2024: ಜಾವೆಲಿನ್ ಥ್ರೋದಲ್ಲಿ ಫೈನಲ್ ಗೆ ಎಂಟ್ರಿ ಕೊಟ್ಟ ನೀರಜ್ ಚೋಪ್ರಾ..! ಭಾರತದ 'ಗೋಲ್ಡನ್ ಬಾಯ್' ನೀರಜ್ ಚೋಪ್ರಾ ಮಂಗಳವಾರ ಪ್ಯಾರಿಸ್ ಒಲಿಂಪಿಕ್ಸ್ 2024 ರಲ್ಲಿ ಪುರುಷರ ಜಾವೆಲಿನ್ ಥ್ರೋ ಸ್ಪರ್ಧೆಯ ಫೈನಲ್ ಪ್ರವೇಶಿಸಿದ್ದಾರೆ. ಪ್ಯಾರಿಸ್:ಭಾರತದ 'ಗೋಲ್ಡನ್ ಬಾಯ್' ನೀರಜ್ ಚೋಪ್ರಾ ಮಂಗಳವಾರ ಪ್ಯಾರಿಸ್ ಒಲಿಂಪಿಕ್ಸ್ 2024 ರಲ್ಲಿ ಪುರುಷರ ಜಾವೆಲಿನ್ ಥ್ರೋ ಸ್ಪರ್ಧೆಯ ಫೈನಲ್ ಪ್ರವೇಶಿಸಿದ್ದಾರೆ. ಮಂಗಳವಾರ ನಡೆದ ಬಿ ಗುಂಪಿನ ಅರ್ಹತಾ ಸುತ್ತಿನಲ್ಲಿ, ಚೋಪ್ರಾ ಅವರು 89.34 ಮೀಟರ್‌ಗಳಷ್ಟು ದೂರದಲ್ಲಿ ಜಾವೆಲಿನ್ ಎಸೆಯುವ ಮೂಲಕ ಮೊದಲ ಯತ್ನದಲ್ಲಿಯೇ ಫೈನಲ್ ಗೆ ಎಂಟ್ರಿ ಕೊಟ್ಟಿದ್ದಾರೆ. 🔥🔥🔥 89.34m 1st — India_AllSports (@India_AllSports) ಇನ್ನೊಂದೆಡೆಗೆ ಭಾರತದ ಇನ್ನೊಬ್ಬ ಆಟಗಾರ ಕಿಶೋರ್ ಜೇನಾ ಇದೆ ಮೊದಲ ಬಾರಿಗೆ ಒಲಂಪಿಕ್ಸ್ ನಲ್ಲಿ ಸ್ಪರ್ಧಿಸಿದ್ದರು,ಆದರೆ ಅವರು ಫೈನಲ್ ಗೆ ಎಂಟ್ರಿ ಕೊಡುವಲ್ಲಿ ವಿಫಲರಾದರು. ಇನ್ನೊಂದೆಡೆಗೆ ಪಾಕಿಸ್ತಾನದ ನದೀಮ್ 86.59 ಅಂತರದಲ್ಲಿ ಜಾವೆಲಿನ್ ಎಸೆಯುವ ಮೂಲಕ ಅವರು ಸಹ ಫೈನಲ್ ಗೆ ಎಂಟ್ರಿಕೊಟ್ಟಿದ್ದಾರೆ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...