: ಶೂಟಿಂಗ್‌ʼನಲ್ಲಿ ಭಾರತಕ್ಕೆ ಮತ್ತೊಂದು ಪದಕ: ಕಂಚು ಗೆದ್ದು ಇತಿಹಾಸ ನಿರ್ಮಿಸಿದ ಮನು ಭಾಕರ್-ಸರಬ್ಜೋತ್‌ ಸಿಂಗ್ 2024: ಪ್ಯಾರಿಸ್ ಒಲಿಂಪಿಕ್ಸ್‌ʼನಲ್ಲಿ ಮನು ಭಾಕರ್ ಇತಿಹಾಸ ನಿರ್ಮಿಸಿದ್ದಾರೆ. ಒಂದೇ ಒಲಿಂಪಿಕ್ಸ್‌ನಲ್ಲಿ ಎರಡು ಪದಕಗಳನ್ನು ಗೆದ್ದ ಮೊದಲ ಭಾರತೀಯ ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. 10 ಮೀಟರ್ ಏರ್ ಪಿಸ್ತೂಲ್ ಮಿಶ್ರ ತಂಡ ಸ್ಪರ್ಧೆಯ ಕಂಚಿನ ಪದಕದ ಪಂದ್ಯದಲ್ಲಿ ಮನು ಮತ್ತು ಸರಬ್ಜೋತ್ ಕೊರಿಯಾ ಜೋಡಿಯನ್ನು 16-10 ರಿಂದ ಸೋಲಿಸಿದರು. 2024, : ಒಲಿಂಪಿಕ್ಸ್‌ʼನಲ್ಲಿ 2ನೇ ಪದಕ ಭಾರತದ ಮುಡಿಗೇರಿದೆ. ಈ ಹಿಂದೆ ಕಂಚು ಗೆದ್ದಿದ್ದ ಮನು ಭಾಕರ್ ಮತ್ತು ಸರಬ್ಜೋತ್ ಸಿಂಗ್‌ ಭಾರತಕ್ಕೆ ಮತ್ತೊಂದು ಕಂಚಿನ ಪದಕವನ್ನು ತಂದುಕೊಟ್ಟಿದ್ದಾರೆ. ಇದನ್ನೂ ಓದಿ: ಇನ್ನು ಪ್ಯಾರಿಸ್ ಒಲಿಂಪಿಕ್ಸ್‌ʼನಲ್ಲಿ ಮನು ಭಾಕರ್ ಇತಿಹಾಸ ನಿರ್ಮಿಸಿದ್ದಾರೆ. ಒಂದೇ ಒಲಿಂಪಿಕ್ಸ್‌ನಲ್ಲಿ ಎರಡು ಪದಕಗಳನ್ನು ಗೆದ್ದ ಮೊದಲ ಭಾರತೀಯ ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. 10 ಮೀಟರ್ ಏರ್ ಪಿಸ್ತೂಲ್ ಮಿಶ್ರ ತಂಡ ಸ್ಪರ್ಧೆಯ ಕಂಚಿನ ಪದಕದ ಪಂದ್ಯದಲ್ಲಿ ಮನು ಮತ್ತು ಸರಬ್ಜೋತ್ ಕೊರಿಯಾ ಜೋಡಿಯನ್ನು 16-10 ರಿಂದ ಸೋಲಿಸಿದರು. ಇದನ್ನೂ ಓದಿ: ಇದಕ್ಕೂ ಮೊದಲು ಜುಲೈ 28 ರಂದು ಪ್ಯಾರಿಸ್ ಒಲಿಂಪಿಕ್ಸ್‌ʼನಲ್ಲಿ 10 ಮೀಟರ್ ಏರ್ ಪಿಸ್ತೂಲ್ ಸಿಂಗಲ್ಸ್ ಸ್ಪರ್ಧೆಯಲ್ಲಿ ಮನು ಭಾಕರ್ ಕಂಚಿನ ಪದಕವನ್ನು ಗೆದ್ದಿದ್ದರು. ಪ್ಯಾರಿಸ್‌ʼನಲ್ಲಿ ಮೊದಲ ಕಂಚು ಜಯಿಸುವುದರೊಂದಿಗೆ ಮನು ಪದಕ ಪಟ್ಟಿಯಲ್ಲಿ ಭಾರತದ ಖಾತೆ ತೆರೆದಿದ್ದು, ಇದೀಗ, ಮನು ಭಾಕರ್ ಮತ್ತೊಂದು ಕಂಚು ಗೆಲ್ಲುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...