ಇಂದು ಬೆಂಗಳೂರು ನ್ಯಾಯಾಲಯಕ್ಕೆ ರಾಹುಲ್ ಗಾಂಧಿ ಹಾಜರು : ವಿಶೇಷ ನ್ಯಾಯಾಲಯದ ಎದುರು ಹಾಜರಾಗಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬೆಂಗಳೂರಿಗೆ ಆಗಮಿಸಿದ್ದಾರೆ. ಬೆಂಗಳೂರು:2023ರ ರಾಜ್ಯ ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ ಕರ್ನಾಟಕ ಘಟಕ ದಾಖಲಿಸಿರುವ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ವಿಶೇಷ ನ್ಯಾಯಾಲಯದ ಎದುರು ಹಾಜರಾಗಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬೆಂಗಳೂರಿಗೆ ಆಗಮಿಸಿದ್ದಾರೆ. 2023ರ ರಾಜ್ಯ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಕಾಂಗ್ರೆಸ್ ನಾಯಕರು 2019 ರಿಂದ 2023 ರವರೆಗಿನ ತಮ್ಮ ಆಡಳಿತವನ್ನು ಭ್ರಷ್ಟ ಎಂದು ಕರೆಯುತ್ತಿದ್ದಾರೆ. ಇದು ಪಕ್ಷದ ಘಟನತೆಗೆ ಧಕ್ಕೆ ತರುತ್ತದೆ ಎಂದು ಆರೋಪಿಸಿ, ಬಿಜೆಪಿ ಕಾರ್ಯಾಧ್ಯಕ್ಷ ಮತ್ತು ಎಂಎಲ್‌ಸಿ ಕೇಶವ ಪ್ರಸಾದ್ ಅವರು ನ್ಯಾಯಾಲಯಕ್ಕೆ ಖಾಸಗಿ ದೂರಿನ್ನು ಸಲ್ಲಿಸಿದ್ದರು. ಈ ಆರೋಪಗಳನ್ನು ಚುನಾವಣಾ ಸಮಯದಲ್ಲಿ ಬಿಜೆಪಿ ಪಕ್ಷಕ್ಕೆ ಮಾಡಿದ ಅವಮಾನ ಎಂದು ಬಣ್ಣಿಸಿದ್ದರು. ಇದನ್ನೂ ಓದಿ: ಜಾಹೀರಾತು ಪ್ರಕಟಣೆಯಲ್ಲಿ ರಾಹುಲ್ ಗಾಂಧಿ ಅವರ ಕೈವಾಡವನ್ನು ಕಾಂಗ್ರೆಸ್ ಅಲ್ಲಗಳೆದಿರುವುದು ಗಮನಾರ್ಹವಾಗಿದೆ. ಬಿಜೆಪಿಯ ದೂರಿನ ಕುರಿತು ಕರ್ನಾಟಕ ಕಾಂಗ್ರೆಸ್ ಮುಖ್ಯಸ್ಥ ಡಿ ಕೆ ಶಿವಕುಮಾರ್, "ಅವರು ಪ್ರಚಾರಕ್ಕಾಗಿ ರಾಹುಲ್ ಗಾಂಧಿಯವರ ಹೆಸರನ್ನು ಸೇರಿಸಿದ್ದಾರೆ" ಎಂದು ಹೇಳಿದ್ದಾರೆ. ಈ ಪ್ರಕರಣದಲ್ಲಿ ರಾಹುಲ್ ಗಾಂಧಿ ಅವರಲ್ಲದೆ, ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಹೆಸರನ್ನೂ ಸಹ ಆರೋಪಿಗಳಾಗಿ ಹೆಸರಿಸಲಾಗಿದೆ. ರಾಹುಲ್ ಗಾಂಧಿ ಶುಕ್ರವಾರ ಬೆಳಿಗ್ಗೆ ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ. ನಂತರ ರಾಜ್ಯದಿಂದ ಹೊಸದಾಗಿ ಆಯ್ಕೆಯಾದ ಕಾಂಗ್ರೆಸ್ ಸಂಸದರೊಂದಿಗೆ ಚರ್ಚೆ ನಡೆಸಲಿದ್ದಾರೆ ಎಂದು ಕರ್ನಾಟಕ ಕಾಂಗ್ರೆಸ್‌ ತಿಳಿಸಿತ್ತು. ಇದನ್ನೂ ಓದಿ: ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...