: ಟೀಂ ಇಂಡಿಯಾದಲ್ಲಿ ಎಷ್ಟು ಬ್ಯಾಟರ್ಗಳು, ಎಷ್ಟು ಆಲ್ರೌಂಡರ್ಗಳಿದ್ದಾರೆ ಗೊತ್ತಾ! : ಈ ಬಾರಿ ಆಯ್ಕೆ ಮಾಡಲಾಗಿರುವ 16 ಸದಸ್ಯರಲ್ಲಿ 6 ಪರಿಪೂರ್ಣ ಬ್ಯಾಟ್ಸ್‌ಮನ್‌ಗಳಿದ್ದಾರೆ. ಇವರ ಜೊತೆ ಮೂವರು ಆಲ್ರೌಂಡರ್ಗಳಿಗೆ ಸ್ಥಾನ ನೀಡಲಾಗಿದೆ. ಇಬ್ಬರು ವಿಕೆಟ್ ಕೀಪರ್ಗಳಿದ್ದರೆ, ಐವರು ಬೌಲರ್‌ಗಳಿಗೆ ಸ್ಥಾನ ಕಲ್ಪಿಸಲಾಗಿದೆ. :ಸೆಪ್ಟೆಂಬರ್ 19ರಿಂದ ಟೀಂ ಇಂಡಿಯಾ ಮತ್ತು ಬಾಂಗ್ಲಾದೇಶ ನಡುವಿನ ಟೆಸ್ಟ್ ಸರಣಿ ಶುರುವಾಗಲಿದೆ. ಚೆನ್ನೈನ ಚೆಪಾಕ್ ಮೈದಾನದಲ್ಲಿ ನಡೆಯಲಿರುವ ಮೊದಲ ಪಂದ್ಯಕ್ಕಾಗಿ ಭಾರತ ತಂಡವನ್ನು ಘೋಷಿಸಲಾಗಿದೆ. 2ನೇ ಟೆಸ್ಟ್ ಪಂದ್ಯವು ಮಾರ್ಚ್ 27ರಿಂದ ಕಾನ್ಪುರದಲ್ಲಿ ಆರಂಭವಾಗಲಿದೆ. ಇದಾದ ಬಳಿಕ ಉಭಯ ತಂಡಗಳು 3 ಪಂದ್ಯಗಳ ಟಿ-20 ಸರಣಿ ಆಡಲಿದೆ. ಬಾಂಗ್ಲಾದೇಶ ವಿರುದ್ಧದಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಮೊದಲ ಟೆಸ್ಟ್ ಪಂದ್ಯಕ್ಕೆ ಘೋಷಿಸಲಾಗಿರುವ 16 ಸದಸ್ಯರ ತಂಡವನ್ನು ಹಿಟ್‌ಮ್ಯಾನ್‌ ಖ್ಯಾತಿಯ ರೋಹಿತ್ ಶರ್ಮಾ ಮುನ್ನಡೆಸಲಿದ್ದಾರೆ. ಇದೇ ಮೊದಲ ಬಾರಿಗೆ ಎಡಗೈ ವೇಗಿ ಯಶ್ ದಯಾಳ್​ಗೆ ಸ್ಥಾನ ನೀಡಲಾಗಿದೆ. ಈ ಸರಣಿ ಮೂಲಕ ರಿಷಭ್ ಪಂತ್ ಭಾರತ ಟೆಸ್ಟ್ ತಂಡಕ್ಕೆ ಕಮ್‌ಬ್ಯಾಕ್‌ ಮಾಡಿದ್ದಾರೆ. ಇದನ್ನೂ ಓದಿ: ಈ ಬಾರಿ ಆಯ್ಕೆ ಮಾಡಲಾಗಿರುವ 16 ಸದಸ್ಯರಲ್ಲಿ 6 ಪರಿಪೂರ್ಣ ಬ್ಯಾಟ್ಸ್‌ಮನ್‌ಗಳಿದ್ದಾರೆ. ಇವರ ಜೊತೆ ಮೂವರು ಆಲ್​ರೌಂಡರ್​ಗಳಿಗೆ ಸ್ಥಾನ ನೀಡಲಾಗಿದೆ. ಇಬ್ಬರು ವಿಕೆಟ್ ಕೀಪರ್​ಗಳಿದ್ದರೆ, ಐವರು ಬೌಲರ್‌ಗಳಿಗೆ ಸ್ಥಾನ ಕಲ್ಪಿಸಲಾಗಿದೆ. ಬ್ಯಾಟ್ಸ್‌ಮನ್‌ಗಳಾಗಿ ನಾಯಕ ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಕನ್ನಡಿಗ ಕೆ.ಎಲ್.ರಾಹುಲ್ ಹಾಗೂ ಸರ್ಫರಾಜ್ ಖಾನ್ ಸ್ಥಾನ ಪಡೆದಿದ್ದಾರೆ. ವಿಕೆಟ್​ ಕೀಪರ್​ಗಳಾಗಿ ಈ ಬಾರಿ ರಿಷಭ್ ಪಂತ್ ಹಾಗೂ ಧ್ರುವ್ ಜುರೇಲ್ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ. ಆಲ್​ರೌಂಡರ್​ಗಳಾಗಿ ರವೀಂದ್ರ ಜಡೇಜಾ, ಆರ್.ಅಶ್ವಿನ್ ಹಾಗೂ ಅಕ್ಷರ್ ಪಟೇಲ್ ಹಾಗೂ ವೇಗಿಗಳಾಗಿ ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಯಶ್ ದಯಾಳ್ & ಆಕಾಶ್ ದೀಪ್ ಸ್ಥಾನ ಪಡೆದಿದ್ದಾರೆ. ಇವರೊಂದಿಗೆ ಪೂರ್ಣ ಪ್ರಮಾಣದ ಸ್ಪಿನ್ನರ್ ಆಗಿ ಕುಲ್ದೀಪ್ ಯಾದವ್ ತಂಡದಲ್ಲಿದ್ದಾರೆ. ವಿರುದ್ಧದ ಮೊದಲ ಟೆಸ್ಟ್ ಪಂದ್ಯಕ್ಕೆ ಬಿಸಿಸಿಐ ಬಲಿಷ್ಠ ತಂಡವನ್ನೇ ಪ್ರಕಟಿಸಿದೆ. 2ನೇ ಟೆಸ್ಟ್ ಪಂದ್ಯದ ವೇಳೆ ತಂಡದಲ್ಲಿ ಕೆಲ ಬದಲಾವಣೆಯಾಗುವ ಸಾಧ್ಯತೆಯಿದೆ. ಮೊದಲ ಟೆಸ್ಟ್‌ನಲ್ಲಿ ಕಳಪೆ ಪ್ರದರ್ಶನ ನೀಡಿದ ಆಟಗಾರರನ್ನು ಕೈಬಿಟ್ಟು, ದುಲೀಪ್ ಟ್ರೋಫಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಆಟಗಾರರಿಗೆ ಅವಕಾಶ ನೀಡಬಹುದು ಎಂದು ಹೇಳಲಾಗಿದೆ. ಹೀಗಾಗಿ ಮೊದಲ ಟೆಸ್ಟ್ ಪಂದ್ಯಕ್ಕೆ ಮಾತ್ರ ಟೀಂ ಇಂಡಿಯಾವನ್ನು ಘೋಷಿಸಲಾಗಿದೆ. ಟೀಂ ಇಂಡಿಯಾದ ಸ್ಕ್ವಾಡ್‌ ಈ ಈತಿ ಇದೆ ರೋಹಿತ್ ಶರ್ಮಾ (ನಾಯಕ)ಯಶಸ್ವಿ ಜೈಸ್ವಾಲ್ಶುಭ್​ಮನ್ ಗಿಲ್ವಿರಾಟ್ ಕೊಹ್ಲಿಸರ್ಫರಾಜ್ ಖಾನ್ಕೆ.ಎಲ್.ರಾಹುಲ್,ರಿಷಭ್ ಪಂತ್ (ವಿಕೆಟ್ ಕೀಪರ್)ಧ್ರುವ್ ಜುರೇಲ್ (ವಿಕೆಟ್ ಕೀಪರ್)ಆರ್.ಅಶ್ವಿನ್ರವೀಂದ್ರ ಜಡೇಜಾಕುಲ್ದೀಪ್ ಯಾದವ್ಅಕ್ಷರ್ ಪಟೇಲ್ಮೊಹಮ್ಮದ್ ಸಿರಾಜ್ಜಸ್​ಪ್ರೀತ್ ಬುಮ್ರಾಆಕಾಶ್ ದೀಪ್ಯಶ್ ದಯಾಳ್ ಭಾರತ ಬಾಂಗ್ಲಾದೇಶ ಸರಣಿ ವೇಳಾಪಟ್ಟಿ ಇದನ್ನೂ ಓದಿ: ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...