12 ವರ್ಷಗಳ ವೃತ್ತಿಜೀವನಕ್ಕೆ ವಿದಾಯ! ನಿವೃತ್ತಿ ಘೋಷಿಸಿದ ಖ್ಯಾತ ಕ್ರಿಕೆಟಿಗ!! : 12 ವರ್ಷಗಳ ಕಾಲ ದೇಶಕ್ಕಾಗಿ ಆಡಿದ ಈ ಆಟಗಾರ ಇದ್ದಕ್ಕಿದ್ದಂತೆ ತಮ್ಮ ವೃತ್ತಿಜೀವನವನ್ನು ಕೊನೆಗೊಳಿಸಲು ನಿರ್ಧರಿಸಿದ್ದಾರೆ. ಅವರ ಈ ನಿರ್ಧಾರ ತಂಡ ಹಾಗೂ ಅಭಿಮಾನಿಗಳ ಕಣ್ಣಲ್ಲಿ ನೀರು ತರಿಸಿದೆ. :36 ವರ್ಷ ವಯಸ್ಸಿನ ವೆಸ್ಟ್ ಇಂಡೀಸ್ ವೇಗದ ಬೌಲರ್ ಶಾನನ್ ಗೇಬ್ರಿಯಲ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ತಿಳಿಸುವುದರ ಮೂಲಕ ಅಂತರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ.. 2012ರಲ್ಲಿ ವೆಸ್ಟ್ ಇಂಡೀಸ್ ಪರ ಗೇಬ್ರಿಯಲ್ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಪದಾರ್ಪಣೆ ಮಾಡಿದ್ದರು. ಇದೀಗ 12 ವರ್ಷಗಳ ಕಾಲ ದೇಶಕ್ಕಾಗಿ ಆಡಿದ ಅವರು ನಿಲ್ಲಿಸಲು ನಿರ್ಧರಿಸಿದ್ದಾರೆ. ನಿವೃತ್ತಿ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಅವರು, ಕಳೆದ 12 ವರ್ಷಗಳಿಂದ ವೆಸ್ಟ್ ಇಂಡೀಸ್ ಪರ ಸಂಪೂರ್ಣ ಸಮರ್ಪಣೆಯೊಂದಿಗೆ ಅಂತಾರಾಷ್ಟ್ರೀಯ ಕ್ರಿಕೆಟ್ ಆಡುತ್ತಿದ್ದೇನೆ. ಅದನ್ನು ಬೇರೆಯ ಮಟ್ಟಕ್ಕೆ ಕೊಂಡೊಯ್ಯುವಾಗ ಆಗುವ ಖುಷಿ ಅಪಾರ, ಆದರೆ ಒಳ್ಳೇದು ಕೂಡ ಕೊನೆಗೊಳ್ಳುತ್ತದೆ ಎಂಬ ಮಾತು ನಮ್ಮಲ್ಲಿದೆ. ಅದಕ್ಕಾಗಿಯೇ ನಾನು ಇಂದು ಅಂತರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸುತ್ತಿದ್ದೇನೆ. ಇದನ್ನೂ ಓದಿ- ದೇಶವನ್ನು ಪ್ರತಿನಿಧಿಸಲು ಹಲವು ಅವಕಾಶಗಳು ಸಿಕ್ಕಿದ್ದಕ್ಕಾಗಿ ದೇವರಿಗೆ ಧನ್ಯವಾದಗಳು. ನನ್ನ ಕುಟುಂಬ, ವೆಸ್ಟ್ ಇಂಡೀಸ್ ಕ್ರಿಕೆಟ್ ಮಂಡಳಿ, ಸಹಾಯಕ ಸಿಬ್ಬಂದಿ ಮತ್ತು ತರಬೇತುದಾರರಿಗೆ ಧನ್ಯವಾದ.. ವಿಶೇಷವಾಗಿ ನನ್ನ ಸಹ ಆಟಗಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಿದ್ದೇನೆ" ಎಂದು ಹೇಳುವ ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ. ಇನ್ನು ದೇಶವನ್ನು ಪ್ರತಿನಿಧಿಸಲು ಸಿಕ್ಕ ಅವಕಾಶಕ್ಕಾಗಿ ಶಾನನ್ ಗೇಬ್ರಿಯಲ್ ದೇವರಿಗೆ ಧನ್ಯವಾದ ಅರ್ಪಿಸಿದರು. ಕ್ರಿಕೆಟ್ ಮಂಡಳಿ, ಮಿತ್ರ ಪರಿವಾರ, ಕ್ರೀಡಾ ಸಿಬ್ಬಂದಿಯ ತರಬೇತುದಾರರಿಗೂ ಹೃತ್ಪೂರ್ವಕ ಧನ್ಯವಾದಗಳು. ಎಲ್ಲರಿಗೂ ಮನದಾಳದಿಂದ ಧನ್ಯವಾದ ಹೇಳುವ ಮೂಲಕ ಕೃತಜ್ಞತೆ ಸಲ್ಲಿಸಿದ್ದಾರೆ. ಇದನ್ನೂ ಓದಿ- ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...