ನಿಮ್ಮನ್ನು ಮಹಾರಾಜ ಎಂದಿದ್ದಕ್ಕೆ ಸರಿಯಾಗಿ ಮಾಡಿದ್ರಿ!! ದಿಗ್ಗಜ ಕ್ರಿಕೆಟಿಗ ಸೌರವ್‌ ಗಂಗೂಲಿ ವಿರುದ್ಧ ಖ್ಯಾತ ನಟಿ ವಾಗ್ದಾಳಿ : ಈ ಪ್ರಕರಣವನ್ನು ಸಿಬಿಐಗೆ ವರ್ಗಾಯಿಸಲಾಗಿದ್ದು, ಕೇಂದ್ರ ಸಂಸ್ಥೆ ತನಿಖೆ ಆರಂಭಿಸಿದೆ. ಇದಲ್ಲದೆ, ಭಾರತ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ, ತಪ್ಪಿತಸ್ಥರ ವಿರುದ್ಧ ಕಠಿಣ ಶಿಕ್ಷೆಗೆ ಒತ್ತಾಯಿಸಿದ್ದಾರೆ. :ಆಗಸ್ಟ್ 9 ರಂದು ಕೋಲ್ಕತ್ತಾದ ಆರ್‌ ಜಿ ಕಾರ್ ಮೆಡಿಕಲ್ ಕಾಲೇಜಿನಲ್ಲಿ ವೈದ್ಯೆಯೊಬ್ಬರನ್ನು ಬರ್ಬರವಾಗಿ ಅ**ಚಾರ ಮಾಡಿ ಕೊಲೆ ಮಾಡಲಾಗಿದೆ. ಈ ಘೋರ ಅಪರಾಧದ ವಿರುದ್ಧ ಜನರು ದಂಗೆ ಎದ್ದಿದ್ದು, ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸುತ್ತಿದ್ದಾರೆ. ಇನ್ನು ಈ ಪ್ರಕರಣವನ್ನು ಸಿಬಿಐಗೆ ವರ್ಗಾಯಿಸಲಾಗಿದ್ದು, ಕೇಂದ್ರ ಸಂಸ್ಥೆ ತನಿಖೆ ಆರಂಭಿಸಿದೆ. ಇದಲ್ಲದೆ, ಭಾರತ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ, ತಪ್ಪಿತಸ್ಥರ ವಿರುದ್ಧ ಕಠಿಣ ಶಿಕ್ಷೆಗೆ ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಈ ಮಧ್ಯೆ, ಬಂಗಾಳಿ ನಟಿ ಶ್ರೀಲೇಖಾ ಮಿತ್ರಾ ಗಂಗೂಲಿ ಅವರ ಹೇಳಿಕೆಗೆ ಕಟುವಾಗಿ ಟೀಕಿಸಿದ್ದಾರೆ. "ಇದು ತುಂಬಾ ದುರದೃಷ್ಟಕರ ಮತ್ತು ಗಂಭೀರ ಕ್ರಮ ತೆಗೆದುಕೊಳ್ಳುವ ಅವಶ್ಯಕತೆಯಿದೆ. ಮಹಿಳೆಯರ ಸುರಕ್ಷತೆಯ ಮೇಲೆ ನಿಗಾ ಇಡುವ ಅಗತ್ಯವಿದೆ. ಇಂತಹ ಘಟನೆಗಳು ಎಲ್ಲಿ ಬೇಕಾದರೂ ಆಗಬಹುದು. ನಾವು ಉತ್ತಮ ಭದ್ರತಾ ವ್ಯವಸ್ಥೆಯನ್ನು ಹೊಂದಿದ್ದೇವೆ ಮತ್ತು ಭಾರತವು ಅದ್ಭುತ ದೇಶವಾಗಿದೆ. ದೊಡ್ಡ ನಗರ ಮತ್ತು ದೊಡ್ಡ ರಾಜ್ಯದಲ್ಲಿ ವಾಸಿಸುತ್ತಿದ್ದೇವೆ. ಒಂದು ಸಾಮಾನ್ಯ ಘಟನೆಯಿಂದ ಎಲ್ಲವನ್ನೂ ನಿರ್ಣಯಿಸಲು ಸಾಧ್ಯವಿಲ್ಲ, ಆದರೆ ಕಠಿಣ ಕ್ರಮ ತೆಗೆದುಕೊಳ್ಳಬೇಕು. ಆಸ್ಪತ್ರೆಗಳಲ್ಲಿ, ಮೈದಾನಗಳಲ್ಲಿ ಮತ್ತು ಬೀದಿಗಳಲ್ಲಿ ಸರಿಯಾದ ಭದ್ರತೆ ಇರಬೇಕು" ಎಂದು ಸೌರವ್ ಗಂಗೂಲಿ ಹೇಳಿದ್ದರು. ಇನ್ನು ಗಂಗೂಲಿ ಈ ವಿಚಾರವನ್ನು ಸಾಮಾನ್ಯ ಘಟನೆ ಎಂದು ಹೇಳಿದರ ಬಗ್ಗೆ ಬಂಗಾಳಿ ನಟಿ ಶ್ರೀಲೇಖಾ ಮಿತ್ರಾ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: “ಜನರು ಕ್ರಿಕೆಟಿಗರಾಗಿ ನಿಮ್ಮನ್ನು ಪ್ರೀತಿಸಿದ್ದಾರೆ. ನಿಮ್ಮ ಟಿವಿ ಕಾರ್ಯಕ್ರಮಗಳನ್ನು ಮೆಚ್ಚಿದ್ದಾರೆ. ನಿನ್ನನ್ನು ಮಹಾರಾಜ ಎಂದು ಕರೆಯುತ್ತಾರೆ. ಆದರೆ ನೀವು ಈ ಘಟನೆಯನ್ನು ಸಾಮಾನ್ಯ ಎಂದು ಹೇಳಿರುವುದು ಬೇಸರವಾಗಿದೆ, ನಿಮ್ಮನ್ನು ಮಹಾರಾಜ ಎಂದು ಕರೆದಿದ್ದಕ್ಕೆ ಸರಿಯಾರಿ ಮಾಡಿದ್ದೀರಿ" ಎಂದು ಹೇಳಿದ್ದಾರೆ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...