ಕುಸ್ತಿಪಟು ವಿನೇಶ್ ಫೋಗಟ್ ಶಾಕಿಂಗ್‌ ನಿರ್ಧಾರ... ಅನರ್ಹಗೊಂಡ ಬೆನ್ನಲ್ಲೇ ಕುಸ್ತಿಗೆ ಗುಡ್ ಬೈ! : ಕುಸ್ತಿಪಟು ವಿನೇಶ್ ಫೋಗಟ್ ಪ್ಯಾರಿಸ್ ಒಲಿಂಪಿಕ್ಸ್‌ನಿಂದ ಅನರ್ಹಗೊಂಡಿದ್ದಾರೆ. ಈ ಬೆನ್ನಲ್ಲೇ ಅವರ ಟ್ವೀಟ್ ವೈರಲ್‌ ಆಗಿದೆ. ಬೆಂಗಳೂರು:ಕೇವಲ 100 ಗ್ರಾಂ ಹೆಚ್ಚುವರಿ ತೂಕದ ಕಾರಣಕ್ಕಾಗಿ ಕುಸ್ತಿಪಟು ವಿನೇಶ್ ಫೋಗಟ್ ಪ್ಯಾರಿಸ್ ಒಲಿಂಪಿಕ್ಸ್‌ನಿಂದ ಅನರ್ಹಗೊಂಡಿದ್ದಾರೆ ಎಂದು ತಿಳಿದಿದೆ. ಅನೇಕ ಸೆಲೆಬ್ರಿಟಿಗಳು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡುವ ಮೂಲಕ ವಿನೇಶ್ ಫೋಗಟ್ ಬೆನ್ನಿಗೆ ನಿಂತಿದ್ದಾರೆ. ಒಲಿಂಪಿಕ್ಸ್‌ನಲ್ಲಿ ಅನರ್ಹಗೊಂಡಿದ್ದಕ್ಕಾಗಿ ವಿನೇಶ್ ಫೋಗಟ್ ಭಾವುಕರಾಗಿದ್ದರು. ಈ ಬೆನ್ನಲ್ಲೇ ವಿನೇಶ್ ಫೋಗಟ್ ಸಂಚಲನದ ನಿರ್ಧಾರ ಕೈಗೊಂಡಿದ್ದಾರೆ. ವಿನೇಶ್ ಫೋಗಟ್ ಕುಸ್ತಿಗೆ ನಿವೃತ್ತಿ ಘೋಷಿಸಿ ಟ್ವೀಟ್ ಮಾಡಿದ್ದಾರೆ. ವಿನೇಶ್ ಟ್ವೀಟ್ ಈಗ ದೇಶಾದ್ಯಂತ ಸಂಚಲನ ಮೂಡಿಸಿದೆ. 'ನನ್ನ ಧೈರ್ಯ ಮುರಿದುಹೋಗಿದೆ. ನನಗೆ ಹೋರಾಡುವ ಶಕ್ತಿ ಇಲ್ಲ. ಕುಸ್ತಿ ನನ್ನ ಮೇಲೆ ಗೆದ್ದಿತು. ನಾನು ಸೋತು ಹೋದೆ. ನನ್ನನ್ನು ಕ್ಷಮಿಸು. ನಿಮಗೆ ಎಂದೆಂದಿಗೂ ಋಣಿಯಾಗಿರುತ್ತೇನೆ' ಎಂದು ಟ್ವೀಟ್ ಮಾಡುವ ಮೂಲಕ ವಿನೇಶ್ ಫೋಗಟ್ ಕುಸ್ತಿಗೆ ನಿವೃತ್ತಿ ಘೋಷಿಸಿದ್ದಾರೆ. ಇದನ್ನೂ ಓದಿ: ಪ್ಯಾರಿಸ್ ಒಲಿಂಪಿಕ್ಸ್‌ನಿಂದ ಅನರ್ಹಗೊಂಡ ನಂತರ ಭಾರತದ ಕುಸ್ತಿಪಟು ವಿನೇಶ್ ಫೋಗಟ್ ತುಂಬಾ ನೋವಿನಲ್ಲಿದ್ದಾರೆ. ಅದಕ್ಕಾಗಿಯೇ ಅವರು ಕುಸ್ತಿಯಿಂದ ನಿವೃತ್ತಿ ಘೋಷಿಸಿದ್ದಾರೆ. ಬುಧವಾರ ಬೆಳಗ್ಗೆ ನಡೆದ ಮಹಿಳೆಯರ 50 ಕೆಜಿ ಫ್ರೀಸ್ಟೈಲ್ ಕುಸ್ತಿ ಸ್ಪರ್ಧೆಯಲ್ಲಿ 100 ಗ್ರಾಂ ಅಧಿಕ ತೂಕ ಹೊಂದಿದ್ದ ಕಾರಣ ವಿನೇಶ್ ಫೋಗಟ್ ಅವರನ್ನು ಪಂದ್ಯದಿಂದ ಹೊರಗಿಡಲಾಯಿತು. 2001ರಲ್ಲಿ ಕುಸ್ತಿಪಟುವಾಗಿ ಪದಾರ್ಪಣೆ ಮಾಡಿದ ವಿನೇಶ್ 29ನೇ ವಯಸ್ಸಿನಲ್ಲಿ ನಿವೃತ್ತಿ ಘೋಷಿಸಿದ್ದನ್ನು ಭಾರತೀಯರಿಗೆ ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಅವರು ಒಲಿಂಪಿಕ್ಸ್‌ನಿಂದ ಅನರ್ಹಗೊಂಡ ನಂತರ, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಸೆಲೆಬ್ರಿಟಿಗಳು ಆಕೆಯ ಧೈರ್ಯವನ್ನು ಶ್ಲಾಘಿಸಿ ಅನೇಕ ಪೋಸ್ಟ್‌ಗಳನ್ನು ಶೇರ್‌ ಮಾಡಿದ್ದಾರೆ. ಇದನ್ನೂ ಓದಿ: ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...