"ಬುಮ್ರಾ ಇಲ್ಲದೆ ಭಾರತದ ಬೌಲಿಂಗ್‌ ಶೂನ್ಯ"..ಶ್ರೀಲಂಕಾ ವಿರುದ್ಧ ಭಾರತ ಸೋಲುತ್ತಿದ್ದಂತೆ ಕೀಟಲೆ ಮಾಡಿದ ಪಾಕ್‌ ಆಟಗಾರ..! : 27 ವರ್ಷಗಳ ನಂತರ ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯನ್ನು ಭಾರತ ಕಳೆದುಕೊಂಡಿದೆ. ಈ ಸರಣಿಯಲ್ಲಿ ಮೊದಲ ಬಾರಿಗೆ ಕೋಚ್ ಆಗಿ ಅಧಿಕಾರ ವಹಿಸಿಕೊಂಡಿರುವ ಗಂಭೀರ್‌ಗೆ ಇದು ಭಾರೀ ಹಿನ್ನಡೆ ಅನುಭವಿಸಿದ್ದಾರೆ. ಅದರಲ್ಲೂ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಅವರಂತಹ ಆಟಗಾರರು ಈ ಸರಣಿಯಲ್ಲಿ ಆಡಿದರೂ ಕೂಡ ಸರಣಿ ಸೋತಿರುವುದಕ್ಕೆ ಭಾರಿ ಟೀಕೆಗಳು ವ್ಯಕ್ತವಾಗುತ್ತಿದೆ. :27 ವರ್ಷಗಳ ನಂತರ ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯನ್ನು ಭಾರತ ಕಳೆದುಕೊಂಡಿದೆ. ಈ ಸರಣಿಯಲ್ಲಿ ಮೊದಲ ಬಾರಿಗೆ ಕೋಚ್ ಆಗಿ ಅಧಿಕಾರ ವಹಿಸಿಕೊಂಡಿರುವ ಗಂಭೀರ್‌ಗೆ ಇದು ಭಾರೀ ಹಿನ್ನಡೆ ಅನುಭವಿಸಿದ್ದಾರೆ. ಅದರಲ್ಲೂ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಅವರಂತಹ ಆಟಗಾರರು ಈ ಸರಣಿಯಲ್ಲಿ ಆಡಿದರೂ ಕೂಡ ಸರಣಿ ಸೋತಿರುವುದಕ್ಕೆ ಭಾರಿ ಟೀಕೆಗಳು ವ್ಯಕ್ತವಾಗುತ್ತಿದೆ. ಈ ಸೋಲಿಗೆ ಕಾರಣ ಭಾರತ ಬೌಲಿಂಗ್‌ ಎಂದೇ ಹೇಳಬಹುದು. ಬೌಲಿಂಗ್‌ ಇರಲಿ ಬ್ಯಾಟಿಂಗ್‌ನಲ್ಲೂ ಟೀಂ ಇಂಡಿಯಾ ಆಟಗಾರರು ಉತ್ತಮ ಪ್ರದರ್ಶನ ನೀಡಲಿಲ್ಲ. ಒಂದೆಡೆ ಬುಧವಾರ ನಡೆದ ಪಂದ್ಯದಲ್ಲಿ ಮೊದಲಾರ್ಧದದಲ್ಲಿ ಸತತ ವಿಕೆಟ್‌ ಪಡೆದು ಅಬ್ಬರಿಸಿದ್ದ ಭಾರತದ ಬೌಲರ್‌ಗಳು ನಂತರ ಫೀಲ್ಡ್‌ಗೆ ಎಂಟ್ರಿ ಕೊಟ್ಟ ಮೂರು ಬ್ಯಾಟರ್‌ಗಳ ವಿಕೆಟ್‌ ಪಡೆಯುವಲ್ಲಿ ವಿಫಲರಾದರು. ಅದೇ ರೀತಿ ರೋಹಿತ್ ಶರ್ಮಾ ಹೊರತುಪಡಿಸಿ ಯಾವುದೇ ಆಟಗಾರರು ಬ್ಯಾಟಿಂಗ್ ನಲ್ಲಿ ಉತ್ತಮ ಪ್ರದರ್ಶನ ನೀಡಲಿಲ್ಲ. ಇದನ್ನೂ ಓದಿ: ಇದು ಇಡೀ ಭಾರತೀಯ ಅಭಿಮಾನಿಗಳನ್ನು ಬೆಚ್ಚಿ ಬೀಳಿಸಿದೆ. ಹೀಗಿರುವಾಗ ಪಾಕಿಸ್ತಾನದ ವೇಗದ ಬೌಲರ್ ಜುನೈದ್ ಖಾನ್ ಟೀಂ ಇಂಡಿಯಾದ ಕುರಿತು ಲೇವಡಿ ಮಾಡಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು, ಬುಮ್ರಾ ಇಲ್ಲದೆ ಭಾರತ ತಂಡದ ಬೌಲಿಂಗ್ ಶೂನ್ಯವಾಗಿದೆ ಎಂದು ವ್ಯಂಗ್ಯ ಮಾಡಿದ್ದಾರೆ. ಕೇವಲ ಪಾಕಿಸ್ತಾನದ ವೇಗದ ಬೌಲರ್ ಜುನೈದ್ ಖಾನ್ ಅಷ್ಟೇ ಅಲ್ಲ, ಬುಮ್ರಾ ಅವರಂತಹ ಆಟಗಾರರಿಲ್ಲದೆ ಭಾರತ ಸಂಕಷ್ಟದಲ್ಲಿದೆ ಎಂದು ಹಲವರು ಅಭಿಪ್ರಾಯಪಟ್ಟಿದ್ದಾರೆ. ಕಳೆದ ಟಿ20 ವಿಶ್ವಕಪ್‌ನಲ್ಲಿ ಬುಮ್ರಾ 15 ವಿಕೆಟ್‌ಗಳನ್ನು ಕಬಳಿಸಿದ್ದರು. ಅವರ ಸ್ಥಾನದಲ್ಲಿ ಮುಹಮ್ಮದ್ ಸಿರಾಜ್ ಮತ್ತು ಅರ್ದೀಪ್ ಸಿಂಗ್ ಈ ಸರಣಿಯಲ್ಲಿ ಆಡಿದರು. ಮೂರನೇ ಏಕದಿನ ಪಂದ್ಯದಲ್ಲಿ ಅರ್ದೀಪ್ ಸಿಂಗ್ ಕಾಣಿಸಿಕೊಂಡಿರಲಿಲ್ಲ. ಭಾರತ ತಂಡ ಪ್ಲೇಯಿಂಗ್ ಇಲೆವೆನ್ ಆಯ್ಕೆ ಮಾಡಿಕೊಂಡಿದ್ದೇ ಸೋಲಿಗೆ ಕಾರಣ ಎಂದು ಹಲವರು ಗಂಭೀರ್ ಅವರನ್ನು ಟೀಕಿಸುತ್ತಿದ್ದಾರೆ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...