ಏಕಲವ್ಯ ಪ್ರಶಸ್ತಿ/ ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ ಸೆ. 15 ರೊಳಗಾಗಿ ಸಲ್ಲಿಸುವಂತೆ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಶಿವಮೊಗ್ಗ:-ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಕ್ರೀಡಾ ಪಟುಗಳಿಗೆ ಏಕಲವ್ಯ ಪ್ರಶಸ್ತಿ ಮತ್ತು ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿ ನೀಡಲು ಅರ್ಹ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತ ಕ್ರೀಡಾಪಟುಗಳು ನಿಗಧಿತ ನಮೂನೆ ಅರ್ಜಿಯನ್ನು ನಗರದ ನೆಹರೂ ಕ್ರೀಡಾಂಗಣದಲ್ಲಿರುವ ಇಲಾಖಾ ಕಚೇರಿಯಲ್ಲಿ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಸೂಕ್ತ ದಾಖಲೆಗಳನ್ನು ಲಗತ್ತಿಸಿ ಸೆ. 15 ರೊಳಗಾಗಿ ಸಲ್ಲಿಸುವಂತೆ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08182-223328ನ್ನು ಸಂಪರ್ಕಿಸಬಹುದಾಗಿದೆ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...