ಕೊಹ್ಲಿ, ಬುಮ್ರಾ ಅಥವಾ ಹಾರ್ದಿಕ್ ಅಲ್ಲ; ಟಿ20 ವಿಶ್ವಕಪ್‌ ಗೆಲುವಿನ ಸಂಪೂರ್ಣ ಕ್ರೆಡಿಟ್‌ ಈ ಮೂವರಿಗೆ ಸಲ್ಲಬೇಕು: ರೋಹಿತ್ ಶರ್ಮಾ ಹೇಳಿದ್ದು ಯಾರ ಬಗ್ಗೆ? : ಸ್ವತಃ ರೋಹಿತ್ ಶರ್ಮಾ ತಂಡವನ್ನು ಚಾಂಪಿಯನ್ ಮಾಡುವಲ್ಲಿ ಗಣನೀಯ ಕೊಡುಗೆ ನೀಡಿದ್ದರು. ಇದಲ್ಲದೆ ವಿರಾಟ್ ಕೊಹ್ಲಿ, ಜಸ್ಪ್ರೀತ್ ಬುಮ್ರಾ ಮತ್ತು ಹಾರ್ದಿಕ್ ಪಾಂಡ್ಯ ಅವರಂತಹ ಆಟಗಾರರು ಅದ್ಭುತ ಪ್ರದರ್ಶನ ನೀಡಿದರು. ಆದರೆ ತಂಡದ ನಾಯಕ ರೋಹಿತ್ ಶರ್ಮಾ ಈ ಗೆಲುವಿನ ಶ್ರೇಯವನ್ನು ಇತರ 3 ಜನರಿಗೆ ನೀಡಿದ್ದಾರೆ. : ಜೂನ್ ತಿಂಗಳಲ್ಲಿ ನಡೆದ ಐಸಿಸಿ ಟಿ20 ವಿಶ್ವಕಪ್ ಟ್ರೋಫಿಯನ್ನು ಭಾರತೀಯ ಕ್ರಿಕೆಟ್ ತಂಡ ಗೆದ್ದುಕೊಂಡಿರುವುದು ತಿಳಿದೇ ಇದೆ. ಭಾರತ ತಂಡ ಅಂತಿಮ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು ಸೋಲಿಸುವ ಮೂಲಕ ಈ ಸಾಧನೆ ಮಾಡಿತ್ತು. ಸ್ವತಃ ರೋಹಿತ್ ಶರ್ಮಾ ತಂಡವನ್ನು ಚಾಂಪಿಯನ್ ಮಾಡುವಲ್ಲಿ ಗಣನೀಯ ಕೊಡುಗೆ ನೀಡಿದ್ದರು. ಇದಲ್ಲದೆ ವಿರಾಟ್ ಕೊಹ್ಲಿ, ಜಸ್ಪ್ರೀತ್ ಬುಮ್ರಾ ಮತ್ತು ಹಾರ್ದಿಕ್ ಪಾಂಡ್ಯ ಅವರಂತಹ ಆಟಗಾರರು ಅದ್ಭುತ ಪ್ರದರ್ಶನ ನೀಡಿದರು. ಆದರೆ ತಂಡದ ನಾಯಕ ರೋಹಿತ್ ಶರ್ಮಾ ಈ ಗೆಲುವಿನ ಶ್ರೇಯವನ್ನು ಇತರ 3 ಜನರಿಗೆ ನೀಡಿದ್ದಾರೆ. ಇದನ್ನೂ ಓದಿ: ಟೀಂ ಇಂಡಿಯಾವನ್ನು ಚಾಂಪಿಯನ್ ಮಾಡುವಲ್ಲಿ ರೋಹಿತ್ ಶರ್ಮಾ ಮತ್ತು ಅವರ ಸಹ ಆಟಗಾರರು ಪ್ರಮುಖ ಕೊಡುಗೆ ನೀಡಿದ್ದಾರೆ. ರೋಹಿತ್ ಶರ್ಮಾ ಪಂದ್ಯಾವಳಿಯುದ್ದಕ್ಕೂ ತಮ್ಮ ಬ್ಯಾಟಿಂಗ್‌ʼನಿಂದ ಅದ್ಭುತ ಪ್ರದರ್ಶನ ತೋರಿರುವುದು ನಮಗೆಲ್ಲಾ ತಿಳಿದಿರುವ ಸಂಗತಿ. ಇನ್ನು ವಿರಾಟ್ ಕೊಹ್ಲಿ ತಮ್ಮ ಅತ್ಯುತ್ತಮ ಬ್ಯಾಟಿಂಗ್ ಮೂಲಕ ತಂಡವನ್ನು ಚಾಂಪಿಯನ್ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು, ಮತ್ತೊಂದೆಡೆ ಹಾರ್ದಿಕ್ ಪಾಂಡ್ಯ ಮತ್ತು ಜಸ್ಪ್ರೀತ್ ಬುಮ್ರಾ ತಮ್ಮ ಬೌಲಿಂಗ್ ಮೂಲಕ ಅಬ್ಬರಿಸಿದ್ದರು. ಸೂರ್ಯಕುಮಾರ್ ಯಾದವ್ ಅವರ ಐತಿಹಾಸಿಕ ಕ್ಯಾಚ್ 11 ವರ್ಷಗಳ ನಂತರ ಭಾರತವನ್ನು ಚಾಂಪಿಯನ್ ಮಾಡುವಲ್ಲಿ ವಿಶೇಷ ಕೊಡುಗೆ ನೀಡಿತ್ತು. ಆದರೆ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಮಾಜಿ ಮುಖ್ಯ ಕೋಚ್ ರಾಹುಲ್ ದ್ರಾವಿಡ್, ಬಿಸಿಸಿಐ ಆಯ್ಕೆ ಸಮಿತಿ ಅಧ್ಯಕ್ಷ ಅಜಿತ್ ಅಗರ್ಕರ್ ಮತ್ತು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರಿಗೆ ವಿಶ್ವಕಪ್ ಗೆದ್ದ ಶ್ರೇಯಸ್ಸನ್ನು ನೀಡಿದ್ದಾರೆ. ಆಟಗಾರರಿಂದ ಅತ್ಯುತ್ತಮ ಪ್ರದರ್ಶನವನ್ನು ಹೊರತೆಗೆಯಲು ಪ್ರಯತ್ನಿಸುವಲ್ಲಿ ಅವರು ಸಂಪೂರ್ಣ ಬೆಂಬಲವನ್ನು ನೀಡಿದ್ದರು. ಇದರಿಂದಾಗಿ ಭಾರತವು T20 ವಿಶ್ವಕಪ್ ಪ್ರಶಸ್ತಿಯನ್ನು ಗೆಲ್ಲಲು ಸಾಧ್ಯವಾಯಿತು ಎಂದು ರೋಹಿತ್ ಹೇಳಿದ್ದಾರೆ. ಇದನ್ನೂ ಓದಿ: ನಾವು ವಿಶ್ವ ಚಾಂಪಿಯನ್ ಆದಾಗ ಇಡೀ ದೇಶವೇ ನಮ್ಮೊಂದಿಗೆ ಸಂಭ್ರಮಿಸಿತು. ದೇಶದ ಪ್ರತಿಯೊಬ್ಬರಿರೂ ಕೃತಜ್ಞರಾಗಿದ್ದೇವೆ. ಟಿ20 ವಿಶ್ವಕಪ್ ಗೆಲ್ಲುವುದು ವಿಶೇಷವಾದ ಭಾವನೆಯಾಗಿದೆ. ದೇಶ ನಮ್ಮಿಂದಲೂ ಇದೇ ರೀತಿಯ ಸಾಧನೆಯನ್ನು ನಿರೀಕ್ಷಿಸುತ್ತಿತ್ತು ಎಂದು ರೋಹಿತ್ ಶರ್ಮಾ ಹೇಳಿದ್ದಾರೆ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...