: ಡೊನಾಲ್ಡ್ ಟ್ರಂಪ್ ವಿರುದ್ಧ ಮತ್ತೊಬ್ಬ ಮಹಿಳೆಯಿಂದ ಲೈಂಗಿಕ ಕಿರುಕುಳ! : ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಡೊನಾಲ್ಡ್ ಟ್ರಂಪ್ ನನ್ನ ಮೇಲೆ ಬಿದ್ದು ಬಲವಂತವಾಗಿ ನನ್ನನ್ನು ಚುಂಬಿಸಲು ಪ್ರಯತ್ನಿಸಿದ್ದರು ಎಂದು ಜೆಸ್ಸಿಕಾ ಆರೋಪಿಸಿದ್ದಾರೆ. ನವದೆಹಲಿ:ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿರುದ್ಧ ಮತ್ತೊಬ್ಬ ಮಹಿಳೆ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದಾರೆ. 1979ರಲ್ಲಿ ಟ್ರಂಪ್ ವಿಮಾನದಲ್ಲಿ ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದರೆಂದು 81 ವರ್ಷದ ಜೆಸ್ಸಿಕಾ ಲೀಡ್ಸ್ ನ್ಯೂಯಾರ್ಕ್‌ನ ನ್ಯಾಯಾಧೀಶರ ಮುಂದೆ ಸಾಕ್ಷ್ಯ ಹೇಳಿದ್ದಾರೆ. ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ವೇಳೆ​ ನನ್ನ ಮೇಲೆ ಬಿದ್ದು ಬಲವಂತವಾಗಿ ನನ್ನನ್ನು ಚುಂಬಿಸಲು ಪ್ರಯತ್ನಿಸಿದ್ದರು ಎಂದು ಜೆಸ್ಸಿಕಾ ಆರೋಪಿಸಿದ್ದಾರೆ. ನ್ಯೂಯಾರ್ಕ್​ ಸಿಟಿಯಲ್ಲಿ ಫಸ್ಟ್​ ಕ್ಲಾಸ್​ನಲ್ಲಿ ಅಕ್ಕಪಕ್ಕದಲ್ಲಿ ಕುಳಿತಿದ್ದಾಗ ಟ್ರಂಪ್ ತನ್ನ ಸ್ಕರ್ಟ್​ ಮೇಲೆ ಕೈಯಾಡಿಸಿದ್ದರು. ಬಳಿಕ ನನ್ನನ್ನು ಚುಂಬಿಸಲು ಪ್ರಯತ್ನಿಸಿದ್ದರು. ಆಗ ನಾನು ತಪ್ಪಿಸಿಕೊಂಡು ವಿಮಾನದ ಹಿಂಭಾಗಕ್ಕೆ ಓಡಿದ್ದೆ ಎಂದು ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ನ್ಯೂಯಾರ್ಕ್​ನ ಲಾಗಾರ್ಡಿಯಾ ಏರ್​ಪೋರ್ಟ್​ಗೆ ಬ್ರಾನಿಫ್ ಏರ್​ವೇಸ್ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಆಗ ಇಬ್ಬರೂ ಅಕ್ಕಪಕ್ಕ ಕುಳಿತುಕೊಂಡಿದ್ದೇವು. ಟ್ರಂಪ್ ಆಗ ತಾನು ರಿಯಲ್ ಎಸ್ಟೇಟ್ ಡೆವಲಪರ್ ​ಎಂದು ತಮ್ಮನ್ನು ಪರಿಚಯಿಸಿಕೊಂಡಿದ್ದರು. ನನ್ನ ಮತ್ತು ಟ್ರಂಪ್ ಬಳಿ ಯಾವುದೇ ಮಾತುಕತೆ ಇರಲಿಲ್ಲ. ಆದರೆ ಅವರು ನನ್ನನ್ನು ತಮ್ಮತ್ತ ಸೆಳೆದು ಚುಂಬಿಸಲು ಪ್ರಯತ್ನಿಸಿದರು. ಆಗ ದೂರು ನೀಡಿದರೂ ಪ್ರಯೋಜನವಾಗುತ್ತಿರಲಿಲ್ಲ. ಹೀಗಾಗಿ ನಾನು ಯಾರಿಗೂ ಹೇಳದೆ ಮೌನವಾಗಿದ್ದೆ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ಈ ಪ್ರಕರಣದಲ್ಲಿ ಟ್ರಂಪ್ ವಿರುದ್ಧ ಮತ್ತೊಬ್ಬ ಮಹಿಳೆಯೂ ಸಾಕ್ಷಿ ಹೇಳುವ ಸಾಧ್ಯತೆ ಇದೆ. ಮಹಿಳೆಯರು ತಮ್ಮ ವಿರುದ್ಧ ಮಾಡಿರುವ ಲೈಂಗಿಕ ದೌರ್ಜನ್ಯ ಮತ್ತುಯ ಆರೋಪಗಳನ್ನು ಟ್ರಂಪ್ ನಿರಾಕರಿಸಿದ್ದಾರೆ. ಈ ಆರೋಪ ರಾಜಕೀಯ ಪ್ರೇರಿತವಾಗಿದ್ದು, ತನ್ನ ಇಮೇಜ್‌ಗೆ ಕಳಂಕ ತರುವ ಸಂಚಿದೆ ಎಂದು ಅವರು ಹೇಳಿದ್ದಾರೆ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಆಧ್ಯಾತ್ಮ, ಜೀವನಶೈಲಿ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...