: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಶಿಖರ್ ಧವನ್... ಅಭಿಮಾನಿಗಳಿಗೆ ಬಿಗ್ ಶಾಕ್ : ಶಿಖರ್ ಧವನ್ ಟೀಂ ಇಂಡಿಯಾದ ಹಿರಿಯ ಆರಂಭಿಕ ಆಟಗಾರ. ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಶಿಖರ್ ಧವನ್ ನಿವೃತ್ತಿ ಘೋಷಿಸಿದ್ದಾರೆ. :ಶಿಖರ್ ಧವನ್ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ. ಟೀಂ ಇಂಡಿಯಾದ ಹಿರಿಯ ಆರಂಭಿಕ ಆಟಗಾರ ಶಿಖರ್ ಧವನ್ ಒಂದು ಕಾಲದಲ್ಲಿ ಭಾರತ ತಂಡದ ಬ್ಯಾಟಿಂಗ್ ಕ್ರಮಾಂಕದ ಪ್ರಬಲ ಆಧಾರಸ್ತಂಭವಾಗಿದ್ದರು. ಶಿಖರ್ ಧವನ್ ಭಾರತಕ್ಕಾಗಿ ಎಲ್ಲಾ ಮೂರು ಮಾದರಿಗಳಲ್ಲಿ ಕ್ರಿಕೆಟ್ ಆಡಿದ್ದಾರೆ. ಟೀಂ ಇಂಡಿಯಾ ಪರ ಶಿಖರ್ ಧವನ್ 34 ಟೆಸ್ಟ್ ಪಂದ್ಯಗಳಲ್ಲಿ 2315 ರನ್, 167 ಏಕದಿನ ಪಂದ್ಯಗಳಲ್ಲಿ 6793 ರನ್ ಮತ್ತು 68 ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ 1759 ರನ್ ಗಳಿಸಿದ್ದಾರೆ. ಶಿಖರ್ ಧವನ್ ಕಳೆದ 2 ವರ್ಷಗಳಿಂದ ಟೀಂ ಇಂಡಿಯಾದಿಂದ ಹೊರಗುಳಿದಿದ್ದರು. ಶಿಖರ್ ಧವನ್ 2022 ರಲ್ಲಿ ಬಾಂಗ್ಲಾದೇಶ ಪ್ರವಾಸದಲ್ಲಿ ತಮ್ಮ ಕೊನೆಯ ಅಂತಾರಾಷ್ಟ್ರೀಯ ಪಂದ್ಯವನ್ನು ಆಡಿದ್ದರು. ಶಿಖರ್ ಧವನ್ ತಮ್ಮ ಕೊನೆಯ ಪಂದ್ಯವನ್ನು ಬಾಂಗ್ಲಾದೇಶ ವಿರುದ್ಧ 10 ಡಿಸೆಂಬರ್ 2022 ರಂದು ಚಿತ್ತಗಾಂಗ್‌ನಲ್ಲಿ ಆಡಿದರು. ಕೊನೆಯ ಟೆಸ್ಟ್ ಪಂದ್ಯವನ್ನು ಇಂಗ್ಲೆಂಡ್ ವಿರುದ್ಧ 7 ಸೆಪ್ಟೆಂಬರ್ 2018 ರಂದು ಓವಲ್‌ನಲ್ಲಿ ಆಡಿದರು. ಕೊನೆಯ T20 ಅಂತರಾಷ್ಟ್ರೀಯ ಪಂದ್ಯವನ್ನು ಶ್ರೀಲಂಕಾ ವಿರುದ್ಧ 