ಡಾನ್ ಬ್ರಾಡ್ಮನ್ ವಿಶ್ವದಾಖಲೆ ಮುರಿಯುವ ದಿನ ದೂರವಿಲ್ಲ...! ಆ ರೆಕಾರ್ಡ್‌ ಬ್ರೇಕ್‌ ಮಾಡೋಕೆ ವಿರಾಟ್ ಕೊಹ್ಲಿಗೆ ಬೇಕಿರೋದು ಇಷ್ಟೇ ರನ್ : ಸೆಪ್ಟೆಂಬರ್ 19 ರಿಂದ ನಡೆಯಲಿರುವ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಟೆಸ್ಟ್ ಸರಣಿಯಲ್ಲಿ, ದಂತಕಥೆ ಡಾನ್ ಬ್ರಾಡ್ಮನ್ ಅವರ ದೊಡ್ಡ ಟೆಸ್ಟ್ ದಾಖಲೆಯನ್ನು ಮುರಿಯಲು ಕೊಹ್ಲಿ ಸಿದ್ಧರಾಗಿದ್ದಾರೆ. ಶ್ರೀಲಂಕಾ ಪ್ರವಾಸದಲ್ಲಿ ಏಕದಿನ ಸರಣಿಯನ್ನು ಆಡಿದ ನಂತರ, ವಿರಾಟ್ ಕೊಹ್ಲಿ ಲಂಡನ್‌ʼಗೆ ತೆರಳಿದ್ದಾರೆ, :ಭಾರತ ಕ್ರಿಕೆಟ್ ತಂಡದ ಲೆಜೆಂಡರಿ ಬ್ಯಾಟ್ಸ್‌ʼಮನ್ ವಿರಾಟ್ ಕೊಹ್ಲಿ ಕ್ಲಾಸ್ ಬ್ಯಾಟಿಂಗ್ ಬಗ್ಗೆ ವಿಶೇಷವಾಗಿ ಏನನ್ನೂ ಹೇಳುವ ಅವಶ್ಯಕತೆ ಇಲ್ಲ. ಅಂತರಾಷ್ಟ್ರೀಯ ಕ್ರಿಕೆಟ್‌ʼನಲ್ಲಿ ಅದೆಷ್ಟೋ ದಾಖಲೆಗಳನ್ನು ನಿರ್ಮಿಸಿದ್ದಾರೆ. ಮುಂದಿನ ದಿನಗಳಲ್ಲಿಯೂ ಕೆಲ ದಾಖಲೆಗಳನ್ನು ಮುರಿಯುವ ಸನಿಹದಲ್ಲಿದ್ದಾರೆ. ಇದನ್ನೂ ಓದಿ: ಸೆಪ್ಟೆಂಬರ್ 19 ರಿಂದ ನಡೆಯಲಿರುವ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಟೆಸ್ಟ್ ಸರಣಿಯಲ್ಲಿ, ದಂತಕಥೆ ಡಾನ್ ಬ್ರಾಡ್ಮನ್ ಅವರ ದೊಡ್ಡ ಟೆಸ್ಟ್ ದಾಖಲೆಯನ್ನು ಮುರಿಯಲು ಕೊಹ್ಲಿ ಸಿದ್ಧರಾಗಿದ್ದಾರೆ. ಶ್ರೀಲಂಕಾ ಪ್ರವಾಸದಲ್ಲಿ ಏಕದಿನ ಸರಣಿಯನ್ನು ಆಡಿದ ನಂತರ, ವಿರಾಟ್ ಕೊಹ್ಲಿ ಲಂಡನ್‌ʼಗೆ ತೆರಳಿದ್ದಾರೆ, ಮುಂದಿನ ತಿಂಗಳು ಬಾಂಗ್ಲಾದೇಶ ತಂಡ ಎರಡು ಟೆಸ್ಟ್ ಮತ್ತು ಮೂರು ಟಿ20 ಅಂತಾರಾಷ್ಟ್ರೀಯ ಸರಣಿಗಳನ್ನು ಆಡಲು ಭಾರತಕ್ಕೆ ಪ್ರವಾಸ ಕೈಗೊಳ್ಳಲಿದೆ. ಇದರ ಮೊದಲ ಟೆಸ್ಟ್ ಸೆಪ್ಟೆಂಬರ್ 19 ರಿಂದ ಆರಂಭವಾಗಲಿದೆ. ಈ ಪಂದ್ಯದಿಂದಲೇ ವಿರಾಟ್ ಮತ್ತೆ ಕ್ರಿಕೆಟ್ ಮೈದಾನದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಪಂದ್ಯದಲ್ಲಿ ಕೊಹ್ಲಿ ಶತಕ ಬಾರಿಸಿದರೆ, ಟೆಸ್ಟ್‌ʼನಲ್ಲಿ ಅತಿ ಹೆಚ್ಚು ಶತಕ ಗಳಿಸಿದ ಡಾನ್ ಬ್ರಾಡ್‌ಮನ್‌ ದಾಖಲೆಯನ್ನು ಹಿಂದಿಕ್ಕಲಿದ್ದಾರೆ. ಇದನ್ನೂ ಓದಿ: ವಿರಾಟ್ ಕೊಹ್ಲಿ ಇದುವರೆಗೆ 113 ಪಂದ್ಯಗಳಲ್ಲಿ 29 ಟೆಸ್ಟ್ ಶತಕಗಳನ್ನು ಬಾರಿಸಿದ್ದಾರೆ. ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಶತಕ ಬಾರಿಸಿದ ತಕ್ಷಣ ಅವರು ಬ್ರಾಡ್ಮನ್ ಅವರನ್ನು ಮೀರಿಸುತ್ತಾರೆ. ಬ್ರಾಡ್ಮನ್ ತಮ್ಮ ಟೆಸ್ಟ್ ವೃತ್ತಿಜೀವನದಲ್ಲಿ 29 ಶತಕಗಳನ್ನು ಬಾರಿಸಿದ್ದಾರೆ. ಇನ್ನು 30ನೇ ಶತಕ ಸಿಡಿಸಿದ ತಕ್ಷಣ ಕೊಹ್ಲಿ ಶಿವನಾರಾಯಣ ಚಂದ್ರಪಾಲ್ ಮತ್ತು ಮ್ಯಾಥ್ಯೂ ಹೇಡನ್ ಅವರ ಟೆಸ್ಟ್ ಶತಕವನ್ನು ಸರಿಗಟ್ಟಲಿದ್ದಾರೆ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...