G7 : 'ಯುಕ್ರೇನ್ ಯುದ್ಧ ಇಡೀ ವಿಶ್ವದ ಪಾಲಿಗೆ ಒಂದು ದೊಡ್ಡ ವಿಷಯ' ಜಿ7 ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಮಾತು :ಜಪಾನಿನ ಹಿರೋಷಿಮಾದಲ್ಲಿ ನಡೆದ ಜಿ7 ಶೃಂಗಸಭೆಯಲ್ಲಿ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರನ್ನು ಭೇಟಿಯಾದ ಸಂದರ್ಭದಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ವೈಯಕ್ತಿಕ ಭರವಸೆ ನೀಡಿದ್ದಾರೆ. :ಜಪಾನಿನ ಹಿರೋಷಿಮಾದಲ್ಲಿ ನಡೆಯುತ್ತಿರುವ ಜಿ7 ಶೃಂಗಸಭೆಯ ಸಂದರ್ಭದಲ್ಲಿ ದೇಶದ ಪ್ರಧಾನಿ ನರೇಂದ್ರ ಮೋದಿ ಅವರು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಈ ಸಭೆಯಲ್ಲಿ ಉಭಯ ನಾಯಕರ ನಡುವೆ ಹಲವು ಮಹತ್ವದ ವಿಚಾರಗಳ ಬಗ್ಗೆ ಚರ್ಚೆ ನಡೆದಿದೆ. ರಷ್ಯಾ ಮತ್ತು ಉಕ್ರೇನ್ ನಡುವೆ ನಡೆಯುತ್ತಿರುವ ಯುದ್ಧದ ನಂತರ ಉಭಯ ನಾಯಕರ ಮೊದಲ ಭೇಟಿ ಇದಾಗಿದೆ ಎಂಬುದು ಇಲ್ಲಿ ಗಮನಾರ್ಹ ಸಂಗತಿ. -7 . — (@) ಝೆಲೆನ್ಸ್ಕಿ ಭೇಟಿಯ ವೇಳೆ ಪ್ರಧಾನಿ ಮೋದಿ, ''ಉಕ್ರೇನ್‌ನಲ್ಲಿ ನಡೆಯುತ್ತಿರುವ ಯುದ್ಧವು ಇಡೀ ಜಗತ್ತಿಗೆ ದೊಡ್ಡ ವಿಷಯವಾಗಿದ್ದು, ಇದು ಇಡೀ ಪ್ರಪಂಚದ ಮೇಲೆ ಅನೇಕ ಪರಿಣಾಮಗಳನ್ನು ಬೀರಿದೆ. ನಾನು ಇದನ್ನು ರಾಜಕೀಯ ವಿಷಯ ಎಂದು ಪರಿಗಣಿಸುವುದಿಲ್ಲ, ನನಗೆ ಇದು ಮಾನವೀಯತೆಯ ವಿಷಯವಾಗಿದೆ" ಎಂದಿದ್ದಾರೆ. " ಈ ವಿಷಯಕ್ಕೆ ಸಂಬಂಧಿಸಿದಂತೆ ಒಂದು ದೇಶವಾಗಿ ಹಾಗೂ ಸ್ವಯಂ ಖುದ್ದಾಗಿ ಮಾಡಬೇಕಾದುದನ್ನು ನಾನು ಮಾಡುತ್ತೇನೆ" ಎಂಬ ಭರವಸೆಯನ್ನು ಅವರು ಝೆಲೆನ್ಸ್ಕಿಗೆ ನೀಡಿದ್ದಾರೆ. ಇದನ್ನೂ ಓದಿ- ಈ ಕುರಿತು ಟ್ವೀಟ್ ಮಾಡಿದ ಪ್ರಧಾನಿ ಕಾರ್ಯಾಲಯಹಿರೋಷಿಮಾದಲ್ಲಿ ನಡೆಯುತ್ತಿರುವ ಜಿ-7 ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ ಎಂದು ಪ್ರಧಾನಿ ಮೋದಿ ಮತ್ತು ಝೆಲೆನ್ಸ್ಕಿ ನಡುವಿನ ಭೇಟಿಗೆ ಸಂಬಂಧಿಸಿದಂತೆ ಪ್ರಧಾನ ಮಂತ್ರಿ ಕಚೇರಿ (ಪಿಎಂಒ) ಟ್ವೀಟ್ ಮಾಡಿದೆ. ಇದನ್ನೂ ಓದಿ- ಭಾಗವಹಿಸಲು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಜಪಾನ್‌ನ ಹಿರೋಷಿಮಾವನ್ನು ತಲುಪಿದ್ದಾರೆ ಎಂಬುದು ಇಲ್ಲಿ ಉಲ್ಲೇಖನೀಯ. ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರು ಕೂಡ ಜಪಾನ್‌ನ ಹಿರೋಷಿಮಾದಲ್ಲಿದ್ದಾರೆ. ಉಕ್ರೇನ್ ಅಧ್ಯಕ್ಷರು ತಮ್ಮ ಸಾಂಪ್ರದಾಯಿಕ ಆಲಿವ್ ಹಸಿರು ಉಡುಪನ್ನು ಧರಿಸಿ ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿದ್ದಾರೆ. ಇದನ್ನೂ ನೋಡಿ- ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...