ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ರೋಹಿತ್ ಶರ್ಮಾ ವಿಶ್ವದಾಖಲೆ! ಮಾರ್ಗನ್, ಧೋನಿ ದಾಖಲೆಗಳೆಲ್ಲಾ ಪುಡಿಗಟ್ಟಿದ ಹಿಟ್‌ ಮ್ಯಾನ್ : ರೋಹಿತ್ ಶರ್ಮಾ ಅಂತರಾಷ್ಟ್ರೀಯ ಕ್ರಿಕೆಟ್‌ʼನಲ್ಲಿ ಅತಿ ಹೆಚ್ಚು ಸಿಕ್ಸರ್‌ʼಗಳನ್ನು ಬಾರಿಸಿದ ಬ್ಯಾಟ್ಸ್‌ಮನ್ ಮಾತ್ರವಲ್ಲ, ಈಗ ನಾಯಕನಾಗಿ, ಅಂತರರಾಷ್ಟ್ರೀಯ ಕ್ರಿಕೆಟ್‌ʼನಲ್ಲಿ ಅತಿ ಹೆಚ್ಚು ಸಿಕ್ಸರ್‌ʼಗಳನ್ನು ಬಾರಿಸಿದ ಬ್ಯಾಟ್ಸ್‌ಮನ್ ಎಂದೆನಿಸಿಕೊಂಡಿದ್ದಾರೆ. : ಶ್ರೀಲಂಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತದ ನಾಯಕ ರೋಹಿತ್ ಶರ್ಮಾ ಅದ್ಭುತ ಬ್ಯಾಟಿಂಗ್ ಮಾಡಿ ಅರ್ಧಶತಕ ಗಳಿಸಿದ್ದಾರೆ. ಈ ಇನ್ನಿಂಗ್ಸ್ ಮೂಲಕ ವಿಶ್ವ ದಾಖಲೆಯನ್ನೇ ಹಿಟ್‌ ಮ್ಯಾನ್‌ ಬರೆದಿದ್ದಾರೆ. ಅಮೋಘ ಸಾಧನೆಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಪ್ರಶಂಸೆ ವ್ಯಕ್ತವಾಗುತ್ತಿದೆ. ಇದನ್ನೂ ಓದಿ: ರೋಹಿತ್ ಶರ್ಮಾ ಅಂತರಾಷ್ಟ್ರೀಯ ಕ್ರಿಕೆಟ್‌ʼನಲ್ಲಿ ಅತಿ ಹೆಚ್ಚು ಸಿಕ್ಸರ್‌ʼಗಳನ್ನು ಬಾರಿಸಿದ ಬ್ಯಾಟ್ಸ್‌ಮನ್ ಮಾತ್ರವಲ್ಲ, ಈಗ ನಾಯಕನಾಗಿ, ಅಂತರರಾಷ್ಟ್ರೀಯ ಕ್ರಿಕೆಟ್‌ʼನಲ್ಲಿ ಅತಿ ಹೆಚ್ಚು ಸಿಕ್ಸರ್‌ʼಗಳನ್ನು ಬಾರಿಸಿದ ಬ್ಯಾಟ್ಸ್‌ಮನ್ ಎಂದೆನಿಸಿಕೊಂಡಿದ್ದಾರೆ. ಈ ಪಂದ್ಯಕ್ಕೂ ಮುನ್ನ ನಾಯಕನಾಗಿ 231 ಸಿಕ್ಸರ್‌ʼಗಳನ್ನು ಬಾರಿಸಿದ್ದರು. ಇದೀಗ ಈ ಪಂದ್ಯದಲ್ಲಿ ಮೂರು ಸಿಕ್ಸರ್‌ ಹೊಡೆಯುವ ಮೂಲಕ ಮಾಜಿ ಇಂಗ್ಲೆಂಡ್ ಕ್ರಿಕೆಟಿಗ ಇಯಾನ್ ಮಾರ್ಗನ್ (233) ಅವರನ್ನು ಹಿಂದಿಕ್ಕಿ ವಿಶ್ವದಲ್ಲಿ ಅತಿ ಹೆಚ್ಚು ಸಿಕ್ಸರ್‌ ಗಳಿಸಿದ ನಾಯಕ (234) ಎನಿಸಿಕೊಂಡಿದ್ದಾರೆ. ರೋಹಿತ್ ಶರ್ಮಾ 8 ತಿಂಗಳ ನಂತರ ಈ ಏಕದಿನ ಪಂದ್ಯವನ್ನಾಡಿದ್ದಾರೆ. ಈ ಪಂದ್ಯಕ್ಕೂ ಮೊದಲು, ರೋಹಿತ್ ಶರ್ಮಾ ನವೆಂಬರ್ 2023 ರಲ್ಲಿ ವಿಶ್ವಕಪ್ ಫೈನಲ್ ಪಂದ್ಯವನ್ನು ಆಡಿದ್ದರು. ಇದಾದ ನಂತರ ಅವರು ಈ ಸ್ವರೂಪದಲ್ಲಿ ಆಡಿರಲಿಲ್ಲ. ಇನ್ನು ರೋಹಿತ್ ನಾಯಕತ್ವದಲ್ಲಿ ಟೀಮ್ ಇಂಡಿಯಾ ಬಾರ್ಬಡೋಸ್‌‌ʼನಲ್ಲಿ ಟಿ20 ವಿಶ್ವಕಪ್ ಗೆದ್ದುಕೊಂಡಿತ್ತು. ಇದನ್ನೂ ಓದಿ: ರೋಹಿತ್ ಶರ್ಮಾ 8 ತಿಂಗಳ ನಂತರ ಏಕದಿನದಲ್ಲಿ ಅದ್ಭುತ ಪುನರಾಗಮನ ಮಾಡಿದ್ದು, ಶ್ರೀಲಂಕಾ ವಿರುದ್ಧದ ಈ ಪಂದ್ಯದಲ್ಲಿ, 7 ಬೌಂಡರಿ ಮತ್ತು 3 ಸಿಕ್ಸರ್‌ʼಗಳನ್ನು ಒಳಗೊಂಡ 58 ರನ್‌ʼಗಳ ಇನ್ನಿಂಗ್ಸ್‌ ಆಡಿದ್ದಾರೆ ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...