2024: ಮಹಿಳೆಯರ 50 ಕೆಜಿ ವಿಭಾಗದಲ್ಲಿ ಹೊಸ ಇತಿಹಾಸ ನಿರ್ಮಿಸಿದ ವಿನೇಶ್ ಫೋಗಟ್ ಭಾರತದ ಅನುಭವಿ ಕುಸ್ತಿಪಟು ವಿನೇಶ್ ಫೋಗಟ್ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಕುಸ್ತಿಯ ಫೈನಲ್‌ಗೆ ತಲುಪುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ. ಪ್ಯಾರಿಸ್:ಭಾರತದ ಅನುಭವಿ ಕುಸ್ತಿಪಟು ವಿನೇಶ್ ಫೋಗಟ್ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಫೈನಲ್‌ ತಲುಪುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ. ಮಹಿಳೆಯರ 50 ಕೆಜಿ ವಿಭಾಗದ ಸೆಮಿಫೈನಲ್‌ನಲ್ಲಿ ವಿನೇಶ್ ಕ್ಯೂಬಾದ ಉಸ್ನೆಲಿಸ್ ಗುಜ್ಮನ್ ಲೋಪೆಜ್ ಅವರನ್ನು 5-0 ಅಂತರದಿಂದ ಸೋಲಿಸುವ ಮೂಲಕ ಕುಸ್ತಿಯಲ್ಲಿ ಫೈನಲ್ ತಲುಪಿದ ಭಾರತದ ಮೊದಲ ಮಹಿಳಾ ಆಟಗಾರ್ತಿ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇದನ್ನೂ ಓದಿ: ವಿನೇಶ್ ಫೈನಲ್ ತಲುಪುವುದರೊಂದಿಗೆ ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಭಾರತಕ್ಕೆ ನಾಲ್ಕನೇ ಪದಕ ಖಚಿತವಾಗಿದೆ.ಶೂಟಿಂಗ್‌ನಲ್ಲಿ ಈ ಹಿಂದೆ ದೇಶ 3 ಪದಕ ಗೆದ್ದಿತ್ತು. ಶೂಟರ್ ಮನು ಭಾಕರ್ ಮಹಿಳೆಯರ 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಕಂಚು ಗಗೆದಿದ್ದರು. ಇದರ ನಂತರ, ಅವರು ಸರಬ್ಜೋತ್ ಸಿಂಗ್ ಅವರೊಂದಿಗೆ 10 ಮೀಟರ್ ಏರ್ ಪಿಸ್ತೂಲ್ ಮಿಶ್ರ ತಂಡ ಸ್ಪರ್ಧೆಯಲ್ಲಿ ಕಂಚು ಗೆದ್ದರು. ಇನ್ನೊಂದೆಡೆಗೆ ಪುರುಷರ 50 ಮೀಟರ್ ರೈಫಲ್ ನಲ್ಲಿ ಸ್ವಪ್ನಿಲ್ ಕುಸಾಲೆ ಕಂಚು ಗೆದ್ದರು. ಇದಕ್ಕೂ ಮುನ್ನ ವಿನೇಶ್ ಫೋಗಟ್ ಕ್ವಾರ್ಟರ್ ಫೈನಲ್‌ನಲ್ಲಿ ಅದ್ಭುತ ಗೆಲುವು ಸಾಧಿಸಿದ್ದರು. ಅವರು ಉಕ್ರೇನ್‌ನ ಒಸ್ಕಾನಾ ಲಿವಾಚ್ ಅವರನ್ನು 7-5 ರಿಂದ ಸೋಲಿಸಿದರು. ವಿನೇಶ್ ಪ್ರೀ ಕ್ವಾರ್ಟರ್ ಫೈನಲ್‌ನಲ್ಲಿ ಹಾಲಿ ಚಾಂಪಿಯನ್ ಜಪಾನ್‌ನ ಸುಸೈ ಯುಯಿ ಅವರನ್ನು ಸೋಲಿಸಿದ್ದರು. ಈಗ ವಿನೇಶ್ ಇದೆ ಮೊದಲ ಬಾರಿಗೆ ಒಲಿಂಪಿಕ್ ಗೇಮ್ಸ್‌ನಲ್ಲಿ ಸೆಮಿಫೈನಲ್ ತಲುಪಿದ್ದಾರೆ. ಇದಕ್ಕೂ ಮುನ್ನ ಅವರು 2016 ಮತ್ತು 2020ರ ಒಲಿಂಪಿಕ್ಸ್‌ನ ಕ್ವಾರ್ಟರ್ ಫೈನಲ್‌ನಲ್ಲಿ ಸೋತಿದ್ದರು. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...