ಒಡಿಶಾದ ಮೊದಲ ಬಿಜೆಪಿ ಮುಖ್ಯಮಂತ್ರಿಯಾಗಿ ಮೋಹನ್ ಮಾಝಿ ನೇಮಕ ನಾಲ್ಕು ಬಾರಿ ಶಾಸಕರಾಗಿರುವ ಮೋಹನ್ ಚರಣ್ ಮಾಝಿ ಒಡಿಶಾದ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ. ಕೆ.ವಿ.ಸಿಂಗ್‌ದೇವ್ ಮತ್ತು ಪ್ರವತಿ ಪರಿದಾ ಅವರನ್ನು ಉಪ ಮುಖ್ಯಮಂತ್ರಿಯನ್ನಾಗಿ ಮಾಡಲಾಗಿದೆ. ಜೂನ್ 12 ರಂದು ಮಾಝಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಪ್ರಧಾನಿ ನರೇಂದ್ರ ಮೋದಿ ಕೂಡ ಇದರಲ್ಲಿ ಪಾಲ್ಗೊಳ್ಳಲಿದ್ದಾರೆ ಎನ್ನಲಾಗಿದೆ. ನವದೆಹಲಿ:ಒಡಿಶಾದ ಮುಂದಿನ ಮುಖ್ಯಮಂತ್ರಿಯಾಗಿ ನಾಲ್ಕು ಬಾರಿ ಶಾಸಕರಾಗಿರುವ ಮೋಹನ್ ಚರಣ್ ಮಾಝಿ ಅವರನ್ನು ಹಾಗೂ ಉಪ ಮುಖ್ಯಮಂತ್ರಿಯನ್ನಾಗಿ ಕೆ.ವಿ.ಸಿಂಗ್‌ದೇವ್ ಮತ್ತು ಪ್ರವತಿ ಪರಿದಾ ಅವರನ್ನು ಬಿಜೆಪಿ ಆಯ್ಕೆ ಮಾಡಿದೆ. ಜೂನ್ 12 ರಂದು ಮಾಝಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಪ್ರಧಾನಿ ನರೇಂದ್ರ ಮೋದಿ ಕೂಡ ಇದರಲ್ಲಿ ಪಾಲ್ಗೊಳ್ಳಲಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ- ನಾಳೆ ಪ್ರಮಾಣ ವಚನ ಸಮಾರಂಭ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಹಾಗೂ ಮಾಜಿ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಭಾಗವಹಿಸಲಿದ್ದಾರೆ.ಪ್ರಧಾನಿ ಮೋದಿ ಭುವನೇಶ್ವರದಲ್ಲಿ ಜನತಾ ಮೈದಾನಕ್ಕೆ ಹೋಗುವ ಮಾರ್ಗದಲ್ಲಿ ರೋಡ್‌ಶೋ ನಡೆಸುವ ನಿರೀಕ್ಷೆಯಿದೆ. ಇದನ್ನೂ ಓದಿ- ಬುಡಕಟ್ಟು ಸಮುದಾಯದಿಂದ ಬಂದಿರುವ ಮಾಝಿ (52) ಅವರು ನಾಲ್ಕು ಬಾರಿ ಕಿಯೋಂಜಾರ್ ವಿಧಾನಸಭಾ ಕ್ಷೇತ್ರದಿಂದ ಗೆದ್ದಿದ್ದಾರೆ.ಅವರು ಬಡ ಕುಟುಂಬದ ಹಿನ್ನೆಲೆಯಿಂದ ಬಂದವರು ಮತ್ತು ಒಡಿಶಾ ವಿಧಾನಸಭಾ ಚುನಾವಣೆಯಲ್ಲಿ ಅವರ ಸಾಧನೆಯನ್ನು ಪರಿಗಣಿಸಿ ಬಿಜೆಪಿ ಹೈಕಮಾಂಡ್ ಅವರಿಗೆ ಮಣೆ ಹಾಕಿದೆ ಎಂದು ಮೂಲಗಳು ಹೇಳಿವೆ.6 ಜನವರಿ 1972 ರಂದು ಜನಿಸಿದ ಮಾಝಿ ಡಾ. ಪ್ರಿಯಾಂಕಾ ಮರಾಂಡಿ ಅವರನ್ನು ವಿವಾಹವಾದರು. 2000 ರಲ್ಲಿ, ಅವರು ಮೊದಲ ಬಾರಿಗೆ ಕಿಯೋಂಜಾರ್ ಕ್ಷೇತ್ರದಿಂದ ಗೆಲುವನ್ನು ಸಾಧಿಸಿದ್ದರು. ಅಂದಿನಿಂದ ಇಲ್ಲಿಯವರೆಗೆ ಅವರು ಈ ಕ್ಷೇತ್ರದ ಶಾಸಕರಾಗಿದ್ದಾರೆ. ನವೀನ್ ಪಟ್ನಾಯಕ್ ಅವರ 24 ವರ್ಷಗಳ ಆಳ್ವಿಕೆ ನಂತರ ನಂತರ ಮೊದಲ ಬಾರಿಗೆ ಒಡಿಶಾ ರಾಜ್ಯದಲ್ಲಿ ಸರ್ಕಾರ ರಚಿಸುತ್ತಿರುವ ಬಿಜೆಪಿಗೆ ಮುಂದಿನ ಮುಖ್ಯಮಂತ್ರಿಯನ್ನು ಆಯ್ಕೆ ಮಾಡುವುದು ನಿಜಕ್ಕೂ ಸವಾಲಿನ ಸಂಗತಿಯಾಗಿತ್ತು. ಈಗ ಪಕ್ಷದ ಹೈಕಮಾಂಡ್ ಮೋಹನ್ ಮಾಝಿ ಅವರನ್ನು ಮುಖ್ಯಮಂತ್ರಿಯಾಗಿ ಆಯ್ಕೆ ಮಾಡುವಲ್ಲಿ ಯಶಸ್ವಿಯಾಗಿದೆ.ನಾಳೆ ನಡೆಯಲಿರುವ ಪ್ರಮಾಣ ವಚನ ಸಮಾರಂಭಕ್ಕೆ ಬಿಗಿ ಭದ್ರತೆ ಏರ್ಪಡಿಸಲಾಗಿದೆ. ಕೇಂದ್ರ ಸಚಿವರು, ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ಸೇರಿದಂತೆ ಹಲವು ಗಣ್ಯರು ಸಮಾರಂಭದಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...