ಮದುವೆಗೆ ಹೋಗಿ ಬರುತ್ತಿದ್ದ ದೋಣಿ ಮುಳುಗಿ 103 ಮಂದಿ ಜಲಸಮಾಧಿ..! : ನೈಜೀರಿಯಾದ ನೈಜರ್ ನದಿಯಲ್ಲಿ ದೋಣಿ ಮುಳುಗಿ 103 ಜನರು ಸಾವನ್ನಪ್ಪಿದ್ದಾರೆ. ಇನ್ನೂ ನೂರು ಜನರನ್ನು ಪೊಲೀಸರು ಮತ್ತು ಸ್ಥಳೀಯರು ರಕ್ಷಿಸಿದ್ದಾರೆ. ಮದುವೆಯಲ್ಲಿ ಪಾಲ್ಗೊಂಡು ನೈಜರ್ ನದಿ ಮೂಲಕ ಹಿಂತಿರುಗುತ್ತಿದ್ದಾಗ ಈ ಘಟನೆ ನಡೆದಿದೆ. :ದಕ್ಷಿಣ ಆಫ್ರಿಕಾದ ನೈಜೀರಿಯಾದಲ್ಲಿ ದೋಣಿ ದುರಂತ ಸಂಭವಿಸಿದೆ. ಈ ಘಟನೆಯಲ್ಲಿ 103 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಮದುವೆ ಮುಗಿಸಿಕೊಂಡು ಉತ್ತರ ನೈಜೀರಿಯಾದಿಂದ 200 ಕ್ಕೂ ಹೆಚ್ಚು ಜನರು ನೈಜರ್ ನದಿಯಲ್ಲಿ ದೋಣಿ ಮೂಲಕ ಹಿಂತಿರುಗುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಓವರ್‌ಲೋಡ್‌ನಿಂದಮಾಹಿತಿ ಪಡೆದ ಪೊಲೀಸರು ಮತ್ತು ಸ್ಥಳೀಯರು ತಕ್ಷಣ ರಕ್ಷಣಾ ಕ್ರಮ ಕೈಗೊಂಡರು. ನೀರಿನಲ್ಲಿ ಮುಳುಗಿದವರನ್ನು ರಕ್ಷಿಸಲು ಪ್ರಯತ್ನಿಸಿದರು. ಸುಮಾರು ನೂರು ಜನರ ಪ್ರಾಣವನ್ನು ರಕ್ಷಿಸಿದ್ದಾರೆ. ಮೃತ ದೇಹಗಳನ್ನು ಹೊರತೆಗೆಯಲಾಗುತ್ತಿದ್ದು, ಕೆಲವರು ಕಾಣೆಯಾಗಿದ್ದಾರೆ ಎಂದು ವರದಿಯಾಗಿದೆ. ಇದನ್ನೂ ಓದಿ: ಮದುವೆಯಲ್ಲಿ ಪಾಲ್ಗೊಂಡಿದ್ದ ಜನ ನೈಜರ್ ನದಿಯನ್ನು ದಾಟಲು ಇಗ್ಬೋಟಿ ಗ್ರಾಮದಿಂದ ದೋಣಿ ಹತ್ತಿದ್ದರು. ಕಪಡಾದಲ್ಲಿ ಸುರಿದ ಭಾರಿ ಮಳೆಗೆ ರಸ್ತೆಗಳೆಲ್ಲ ಜಲಾವೃತಗೊಂಡಿದ್ದ ಕಾರಣ ಜಲಮಾರ್ಗ ಬಳಸಬೇಕಾಯಿತು ಎಂದು ಮಾಹಿತಿ ಲಭ್ಯವಾಗಿದೆ. ಸೋಮವಾರ ಬೆಳಗಿನ ಜಾವ 3 ರಿಂದ 4 ಗಂಟೆಯ ನಡುವೆ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಈ ಹಿಂದೆ ನೈಜೀರಿಯಾದಲ್ಲಿ ಇಂತಹದ್ದೇ ಅವಘಡಗಳು ನಡೆದಿದ್ದವು. ಕಳೆದ ತಿಂಗಳ ಹಿಂದೆಯೂ ಕೂಡ ಓವರ್‌ಲೋಡ್‌ನಿಂದ ದೋಣಿ ಮಗುಚಿ ಬಿದ್ದಿತ್ತು. ಈ ಘಟನೆಯಲ್ಲಿ 15 ಮಕ್ಕಳು ಪ್ರಾಣ ಕಳೆದುಕೊಂಡಿದ್ದರು.. 30 ಮಂದಿ ನಾಪತ್ತೆಯಾಗಿದ್ದರು. ಸರಣಿ ದೋಣಿ ಅವಘಡಗಳು ನಡೆಯುತ್ತಿದ್ದರೂ ಸರಕಾರ ದೃಢ ಕ್ರಮಕೈಗೊಂಡಿಲ್ಲ ಎಂಬ ಟೀಕೆಗಳು ಕೇಳಿ ಬರುತ್ತಿವೆ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...