮ್ಮೆಯ ಸುಪುತ್ರ ಪಂಡಿತ ರಾಜೀವ್ ತಾರಾನಾಥ್ ನಿಧನದಿಂದ ದು:ಖಿತನಾಗಿದ್ದೇನೆ. ಕರ್ನಾಟಕದ ಕೀರ್ತಿ ಪತಾಕೆಯನ್ನು ವಿಶ್ವದಾದ್ಯಂತ ಹಾರಿಸಿದ ರಾಜೀವ್ ತಾರಾನಾಥರ ಅಗಲಿಕೆ ಕರ್ನಾಟಕಕ್ಕೆ ಮಾತ್ರವಲ್ಲ ಇಡೀ ಸಂಗೀತಲೋಕಕ್ಕೆ ತುಂಬಲಾರದ ನಷ್ಟ. ರಾಜೀವ್ ತಾರಾನಾಥ್ ಖ್ಯಾತ ಸಂಗೀತ ಕಲಾವಿದರು ಮಾತ್ರ ಆಗಿರಲಿಲ್ಲ, ಅದನ್ನು ಮೀರಿ ಶ್ರೇಷ್ಠ ಮಾನವತಾವಾದಿಯಾಗಿದ್ದರು. ಅವರ ಕುಟುಂಬದ ಸದಸ್ಯರು‌ ಮತ್ತು ಅಭಿಮಾನಿಗಳ ಶೋಕದಲ್ಲಿ ನಾನೂ ಭಾಗಿಯಾಗಿದ್ದೇನೆ" ಎಂದು ಶಾಂತಿ ಕೋರಿದ್ದಾರೆ. ಇದನ್ನೂ ಓದಿ: ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...