29 ಜುಲೈ 2021 ರಂದು ಆಡಿದರು. ಇದನ್ನೂ ಓದಿ: 2013 ರ ಚಾಂಪಿಯನ್ಸ್ ಟ್ರೋಫಿಯಲ್ಲಿ ಮೊದಲ ಬಾರಿಗೆ ನಾಯಕ ಮಹೇಂದ್ರ ಸಿಂಗ್ ಧೋನಿ ರೋಹಿತ್ ಶರ್ಮಾ ಮತ್ತು ಶಿಖರ್ ಧವನ್ ಅವರನ್ನು ಓಪನಿಂಗ್ ಮಾಡಲು ಕಣಕ್ಕಿಳಿಸಿದ್ದರು. ಅಂದಿನಿಂದ ಇವರಿಬ್ಬರೂ ಭಾರತದ ಬ್ಯಾಟಿಂಗ್‌ನ ಅಡಿಪಾಯವಾದರು. ಇವರಿಬ್ಬರು ಅಗ್ರ ಕ್ರಮಾಂಕದಲ್ಲಿ ಸಾಕಷ್ಟು ರನ್ ಗಳಿಸಿದರು. ರೋಹಿತ್ ಜೊತೆಗೆ ಧವನ್ ವಿಶ್ವದ ಪ್ರತಿಯೊಂದು ಮೈದಾನದಲ್ಲಿ ರನ್ ಗಳಿಸಿದ್ದರು. ಅವರ ಬ್ಯಾಟಿಂಗ್ ನೋಡಿ ದೊಡ್ಡ ದೊಡ್ಡ ಬೌಲರ್ ಗಳು ಹಲ್ಲು ಕಚ್ಚುತ್ತಿದ್ದರು. ಆಯ್ಕೆದಾರರು ಶಿಖರ್ ಧವನ್ ಅವರನ್ನು ಬಹಳ ಸಮಯದಿಂದ ನಿರ್ಲಕ್ಷಿಸುತ್ತಿದ್ದಾರೆ ಎಂಬ ಆರೋಪಗಳು ಇತ್ತೀಚೆಗೆ ಕೇಳಿಬಂದಿದ್ದವು. ರೋಹಿತ್ ಶರ್ಮಾ ಅವರಂತೆ ಶಿಖರ್ ಧವನ್ ಬಿರುಸಿನ ಬ್ಯಾಟಿಂಗ್‌ನಲ್ಲಿ ಪರಿಣತರಾಗಿದ್ದರು. ಶಿಖರ್ ಧವನ್ ಅವರನ್ನು ಟೀಮ್ ಇಂಡಿಯಾದ ಅತಿದೊಡ್ಡ ಮ್ಯಾಚ್ ವಿನ್ನರ್ ಎಂದು ಪರಿಗಣಿಸಲಾಗಿತ್ತು. ಹಿರಿಯ ಆರಂಭಿಕ ಆಟಗಾರ ಶಿಖರ್ ಧವನ್ ದೊಡ್ಡ ಟೂರ್ನಿಗಳನ್ನು ಗೆದ್ದ ಅನುಭವ ಹೊಂದಿದ್ದಾರೆ. ಭಾರತ 2013 ರಲ್ಲಿ ಐಸಿಸಿ ಚಾಂಪಿಯನ್ಸ್ ಟ್ರೋಫಿ ಪ್ರಶಸ್ತಿಯನ್ನು ಗೆದ್ದುಕೊಂಡಿತು, ಇದರಲ್ಲಿ ಶಿಖರ್ ಧವನ್ ದೊಡ್ಡ ಪಾತ್ರವನ್ನು ವಹಿಸಿದ್ದರು. ಶಿಖರ್ ಧವನ್ ಕ್ರಿಕೆಟ್‌ನ ಎಲ್ಲಾ ಸ್ವರೂಪಗಳಲ್ಲಿ ಅಗ್ರ ಆಟಗಾರರಾಗಿ ಕಾಣಿಸಿಕೊಂಡರು. ಇದೀಗ ಶಿಖರ್‌ ಧವನ್‌ ನಿವೃತ್ತಿ ಘೋಷಿಸಿದ್ದಾರೆ. ಇದನ್ನೂ ಓದಿ: ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...