ಐದು ದಿನಗಳ ಕಾಲ ಉತ್ತರ ಕರ್ನಾಟಕ ಹಾಗೂ ಕರಾವಳಿಯಲ್ಲಿ ಭಾರಿ ಮಳೆ - ಹವಾಮಾನ ಇಲಾಖೆ ಎಚ್ಚರಿಕೆ ನೈಋತ್ಯ ಮುಂಗಾರು ಶನಿವಾರ ಮಧ್ಯ ಅರೇಬಿಯನ್ ಸಮುದ್ರ, ದಕ್ಷಿಣ ಮಹಾರಾಷ್ಟ್ರ, ತೆಲಂಗಾಣ ಮತ್ತು ದಕ್ಷಿಣ ಛತ್ತೀಸ್‌ಗಢದ ಕೆಲವು ಭಾಗಗಳು, ದಕ್ಷಿಣ ಒಡಿಶಾ ಮತ್ತು ಕರಾವಳಿ ಆಂಧ್ರಪ್ರದೇಶದ ಕೆಲವು ಭಾಗಗಳಿಗೆ ಮುನ್ನಡೆದಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ನವದೆಹಲಿ:ಮುಂದಿನ ಐದು ದಿನಗಳಲ್ಲಿ ಮಹಾರಾಷ್ಟ್ರ, ಕರಾವಳಿ ಮತ್ತು ಉತ್ತರ ಕರ್ನಾಟಕದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಜೂನ್ 9 ರಿಂದ ವಾಯುವ್ಯ ಭಾರತದಲ್ಲಿ ಹೊಸ ಶಾಖದ ಅಲೆಯ ಪರಿಸ್ಥಿತಿಗಳು ಪ್ರಾರಂಭವಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಮುಂದಿನ ಐದು ದಿನಗಳಲ್ಲಿ ಪೂರ್ವ ಮತ್ತು ಪೂರ್ವ-ಮಧ್ಯ ಭಾರತ, ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶದ ಕೆಲವು ಭಾಗಗಳಲ್ಲಿ ಶಾಖದ ಅಲೆಯ ಪರಿಸ್ಥಿತಿಗಳು ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ.ನೈಋತ್ಯ ಮುಂಗಾರು ಶನಿವಾರ ಮಧ್ಯ ಅರೇಬಿಯನ್ ಸಮುದ್ರ, ದಕ್ಷಿಣ ಮಹಾರಾಷ್ಟ್ರ, ತೆಲಂಗಾಣ ಮತ್ತು ದಕ್ಷಿಣ ಛತ್ತೀಸ್‌ಗಢದ ಕೆಲವು ಭಾಗಗಳು, ದಕ್ಷಿಣ ಒಡಿಶಾ ಮತ್ತು ಕರಾವಳಿ ಆಂಧ್ರಪ್ರದೇಶದ ಕೆಲವು ಭಾಗಗಳಿಗೆ ಮುನ್ನಡೆದಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಇದನ್ನೂ ಓದಿ: ಮುಂದಿನ 2-3 ದಿನಗಳಲ್ಲಿ ಮಧ್ಯ ಅರೇಬಿಯನ್ ಸಮುದ್ರದ ಉಳಿದ ಭಾಗಗಳು, ಮಹಾರಾಷ್ಟ್ರದ ಕೆಲವು ಭಾಗಗಳು (ಮುಂಬೈ ಸೇರಿದಂತೆ) ಮತ್ತು ತೆಲಂಗಾಣದಲ್ಲಿ ನೈಋತ್ಯ ಮಾನ್ಸೂನ್ ಮತ್ತಷ್ಟು ಮುನ್ನಡೆಯಲು ಪರಿಸ್ಥಿತಿಗಳು ಅನುಕೂಲಕರವಾಗಿವೆ ಎನ್ನಲಾಗಿದೆ.ಕೊಂಕಣ ಮತ್ತು ಗೋವಾ, ಮಧ್ಯ ಮಹಾರಾಷ್ಟ್ರ, ಮರಾಠವಾಡ, ಕರ್ನಾಟಕ, ಕೇರಳ ಮತ್ತು ಲಕ್ಷದ್ವೀಪಗಳಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ (40-50 ಕೀಮಿ) ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...