ನೂತನ ಸಂಸದೆ, ನಟಿ ಕಂಗನಾ ರನೌತ್’ಗೆ ಪಬ್ಲಿಕ್’ನಲ್ಲೇ ಕಪಾಳಮೋಕ್ಷ ಮಾಡಿದ ಗಾರ್ಡ್! ವಿಡಿಯೋ : ಇತ್ತೀಚೆಗೆ ನಡೆದ 2024ರ ಲೋಕಸಭಾ ಚುನಾವಣೆಯಲ್ಲಿ ಕಂಗನಾ ರನೌತ್ ಬಿಜೆಪಿ ಪಕ್ಷದಿಂದ ಸ್ಪರ್ಧಿಸಿ ಮಂಡಿ ಕ್ಷೇತ್ರದಲ್ಲಿ ಭರ್ಜರಿ ಜಯ ಸಾಧಿಸಿದ್ದರು. :ನೂತನ ಚುನಾಯಿತ ಸಂಸದೆ ಮತ್ತು ನಟಿ ಕಂಗನಾ ರನೌತ್’ಗೆ ಚಂಡೀಗಢದ ಏಪ್ರೋಟ್‌’ನಲ್ಲಿ ಸಿಐಎಸ್‌ಎಫ್ ಸಿಬ್ಬಂದಿ ಕಪಾಳಮೋಕ್ಷ ಮಾಡಿದ್ದಾರೆ ಎಂದು ವರದಿಯಾಗಿದೆ. ಚಂಡೀಗಢ ವಿಮಾನ ನಿಲ್ದಾಣದಲ್ಲಿ ದೆಹಲಿಗೆ ತೆರಳುತ್ತಿದ್ದಾಗ ಕುಲ್ವಿಂದರ್ ಕೌರ್ ಎಂಬ ಮಹಿಳಾ ಸಿಬ್ಬಂದಿ ಕಪಾಳಮೋಕ್ಷ ಮಾಡಿದ್ದಾರೆ ಎಂದು ನಟಿ ಆರೋಪಿಸಿದ್ದಾರೆ. ಎಬಿಪಿ ನ್ಯೂಸ್‌’ನ ವರದಿಯ ಪ್ರಕಾರ, ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ನಟಿ ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಇತ್ತೀಚೆಗೆ ನಡೆದ 2024ರ ಲೋಕಸಭಾ ಚುನಾವಣೆಯಲ್ಲಿಬಿಜೆಪಿ ಪಕ್ಷದಿಂದ ಸ್ಪರ್ಧಿಸಿ ಮಂಡಿ ಕ್ಷೇತ್ರದಲ್ಲಿ ಭರ್ಜರಿ ಜಯ ಸಾಧಿಸಿದ್ದರು. ಈ ಹಿನ್ನೆಲೆಯಲ್ಲಿ ದೆಹಲಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಘಟನೆಗೂ ಮುನ್ನ ಕಂಗನಾ ತನ್ನ ಇನ್‌ಸ್ಟಾಗ್ರಾಂನಲ್ಲಿ ಫೋಟೋಗಳನ್ನು ಹಂಚಿಕೊಂಡಿದ್ದು, ತಾನು ದೆಹಲಿಗೆ ತೆರಳುತ್ತಿದ್ದೇನೆ ಎಂದು ತಿಳಿಸಿದ್ದರು. ಇದನ್ನೂ ಓದಿ: 2021 ರಲ್ಲಿ ನಡೆದ ರೈತರ ಪ್ರತಿಭಟನೆಯ ಕುರಿತು ಕಂಗನಾ ಈ ಹಿಂದೆ ಮಾಡಿದ್ದ ಕಾಮೆಂಟ್‌’ಗಳಿಂದ ಸಿಟ್ಟಾದ ಸಿಐಎಸ್‌ಎಫ್ ಸಿಬ್ಬಂದಿ, ಕಪಾಳಮೋಕ್ಷ ಮಾಡಿದ್ದಾರೆ ಎಂದು ವರದಿಯಾಗಿದೆ. — . مبشر 🇮🇳🇵🇸 (@03_mobassir) ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...