ಜಯ್ ಶಾ ಬದಲಿಗೆ ಬಿಸಿಸಿಐ ಕಾರ್ಯದರ್ಶಿಯಾಗಬಲ್ಲ ರೋಹನ್ ಜೇಟ್ಲಿ ಯಾರು? ಇವರ ಹಿನ್ನಲೆ ಏನು ಗೊತ್ತೇ? : ದೆಹಲಿ ಮತ್ತು ಜಿಲ್ಲಾ ಕ್ರಿಕೆಟ್ ಸಂಸ್ಥೆಯ (ಡಿಡಿಸಿಎ) ಪ್ರಸ್ತುತ ಅಧ್ಯಕ್ಷ ರೋಹನ್ ಜೇಟ್ಲಿ ಅವರು ಬಿಸಿಸಿಐನ ಮುಂದಿನ ಕಾರ್ಯದರ್ಶಿಯಾಗಲು ಸಾಲಿನಲ್ಲಿದ್ದಾರೆ ಎಂದು ವರದಿಯಾಗಿದೆ. : ದೆಹಲಿ ಮತ್ತು ಜಿಲ್ಲಾ ಕ್ರಿಕೆಟ್ ಸಂಸ್ಥೆಯ (ಡಿಡಿಸಿಎ) ಪ್ರಸ್ತುತ ಅಧ್ಯಕ್ಷ ರೋಹನ್ ಜೇಟ್ಲಿ ಅವರು ಬಿಸಿಸಿಐನ ಮುಂದಿನ ಕಾರ್ಯದರ್ಶಿಯಾಗಲು ಸಾಲಿನಲ್ಲಿದ್ದಾರೆ ಎಂದು ವರದಿಯಾಗಿದೆ. ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಅಧ್ಯಕ್ಷ ಸ್ಥಾನಕ್ಕೆ ಜಯ್ ಶಾ ಸ್ಪರ್ಧಿಸುತ್ತಾರೋ ಇಲ್ಲವೋ ಎಂಬುದರ ಮೇಲೆ ಈ ಬೆಳವಣಿಗೆ ನಿಂತಿದೆ. ಐಸಿಸಿ ಬೋರ್ಡ್‌ನ 16 ಸದಸ್ಯರಲ್ಲಿ 15 ಸದಸ್ಯರ ಬೆಂಬಲವನ್ನು ಶಾ ಹೊಂದಿದ್ದು, ಅವರ ಆಯ್ಕೆ ಬಹುತೇಕ ಖಚಿತವಾಗಿದೆ ಎಂದು ನಂಬಲಾಗಿದೆ. ವರದಿಯ ಪ್ರಕಾರ, ಬಿಸಿಸಿಐ ಕಾರ್ಯದರ್ಶಿ ಹುದ್ದೆಗೆ ರೋಹನ್ ಜೇಟ್ಲಿ ಹೆಸರು ಒಮ್ಮತಕ್ಕೆ ತಲುಪಿಸಲಾಗಿದೆ. ರೋಹನ್ ಅವರು ದಿವಂಗತ ರಾಜಕಾರಣಿ ಅರುಣ್ ಜೇಟ್ಲಿ ಅವರ ಪುತ್ರ. ಆದರೆ ಅಧ್ಯಕ್ಷ ರೋಜರ್ ಬಿನ್ನಿ ಸೇರಿದಂತೆ ಇತರ ಉನ್ನತ ಬಿಸಿಸಿಐ ಅಧಿಕಾರಿಗಳು ತಮ್ಮ ಹುದ್ದೆಗಳನ್ನು ಉಳಿಸಿಕೊಳ್ಳುವ ನಿರೀಕ್ಷೆಯಿದೆ. ಇದನ್ನೂ ಓದಿ- ರೋಹನ್ ಜೇಟ್ಲಿ ಬಗ್ಗೆ ಮಾತನಾಡುತ್ತಾ, ಅವರು ವೃತ್ತಿಪರ ವಕೀಲರು. ಪ್ರಸ್ತುತ ಅವರು ದೆಹಲಿ ಜಿಲ್ಲಾ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇದಲ್ಲದೆ, ಅವರು ದಿವಂಗತ ಬಿಜೆಪಿ ನಾಯಕ ಮತ್ತು ಮಾಜಿ ಕೇಂದ್ರ ಸಚಿವ ಅರುಣ್ ಜೇಟ್ಲಿ ಅವರ ಮಗ. ಇನ್ನು ಜಯ್ ಷಾ ಅವರನ್ನು ಅತ್ಯಂತ ಪ್ರಭಾವಶಾಲಿ ವ್ಯಕ್ತಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿದೆ. ಅವರು ಐಸಿಸಿಯ ಹಣಕಾಸು ಮತ್ತು ವಾಣಿಜ್ಯ ಉಪ ಸಮಿತಿಯಲ್ಲೂ ಸೇವೆ ಸಲ್ಲಿಸುತ್ತಿದ್ದಾರೆ. ಜಯ್ ಶಾ ಅಧ್ಯಕ್ಷರಾಗಿ ಆಯ್ಕೆಯಾದರೆ, ಅವರು ಐಸಿಸಿಯ ಅತ್ಯಂತ ಕಿರಿಯ ಅಧ್ಯಕ್ಷರಾಗುತ್ತಾರೆ. ಇದನ್ನೂ ಓದಿ- ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...