ಶ್ರೀಲಂಕಾ ವಿರುದ್ಧದ 2ನೇ ODIಗೆ ಟೀಂ ಇಂಡಿಯಾದ ಪ್ರಮುಖ ಮ್ಯಾಚ್ ವಿನ್ನರ್ ಎಂಟ್ರಿ! ರೋಹಿತ್‌ ಶರ್ಮಾ ನಂಬಿಕಸ್ಥನಿಗೆ ಸಿಗಲಿದೆ ಚಾನ್ಸ್ ಈಗ ಎರಡನೇ ಪಂದ್ಯ ಆಗಸ್ಟ್ 4 ರಂದು ಅಂದರೆ ನಾಳೆ ನಡೆಯಲಿದೆ. ಈ ಪಂದ್ಯದಲ್ಲಿ ರೋಹಿತ್ ಶರ್ಮಾ ಭಾರತ ತಂಡದಲ್ಲಿ ದೊಡ್ಡ ಬದಲಾವಣೆ ಮಾಡುವ ಸಾಧ್ಯತೆ ಇದೆ. ಅಷ್ಟೇ ಅಲ್ಲದೆ, ಹಿಂದಿನ ಪಂದ್ಯದಲ್ಲಿ ಕಣಕ್ಕಿಳಿಯದ ಅತಿ ದೊಡ್ಡ ಮ್ಯಾಚ್ ವಿನ್ನರ್ ತಂಡಕ್ಕೆ ಪ್ರವೇಶ ಪಡೆಯುವ ಎಲ್ಲಾ ಸಾಧ್ಯತೆಗಳಿವೆ. :ಭಾರತ ಮತ್ತು ಶ್ರೀಲಂಕಾ ನಡುವೆ ನಡೆಯುತ್ತಿರುವ ಮೂರು ಪಂದ್ಯಗಳ ಸರಣಿಯ ಮೊದಲ ಪಂದ್ಯ ಟೈ ಆಗಿತ್ತು. ಈ ಪಂದ್ಯದಲ್ಲಿ ಶ್ರೀಲಂಕಾ ಭಾರತಕ್ಕೆ ಗೆಲ್ಲಲು 231 ರನ್‌ಗಳ ಗುರಿ ನೀಡಿತು. ಆದರೆ ಭಾರತ ತಂಡ 230 ರನ್‌ʼಗಳಿಗೆ ಆಲೌಟ್ ಆಗುವ ಮೂಲಕ ರೋಚಕ ಟೈನಲ್ಲಿ ಕೊನೆಗೊಂಡಿತು. ಇದನ್ನೂ ಓದಿ: ಈಗ ಎರಡನೇ ಪಂದ್ಯ ಆಗಸ್ಟ್ 4 ರಂದು ಅಂದರೆ ನಾಳೆ ನಡೆಯಲಿದೆ. ಈ ಪಂದ್ಯದಲ್ಲಿ ರೋಹಿತ್ ಶರ್ಮಾ ಭಾರತ ತಂಡದಲ್ಲಿ ದೊಡ್ಡ ಬದಲಾವಣೆ ಮಾಡುವ ಸಾಧ್ಯತೆ ಇದೆ. ಅಷ್ಟೇ ಅಲ್ಲದೆ, ಹಿಂದಿನ ಪಂದ್ಯದಲ್ಲಿ ಕಣಕ್ಕಿಳಿಯದ ಅತಿ ದೊಡ್ಡ ಮ್ಯಾಚ್ ವಿನ್ನರ್ ತಂಡಕ್ಕೆ ಪ್ರವೇಶ ಪಡೆಯುವ ಎಲ್ಲಾ ಸಾಧ್ಯತೆಗಳಿವೆ. ಎರಡನೇ ಏಕದಿನ ಪಂದ್ಯಕ್ಕೆ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ರಿಷಬ್ ಪಂತ್ ಎಂಟ್ರಿಯಾಗುವ ಎಲ್ಲಾ ಸಾಧ್ಯತೆಗಳಿವೆ. ಮೊದಲ ಏಕದಿನ ಪಂದ್ಯದಲ್ಲಿ ರಿಷಬ್ ಪಂತ್ ಹೊರಗುಳಿದಿದ್ದರು. ಇದಕ್ಕೂ ಮುನ್ನ ಪಂತ್ ಶ್ರೀಲಂಕಾ ವಿರುದ್ಧದ ಟಿ20 ಸರಣಿಯಲ್ಲಿ ತಂಡದ ಭಾಗವಾಗಿದ್ದರು. ಸರಣಿ ಗೆಲ್ಲಬೇಕಾದರೆ ಭಾರತ ಎರಡನೇ ಪಂದ್ಯವನ್ನು ಹೇಗಾದರೂ ಗೆಲ್ಲಲೇಬೇಕು. ಇದನ್ನೂ ಓದಿ: ಇನ್ನೊಂದೆಡೆ ಎರಡನೇ ಏಕದಿನ ಪಂದ್ಯದಲ್ಲಿ ಆಲ್ ರೌಂಡರ್ ಶಿವಂ ದುಬೆ ಹೊರಗುಳಿಯುವ ಸಾಧ್ಯತೆ ಇದೆ. ಮೊದಲ ಏಕದಿನ ಪಂದ್ಯದಲ್ಲಿ ದುಬೆ 4 ಓವರ್‌ʼಗಳಲ್ಲಿ 19 ರನ್ ನೀಡಿ 1 ವಿಕೆಟ್ ಪಡೆದಿದ್ದರು. ಇನ್ನು ಬ್ಯಾಟಿಂಗ್ʼನಲ್ಲಿ 24 ಎಸೆತಗಳಲ್ಲಿ 2 ಸಿಕ್ಸರ್ ಮತ್ತು 1 ಬೌಂಡರಿ ಒಳಗೊಂಡ 25 ರನ್ ಗಳಿಸಿದ್ದರು. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...